ವಡಗೇರಾ: ‘ದೇವರ ಹೆಸರಿನಲ್ಲಿ ಪ್ರಾಣಿ ಬಲಿ ಕೊಡುವಂತ ಮೌಢ್ಯಗಳಿಂದ ದೂರವಿದ್ದು, ಮಕ್ಕಳಿಗೆ ಉನ್ನತ ಶಿಕ್ಷಣ ಕೊಡುವ ಕೆಲಸವನ್ನು ಪಾಲಕರು ಮಾಡಬೇಕು’ ಎಂದು ಅಖಿಲ ಭಾರತೀಯ ಕೋಲಿ ಸಮಾಜ ರಾಜ್ಯ ಸಂಘಟನಾ ಕಾರ್ಯದರ್ಶಿ ಉಮೇಶ ಕೆ ಮುದ್ನಾಳ ಹೇಳಿದರು.

ತಾಲ್ಲೂಕಿನ ಮಾಚನೂರ ಗ್ರಾಮದಲ್ಲಿ ನಿರ್ಮಾಣವಾಗುತ್ತಿರುವ ನಿಜಶರಣ ಅಂಬಿಗರ ಚೌಡಯ್ಯನವರ ಗದ್ದುಗೆ ಮತ್ತು ಗೋಪುರ ನಿರ್ಮಾಣ ಸ್ಥಳಕ್ಕೆ ಭೇಟಿ ನೀಡಿದ ನಂತರ ಅವರು ಮಾತನಾಡಿದರು.

ಸಮಾಜದ ಅಭಿವೃದ್ಧಿಗಾಗಿ ಪ್ರತಿಯೊಬ್ಬರಿಗೂ ಶಿಕ್ಷಣ ಅವಶ್ಯಕವಾಗಿದ್ದು, ಮಕ್ಕಳಿಗೆ ಉನ್ನತ ಶಿಕ್ಷಣ ಕೊಡಿಸಲು ಪೋಷಕರು ಮುಂದಾಗಬೇಕು ಇದರಿಂದ ಮಕ್ಕಳ ಭವಿಷ್ಯದ ಜತೆಗೆ ಸಮಾಜದ ಅಭಿವೃದ್ಧಿಯೂ ಆಗುತ್ತದೆ ಎಂದು ಹೇಳಿದರು.

ಈ ಸಂದರ್ಭದಲ್ಲಿ ವಿರುಪಾಕ್ಷಗೌಡ, ಭೀಮಾಶಂಕರ, ಮಲ್ಲಪ್ಪ, ಜಗದೀಶ, ಮಾನಪ್ಪ, ರವಿ, ಭಾಗಣ್ಣ, ಹಣಮಂತ, ಪವನ, ಭೀಮರಾಯ, ಸಿದ್ದಪ್ಪ, ಬಸಪ್ಪ, ಬನ್ನಪ್ಪ, ಭೀಮರಡ್ಡಿ, ಮಲ್ಲಪ್ಪ, ಶಿವಪ್ಪ, ಬೆನಕಪ್ಪ, ಮೋನಪ್ಪ, ಭೀಮಪ್ಪ, ಬಸಪ್ಪ, ಸಿದ್ದಪ್ಪ, ಸಾಬರೆಡ್ಡಿ, ಮಲ್ಲಪ್ಪ ಸೇರಿದಂತೆ ಇನ್ನಿತರರು ಹಾಜರಿದ್ದರು.

ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ
260324-30-455763369

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.