ಸ್ಪರ್ಧಾತ್ಮಕ ಪರೀಕ್ಷೆಗಳ ತರಬೇತಿಗೆ 13,440 ಅಭ್ಯರ್ಥಿಗಳು

7
ಕಲಬುರ್ಗಿಯ 27 ಕೇಂದ್ರಗಳಲ್ಲಿ ನಾಳೆ ಪ್ರವೇಶ ಪರೀಕ್ಷೆ

ಸ್ಪರ್ಧಾತ್ಮಕ ಪರೀಕ್ಷೆಗಳ ತರಬೇತಿಗೆ 13,440 ಅಭ್ಯರ್ಥಿಗಳು

Published:
Updated:
ಕಲಬುರ್ಗಿಯಲ್ಲಿ ಕರ್ನಾಟಕ ಪರೀಕ್ಷಾ ಪ್ರಾಧಿಕಾರದ ಪರೀಕ್ಷೆಯ ಸಿದ್ಧತೆ ಕುರಿತು ಶಿಷ್ಟಾಚಾರ ತಹಶೀಲ್ದಾರ್‌ ಪ್ರಕಾಶ ಚಿಂಚೋಳಿಕರು ಸಭೆ ನಡೆಸಿದರು. ಪದವಿಪೂರ್ವ ಶಿಕ್ಷಣ ಇಲಾಖೆಯ ಉಪನಿರ್ದೇಶಕ ಬಸವರಾಜ ಡಿ. ಕಲಬುರಗಿ ಇದ್ದರು

ಕಲಬುರ್ಗಿ: ಯುಪಿಎಸ್‌ಸಿ, ಕೆಎಎಸ್‌, ಎಸ್‌ಎಸ್‌ಸಿ ಮತ್ತು ಬ್ಯಾಂಕಿಂಗ್‌ ಹುದ್ದೆಗಳ ಸ್ಪರ್ಧಾತ್ಮಕ ಪರೀಕ್ಷೆಗಳಿಗೆ ಅಣಿಗೊಳಿಸಲು ವಿವಿಧ ಇಲಾಖೆಗಳು ನಡೆಸಲಿರುವ ತರಬೇತಿಗೆ ಜಿಲ್ಲೆಯ 13,440 ಅಭ್ಯರ್ಥಿಗಳು ಅರ್ಜಿ ಸಲ್ಲಿಸಿದ್ದಾರೆ. ಈ ತರಬೇತಿಗೆ ಅಭ್ಯರ್ಥಿಗಳನ್ನು ಆಯ್ಕೆ ಮಾಡಲು ಕರ್ನಾಟಕ ಪರೀಕ್ಷಾ ಪ್ರಾಧಿಕಾರವು ಸಿಇಟಿ ಮಾದರಿಯಲ್ಲಿ ಜುಲೈ 1ರಂದು ನಗರದ 27 ಪರೀಕ್ಷಾ ಕೇಂದ್ರಗಳಲ್ಲಿ ಪರೀಕ್ಷೆ ನಡೆಸಲಿದೆ. 

ಅಂದು ಬೆಳಿಗ್ಗೆ 10.30ರಿಂದ ಮಧ್ಯಾಹ್ನ 12.30ರ ವರೆಗೆ ಯುಪಿಎಸ್‍ಸಿ/ಕೆಎಎಸ್ ಹಾಗೂ ಮಧ್ಯಾಹ್ನ 2.30 ರಿಂದ ಸಂಜೆ 4.30 ಗಂಟೆಯವರೆಗೆ ಎಸ್‌ಎಸ್‌ಸಿ, ಬ್ಯಾಂಕಿಂಗ್ ಸಂಬಂಧಿತ ಪರೀಕ್ಷೆ ನಡೆಯಲಿದೆ. ಶುಕ್ರವಾರ ಇಲ್ಲಿ ಈ ಪರೀಕ್ಷೆಯ ಪೂರ್ವಸಿದ್ಧತಾ ಸಭೆ ನಡೆಸಿದ ಶಿಷ್ಟಾಚಾರ ತಹಶೀಲ್ದಾರ್‌ ಪ್ರಕಾಶ ಚಿಂಚೋಳಿಕರ, ಪರೀಕ್ಷೆ ಸುಸೂತ್ರವಾಗಿ ನಡೆಸಲು ಕ್ರಮಕೈಗೊಳ್ಳುವಂತೆ ಅಧಿಕಾರಿಗಳಿಗೆ ಸೂಚಿಸಿದರು.

ಪರೀಕ್ಷಾ ಕೇಂದ್ರಗಳಿಗೆ ವೀಕ್ಷಕರು, ಉಪ ಮುಖ್ಯ ಅಧೀಕ್ಷಕರು ಹಾಗೂ ಇತರೆ ಸಿಬ್ಬಂದಿಯನ್ನು ಜಿಲ್ಲಾಧಿಕಾರಿ ನೇಮಿಸಿದ್ದಾರೆ. ಪ್ರಶ್ನೆಪತ್ರಿಕೆಗಳನ್ನು ಪರೀಕ್ಷಾ ಕೇಂದ್ರಗಳಿಗೆ ತೆಗೆದುಕೊಂಡು ಹೋಗಲು ಮಾರ್ಗಾಧಿಕಾರಿಗಳನ್ನು ಸಹ ನೇಮಿಸಲಾಗಿದೆ. ಪರೀಕ್ಷಾ ಕೇಂದ್ರದಲ್ಲಿ ಆಸನ, ಕುಡಿಯುವ ನೀರಿನ ವ್ಯವಸ್ಥೆ ಮಾಡಬೇಕು. ಲೋಪ ಆದರೆ ಸಂಬಂಧಪಟ್ಟವರನ್ನು ಹೊಣೆಗಾರರನ್ನಾಗಿ ಮಾಡಿ ಕ್ರಮ ಕೈಗೊಳ್ಳಲಾಗುವುದು ಎಂದರು.

ಪರೀಕ್ಷಾ ಕೇಂದ್ರಗಳ ಸುತ್ತಮುತ್ತಲಿನ 200 ಮೀಟರ್ ಪ್ರದೇಶದಲ್ಲಿ ನಿಯೋಜಿತ ಅಧಿಕಾರಿ, ಸಿಬ್ಬಂದಿ, ಪರೀಕ್ಷಾರ್ಥಿಗಳನ್ನು ಹೊರತುಪಡಿಸಿ ಇತರೆ ವ್ಯಕ್ತಿಗಳ ಪ್ರವೇಶವನ್ನು ನಿಷೇಧಿಸಲಾಗಿದೆ. ಪರೀಕ್ಷಾ ಸಮಯದಲ್ಲಿ ಪರೀಕ್ಷಾ ಕೇಂದ್ರದ ಮುಖ್ಯ ಅಧೀಕ್ಷಕರನ್ನು ಹೊರತುಪಡಿಸಿ ಇತರೆ ಸಿಬ್ಬಂದಿ, ವಿದ್ಯಾರ್ಥಿಗಳು ಮೊಬೈಲ್ ಫೋನ್ ಮತ್ತಿತರ ಎಲೆಕ್ಟ್ರಾನಿಕ್ಸ್‌ ಉಪಕರಣ ಬಳಸುವುದನ್ನು ನಿಷೇಧಿಸಲಾಗಿದೆ ಎಂದರು.

ಬರಹ ಇಷ್ಟವಾಯಿತೆ?

 • 0

  Happy
 • 0

  Amused
 • 0

  Sad
 • 0

  Frustrated
 • 0

  Angry

Comments:

0 comments

Write the first review for this !