ಪ್ರಧಾನಿ ಮೋದಿಗೆ ವಿಶ್ವ ನಾಯಕರಿಂದ ಶುಭಾಶಯಗಳ ಮಹಾಪೂರ

ಮಂಗಳವಾರ, ಜೂನ್ 18, 2019
29 °C

ಪ್ರಧಾನಿ ಮೋದಿಗೆ ವಿಶ್ವ ನಾಯಕರಿಂದ ಶುಭಾಶಯಗಳ ಮಹಾಪೂರ

Published:
Updated:

ನವದೆಹಲಿ: ಲೋಕಸಭಾ ಚುನಾವಣೆಯಲ್ಲಿ ಎನ್‌ಡಿಎ ಪ್ರಚಂಡ ಗೆಲುವು ಸಾಧಿಸಿರುವುದಕ್ಕೆ ವಿಶ್ವದ ವಿವಿಧ ದೇಶಗಳ ನಾಯಕರಿಂದ ಪ್ರಧಾನಿ ಮೋದಿ ಅವರಿಗೆ ಶುಭಾಶಯಗಳ ಮಹಾಪೂರವೇ ಹರಿದುಬಂದಿದೆ.

'ಚುನಾವಣೆಯಲ್ಲಿ ಬಿಜೆಪಿ ನೇತೃತ್ವದ ಎನ್‌ಡಿಎ ಮೈತ್ರಿಕೂಟ ಜಯ ಗಳಿಸಿರುವುದಕ್ಕೆ ಅಭಿನಂದನೆಗಳು. ದಕ್ಷಿಣ ಏಷ್ಯಾದಲ್ಲಿ ಅಭಿವೃದ್ಧಿ ಹಾಗೂ ಶಾಂತಿ ಸ್ಥಾಪನೆಗಾಗಿ ಪ್ರಧಾನಿ ಮೋದಿ ಅವರೊಂದಿಗೆ ಕೆಲಸ ಮಾಡಲು ಎದುರು ನೋಡುತ್ತಿದ್ದೇನೆ’ ಎಂದು ಪಾಕಿಸ್ತಾನ ಪ್ರಧಾನಿ ಇಮ್ರಾನ್‌ ಖಾನ್‌ ಟ್ವೀಟ್‌ ಮಾಡಿದ್ದಾರೆ.

‘ಸಾರ್ವತ್ರಿಕ ಚುನಾವಣೆಯಲ್ಲಿ ಜಯಭೇರಿ ಮೊಳಗಿಸಿರುವ ಆತ್ಮೀಯ ಮಿತ್ರನಿಗೆ ಹೃತ್ಪೂರ್ವಕ ಅಭಿನಂದನೆಗಳು’ ಎಂದು ಇಸ್ರೇಲ್‌ ಪ್ರಧಾನಿ ಬೆಂಜಮಿನ್‌ ನೆತನ್ಯಾಹು ಅವರು ಹೀಬ್ರೂ, ಹಿಂದಿ ಮತ್ತು ಇಂಗ್ಲಿಷ್‌ ಭಾಷೆಗಳಲ್ಲಿ ಟ್ವೀಟ್‌ ಮಾಡಿದ್ದಾರೆ.

 ಪತ್ರದ ಮೂಲಕ ಶುಭಾಶಯ ಕೋರಿರುವ ಚೀನಾ ಅಧ್ಯಕ್ಷ  ಷಿ ಜಿನ್‌ಪಿಂಗ್‌, ಭಾರತ–ಚೀನಾ ಸಂಬಂಧ ಇನ್ನಷ್ಟು ವೃದ್ಧಿಯಾಗುವ ಆಶಯ ವ್ಯಕ್ತಪಡಿಸಿದ್ದಾರೆ ಎಂದು ವಿದೇಶಾಂಗ ಸಚಿವಾಲಯದ ವಕ್ತಾರ ರವೀಶ್‌ ಕುಮಾರ್‌  ಟ್ವೀಟ್‌
 ಮಾಡಿದ್ದಾರೆ.

 ‘ಭಾರತ–ರಷ್ಯಾ ನಡುವಿನ ಶತಮಾನಗಳಷ್ಟು ಹಳೆಯದಾದ ಬಾಂಧವ್ಯ ಇನ್ನಷ್ಟು ವೃದ್ಧಿಯಾಗಲಿದೆ’ ಎಂದು ರಷ್ಯಾ ಅಧ್ಯಕ್ಷ ವ್ಲಾಡಿಮಿರ್‌ ಪುಟಿನ್‌ ಶುಭಾಶಯ ಸಂದೇಶದಲ್ಲಿ ಹೇಳಿದ್ದಾರೆ.

 ‘ಮೋದಿಜಿ ಅವರಿಗೆ ಅಭಿನಂದನೆಗಳು. ನಿಮ್ಮ ಯಶಸ್ವಿಗೆ ಶುಭಹಾರೈಕೆಗಳು’ ಎಂದು ನೇಪಾಳದ ಪ್ರಧಾನಿ ಕೆ.ಪಿ.ಶರ್ಮಾ ಒಲಿ ಟ್ವೀಟ್‌ ಮಾಡಿದ್ದಾರೆ.

 ಅಲ್ಲದೆ ಬಾಂಗ್ಲಾದೇಶದ ಪ್ರಧಾನಿ ಶೇಖ್‌ ಹಸೀನಾ, ಶ್ರೀಲಂಕಾ ಅಧ್ಯಕ್ಷ ಮೈತ್ರಿಪಾಲ ಸಿರಿಸೇನಾ, ಪ್ರಧಾನಿ ರಾನಿಲ್‌ ವಿಕ್ರಮ ಸಿಂಘೆ, ಮಾಲ್ಡೀವ್ಸ್ ಅಧ್ಯಕ್ಷ ಇಬ್ರಾಹಿಂ ಮೊಹಮ್ಮದ್‌ ಸೊಲೀಹ್‌, ಭೂತಾನ್‌ ಪ್ರಧಾನಿ ಲೋಟೆ ತ್ಸೇರಿ ಮತ್ತು ಅಫ್ಗಾನಿಸ್ತಾನ ಅಧ್ಯಕ್ಷ ಅಶ್ರಫ್‌ ಘನಿ ಅವರು ಪ್ರಧಾನಿ ಮೋದಿಗೆ ಅಭಿನಂದನೆ ಸಲ್ಲಿಸಿದ್ದಾರೆ.

ವಿರಾಟ್ ಕೊಹ್ಲಿ ನಾಯಕತ್ವದ ಭಾರತ ಕ್ರಿಕೆಟ್‌ ತಂಡ ಕಪ್ ಗೆಲ್ಲುತ್ತಾ? ಐಸಿಸಿ ವಿಶ್ವಕಪ್ 2019 ಯಾರು ಗೆಲ್ಲುತ್ತಾರೆ? ಕೋಟ್ಯಂತರ ಕ್ರಿಕೆಟ್ ಪ್ರೇಮಿಗಳ ನಿರೀಕ್ಷೆಗೆ ಉತ್ತರ ಸಿಗುವ ಕಾಲ ಬಂದಿದೆ. ವಿಶ್ವಕಪ್ ಕ್ರಿಕೆಟ್‌ನ ಸ್ಕೋರ್ ಅಪ್‌ಡೇಟ್ಸ್‌, ಮ್ಯಾಚ್‌ಗಳ ವರದಿ, ವಿಶ್ವಕಪ್ ಕ್ರಿಕೆಟ್ ಹೆಜ್ಜೆ ಗುರುತು, ಆಟಗಾರರ ಸಂದರ್ಶನ, ವೇಳಾಪಟ್ಟಿ ತಿಳಿದುಕೊಳ್ಳಲು www.prajavani.net ಜಾಲತಾಣಕ್ಕೆ ಭೇಟಿ ನೀಡಿ. ಕ್ರೀಡಾಪ್ರೇಮಿಗಳ ನೆಚ್ಚಿನ ಆಯ್ಕೆ ‘ಪ್ರಜಾವಾಣಿ’. ಇದು ಅತ್ಯಂತ ವಿಶ್ವಾಸಾರ್ಹ ಸುದ್ದಿ ಮಾಧ್ಯಮ.

ಬರಹ ಇಷ್ಟವಾಯಿತೆ?

 • 30

  Happy
 • 3

  Amused
 • 0

  Sad
 • 0

  Frustrated
 • 1

  Angry

Comments:

0 comments

Write the first review for this !