ಧ್ರುವನಾರಾಯಣ ಪರ ಎ.ಆರ್.ಕೃಷ್ಣಮೂರ್ತಿ ಮತಯಾಚನೆ

ಬುಧವಾರ, ಏಪ್ರಿಲ್ 24, 2019
31 °C

ಧ್ರುವನಾರಾಯಣ ಪರ ಎ.ಆರ್.ಕೃಷ್ಣಮೂರ್ತಿ ಮತಯಾಚನೆ

Published:
Updated:
Prajavani

ಚಾಮರಾಜನಗರ: ತಾಲ್ಲೂಕಿನ ಇರಸವಾಡಿ, ಗಂಗವಾಡಿ ಗ್ರಾಮದಲ್ಲಿ ಕಾಂಗ್ರೆಸ್ ಅಭ್ಯರ್ಥಿ ಆರ್.ಧ್ರುವನಾರಾಯಣ ಪರವಾಗಿ ಪಕ್ಷದ ಹಿರಿಯ ಸದಸ್ಯ ಎ.ಆರ್.ಕೃಷ್ಣಮೂರ್ತಿ ಗುರುವಾರ ಮತಯಾಚನೆ ಮಾಡಿದರು.

ಬಳಿಕ ಮಾತನಾಡಿದ ಅವರು,‘ಚಾಮರಾಜನಗರ ಮೀಸಲು ಲೋಕಸಭಾ ಕ್ಷೇತ್ರದ 8 ವಿಧಾಸಭಾ ಕ್ಷೇತ್ರದಲ್ಲೂ ಧ್ರುವನಾರಾಯಣ ಪರ ಉತ್ತಮ ವಾತಾವರಣವಿದೆ. ಅವರ ಅಭಿವೃದ್ಧಿ ಕಾರ್ಯಕ್ರಮಗಳನ್ನು ಮನಗಂಡು ಜನತೆ ಮತ್ತೊಮ್ಮೆ ಧ್ರುವನಾರಾಯಣ ಅವರನ್ನು ಆಯ್ಕೆ ಮಾಡಲು ಮುಂದಾಗಿದ್ದಾರೆ’ ಎಂದರು.

ಧ್ರುವನಾರಾಯಣ ಅವರು 2 ಬಾರಿ ಶಾಸಕರಾಗಿ, 2 ಬಾರಿ ಸಂಸದರಾಗಿ ಕ್ಷೇತ್ರದಲ್ಲಿ ಸಾಕಷ್ಟು ಅಭಿವೃದ್ಧಿ ಕೆಲಸ ಮಾಡಿದ್ದಾರೆ. ಮುಂದಿನ ದಿನಗಳಲ್ಲೂ ಜಿಲ್ಲೆಯಲ್ಲಿ ಹೆಚ್ಚಿನ ಅಭಿವೃದ್ಧಿ ಕೆಲಸ ಮಾಡುವ ಹುಮ್ಮಸ್ಸು ಹೊಂದಿದ್ದಾರೆ. ಈ ಚುನಾವಣೆಯಲ್ಲಿ ಹಸ್ತದ ಗುರುತಿಗೆ ಮತ ಹಾಕುವ ಮೂಲಕ ಧ್ರುವನಾರಾಯಣ ಅವರನ್ನು 2 ಲಕ್ಷ ಮತಗಳ ಅಂತರದಲ್ಲಿ ಗೆಲ್ಲಿಸಿಕೊಡಬೇಕು ಎಂದು ಮನವಿ ಮಾಡಿದರು.

ಜಿಲ್ಲಾ ಪಂಚಾಯಿತಿ ಸದಸ್ಯ ಕೆ.ಪಿ.ಸದಾಶಿವಮೂರ್ತಿ, ಯಳಂದೂರು ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಎಚ್.ವಿ.ಚಂದ್ರು, ಪ್ರಧಾನ ಕಾರ್ಯದರ್ಶಿ ಬೂದಂಬಳ್ಳಿ ಶಂಕರ್, ತಾಲ್ಲೂಕು ಪಂಚಾಯಿತಿ ಸದಸ್ಯೆ ಶಿವಮ್ಮ ಅಶೋಕ್, ಆಲೂರು ಪ್ರದೀಪ್, ನಾಗರಾಜು, ಕುಮಾರ್, ಮಹದೇವಸ್ವಾಮಿ ಇದ್ದರು.

ಗ್ರಾಮ ಪಂಚಾಯಿತಿ ವ್ಯಾಪ್ತಿ ಬಿರುಸಿನ ಪ್ರಚಾರ:ತಾಲ್ಲೂಕಿನ ನಂಜದೇವನಪುರ ಗ್ರಾಮ ಪಂಚಾಯತಿ ವ್ಯಾಪ್ತಿಯ ಕಾಳನ ಹುಂಡಿ ಗ್ರಾಮದಲ್ಲಿ ಜಿಲ್ಲಾ ಉಸ್ತುವಾರಿ ಸಚಿವ ಸಿ.ಪುಟ್ಟರಂಗಶೆಟ್ಟಿ ಹಾಗೂ ಹೂನ್ನಹಳ್ಳಿ, ಅರಕಲವಾಡಿ, ಯರಗನಹಳ್ಳಿ ಗ್ರಾಮ ಪಂಚಾಯಿತಿ ವ್ಯಾಪ್ತಿ ಜಿಲ್ಲಾ ಪಂಚಾಯಿತಿ ಸದಸ್ಯೆ ಶಶಿಕಲಾ ಸೋಮಲಿಂಗಪ್ಪ ಸೇರಿದಂತೆ ಪಕ್ಷದ ಮುಖಂಡರು, ಜನ ಪ್ರತಿನಿಧಿಗಳು ಕಾರ್ಯಕರ್ತರು ಮನೆ ಮನೆಗೆ ತೆರಳಿ ಬಿರುಸಿನ ಮತ ಯಾಚನೆ ಮಾಡಿದರು.

ಈ ವೇಳೆ ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷ ಪಿ.ಮರಿಸ್ವಾಮಿ, ಉಪಾಧ್ಯಕ್ಷ ಬಿ.ಕೆ.ರವಿಕುಮಾರ್, ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಮಹಮದ್‌ ಅಸ್ಗರ್‌ ಮುನ್ನ, ಉಪಾಧ್ಯಕ್ಷ ಉಡಿಗಾಲ ನಂಜಪ್ಪ, ಗ್ರಾಮಾಂತರ ಅಧ್ಯಕ್ಷ ಎ.ಎಸ್‌.ಗುರುಸ್ವಾಮಿ, ತಾಲ್ಲೂಕು ಪಂಚಾಯಿತಿ ಸದಸ್ಯ ಬಾಲಚಂದ್ರ ಮೂರ್ತಿ, ಮುಖಂಡರಾದ ಶೆಂಬಪ್ಪ, ಗಿರಿಯಪ್ಪ, ರಂಗಸ್ವಾಮಿ, ಪ್ರಕಾಶ್, ಬಿಸಲವಾಡಿ ಉಮೇಶ್, ಶೇಖರಪ್ಪ, ರಾಜೇಂದ್ರಪ್ರಸಾದ್‌ ಇದ್ದರು.

ಬರಹ ಇಷ್ಟವಾಯಿತೆ?

 • 0

  Happy
 • 0

  Amused
 • 0

  Sad
 • 0

  Frustrated
 • 0

  Angry

Comments:

0 comments

Write the first review for this !