15ರಂದು ಕಾಂಗ್ರೆಸ್‌ ಪರಿವರ್ತನಾ ರ‍್ಯಾಲಿ

ಸೋಮವಾರ, ಮಾರ್ಚ್ 25, 2019
26 °C
20–30 ಸಾವಿರ ಮಂದಿ ಭಾಗವಹಿಸುವ ನಿರೀಕ್ಷೆ– ಸಚಿವ ಪುಟ್ಟರಂಗಶೆಟ್ಟಿ

15ರಂದು ಕಾಂಗ್ರೆಸ್‌ ಪರಿವರ್ತನಾ ರ‍್ಯಾಲಿ

Published:
Updated:
Prajavani

ಚಾಮರಾಜನಗರ: ಲೋಕಸಭಾ ಚುನಾವಣಾ ಪ್ರಚಾರದ ಭಾಗವಾಗಿ ಕಾಂಗ್ರೆಸ್‌ ಪಕ್ಷವು ಮಾರ್ಚ್‌ 15ರಂದು ಡಾ.ಬಿ.ಆರ್‌.ಅಂಬೇಡ್ಕರ್‌ ಜಿಲ್ಲಾ ಕ್ರೀಡಾಂಗಣದಲ್ಲಿ ಪರಿವರ್ತನಾ ರ‍್ಯಾಲಿ ಆಯೋಜಿಸಿದೆ.

ಜಿಲ್ಲಾ ಉಸ್ತುವಾರಿ ಸಚಿವ ಸಿ.ಪುಟ್ಟರಂಗಶೆಟ್ಟಿ ಅವರು ‌ಮಂಗಳವಾರ ಸುದ್ದಿಗೋಷ್ಠಿಯಲ್ಲಿ ರ‍್ಯಾಲಿ ಬಗ್ಗೆ ವಿವರಗಳನ್ನು ನೀಡಿದರು.

‘ಲೋಕಸಭಾ ಕ್ಷೇತ್ರದ ವ್ಯಾಪ್ತಿಗೆ ಬರುವ ಚಾಮರಾಜನಗರ ಮತ್ತು ಮೈಸೂರು ಜಿಲ್ಲೆಗಳ ಎಂಟು ವಿಧಾನಸಭಾ ಕ್ಷೇತ್ರಗಳ ಅಂದಾಜು 20 ಸಾವಿರದಿಂದ 30 ಸಾವಿರ ಕಾರ್ಯಕರ್ತರು, ಬೆಂಬಲಿಗರು ಈ ರ‍್ಯಾಲಿಯಲ್ಲಿ ಭಾಗವಹಿಸುವ ನಿರೀಕ್ಷೆ ಇದೆ’ ಎಂದು ಅವರು ಮಾಹಿತಿ ನೀಡಿದರು.

‘ಪಕ್ಷದ ಹಿರಿಯ ನಾಯಕರಾದ ಮಲ್ಲಿಕಾರ್ಜುನ ಖರ್ಗೆ, ಸಿದ್ದರಾಮಯ್ಯ, ಕೆಪಿಸಿಸಿ ಅಧ್ಯಕ್ಷ ದಿನೇಶ್‌ ಗುಂಡೂರಾವ್‌, ಕಾರ್ಯಾಧ್ಯಕ್ಷ ಈಶ್ವರ ಖಂಡ್ರೆ, ಉಪಮುಖ್ಯಮಂತ್ರಿ ಡಾ.ಜಿ.ಪರಮೇಶ್ವರ, ಸಚಿವರಾದ ಡಿ.ಕೆ.ಶಿವಕುಮಾರ್‌, ಸತೀಶ್‌ ಜಾರಕಿಹೊಳಿ, ಮುಖಂಡ ಸಿ.ಎಂ.ಇಬ್ರಾಹಿಂ ಸೇರಿದಂತೆ ಪಕ್ಷದ ಹಲವು ಮುಖಂಡರು ಈ ಸಮಾವೇಶದಲ್ಲಿ ಭಾಗಿಯಾಗಲಿದ್ದಾರೆ’ ಎಂದು ಹೇಳಿದರು.

‘ಸಂಸದರು ಮಾಡಿರುವ ಕೆಲಸಗಳು, ಹಿಂದಿನ ಕಾಂಗ್ರೆಸ್‌ ಸರ್ಕಾರದ ಸಾಧನೆಗಳು, ಮೈತ್ರಿ ಸರ್ಕಾರದ ಸಾಧನೆಗಳು ಮತ್ತು ಕೇಂದ್ರ ಸರ್ಕಾರದ ವೈಫಲ್ಯಗಳನ್ನು ಮುಖಂಡರು ಜನರ ಮುಂದೆ ಇಡಲಿದ್ದಾರೆ’ ಎಂದು ಅವರು ಹೇಳಿದರು.

ಜಿಲ್ಲಾ ಕಾಂಗ್ರೆಸ್‌ ಅಧ್ಯಕ್ಷ ಪಿ.ಮರಿಸ್ವಾಮಿ ಮಾತನಾಡಿ, ‘ಎಐಸಿಸಿ, ಕೆಪಿಸಿಸಿ ಆದೇಶದ ಅನುಸಾರ ರಾಜ್ಯದ ಪ್ರತಿ ತಾಲ್ಲೂಕು ಮತ್ತು ಜಿಲ್ಲಾಮಟ್ಟಗಳಲ್ಲಿ ಪರಿವರ್ತನಾ ರ‍್ಯಾಲಿ ಹೆಸರಿನಲ್ಲಿ ಸಮಾವೇಶ ಮಾಡಲಾಗುತ್ತಿದೆ’ ಎಂದು ಹೇಳಿದರು.

ಕಾಂಗ್ರೆಸ್‌ ಮುಖಂಡರಾದ ಜಯಣ್ಣ, ನಂಜುಂಡಪ್ರಸಾದ್‌, ಮಹಮ್ಮದ್‌ ಅಜ್ಗರ್‌ ಅಲಿ ಇದ್ದರು.

ಬರಹ ಇಷ್ಟವಾಯಿತೆ?

 • 0

  Happy
 • 0

  Amused
 • 0

  Sad
 • 0

  Frustrated
 • 0

  Angry

Comments:

0 comments

Write the first review for this !