‘ಉಸ್ತುವಾರಿ’ ನೇತೃತ್ವದಲ್ಲಿ ಕಾಂಗ್ರೆಸ್‌ ಸಭೆ ಇಂದು

ಭಾನುವಾರ, ಮೇ 26, 2019
31 °C

‘ಉಸ್ತುವಾರಿ’ ನೇತೃತ್ವದಲ್ಲಿ ಕಾಂಗ್ರೆಸ್‌ ಸಭೆ ಇಂದು

Published:
Updated:

ಬೆಂಗಳೂರು: ರಾಜ್ಯ ಕಾಂಗ್ರೆಸ್‌ ಉಸ್ತುವಾರಿ ಕೆ.ಸಿ. ವೇಣುಗೋಪಾಲ್‌ ನೇತೃತ್ವದಲ್ಲಿ ಕೆಪಿಸಿಸಿ ಪದಾಧಿಕಾರಿಗಳು ಮತ್ತು ಪಕ್ಷದ ಜಿಲ್ಲಾ ಘಟಕಗಳ ಅಧ್ಯಕ್ಷರ ಸಭೆ ಶುಕ್ರವಾರ ನಡೆಯಲಿದೆ.

ಕಾಂಗ್ರೆಸ್‌ ಶಾಸಕಾಂಗ ಪಕ್ಷದ ನಾಯಕ ಸಿದ್ದರಾಮಯ್ಯ ಅವರನ್ನು ಬೆಳಿಗ್ಗೆ ಭೇಟಿ ಮಾಡಲಿರುವ ವೇಣುಗೋಪಾಲ್‌, ಜೆಡಿಎಸ್‌ ಜೊತೆ ಸೀಟು ಹೊಂದಾಣಿಕೆ ಮತ್ತು ಪ್ರಸಕ್ತ ರಾಜಕೀಯ ವಿದ್ಯಮಾನಗಳ ಕುರಿತು ಚರ್ಚೆ ನಡೆಸಲಿದ್ದಾರೆ.

ಜೆಡಿಎಸ್‌ ವರಿಷ್ಠ ಎಚ್‌.ಡಿ. ದೇವೇಗೌಡ ಜೊತೆ ಗುರುವಾರ ನಡೆಸಿದ ಮಾತುಕತೆ ಕುರಿತು ಕೆಪಿಸಿಸಿ ಅಧ್ಯಕ್ಷ ದಿನೇಶ್‌ ಗುಂಡೂರಾವ್‌ ಅವರಿಂದ ಮಾಹಿತಿ ಪಡೆಯಲಿರುವ ವೇಣುಗೋಪಾಲ್‌, ಉಭಯ ಪಕ್ಷಗಳು ಸ್ಪರ್ಧಿಸುವ ಸೀಟುಗಳ ಕುರಿತಂತೆ ರಾಜ್ಯ ನಾಯಕರ ಜೊತೆ ಸಮಾಲೋಚನೆ ನಡೆಸಲಿದ್ದಾರೆ.

ಯಾವ ಕ್ಷೇತ್ರ ಬಿಟ್ಟುಕೊಡಬೇಕು, ಯಾವ ಕ್ಷೇತ್ರ ಉಳಿಸಿಕೊಳ್ಳಬೇಕು ಎಂಬ ಬಗ್ಗೆಯೂ ಚರ್ಚೆ ನಡೆಸಲಿದ್ದಾರೆ. ಮಂಡ್ಯದಿಂದ ಸುಮಲತಾ ಅಂಬರೀಷ್‌ ಕಣಕ್ಕಿಳಿಯುವ ಬಗ್ಗೆಯೂ ಪ್ರಸ್ತಾವವಾಗಲಿದೆ.

ಸೀಟು ಹಂಚಿಕೆ ಸಂಬಂಧಿಸಿದಂತೆ, ಹಿರಿಯ ನಾಯಕರಾದ ಮಲ್ಲಿಕಾರ್ಜುನ ಖರ್ಗೆ, ಕೆ.ಎಚ್‌. ಮುನಿಯಪ್ಪ, ಜಿ. ಪರಮೇಶ್ವರ, ಎಚ್‌.ಡಿ. ದೇವೇಗೌಡ, ಕುಮಾರಸ್ವಾಮಿ, ಡ್ಯಾನಿಶ್ ಅಲಿ ಶೀಘ್ರದಲ್ಲೇ ಚರ್ಚೆ ನಡೆಸಲಿದ್ದಾರೆ’ ಎಂದು ಕಾಂಗ್ರೆಸ್‌ ಮೂಲಗಳು ತಿಳಿಸಿವೆ.

ಬರಹ ಇಷ್ಟವಾಯಿತೆ?

 • 0

  Happy
 • 0

  Amused
 • 0

  Sad
 • 0

  Frustrated
 • 0

  Angry

Comments:

0 comments

Write the first review for this !