ರಫೇಲ್ ಹಗರಣ; ಜನಜಾಗೃತಿ ಅಭಿಯಾನ

7

ರಫೇಲ್ ಹಗರಣ; ಜನಜಾಗೃತಿ ಅಭಿಯಾನ

Published:
Updated:

ಬೆಂಗಳೂರು: ರಫೇಲ್ ಯುದ್ಧ ವಿಮಾನಗಳ ಖರೀದಿಯಲ್ಲಾದ ಹಗರಣ ವಿರುದ್ಧ ಜನಜಾಗೃತಿ ಅಭಿಯಾನಕ್ಕೆ ಶುಕ್ರವಾರ ಚಾಲನೆ ನೀಡಿದ ಕಾಂಗ್ರೆಸ್ ಮುಖಂಡರು, ಆನಂದರಾವ್ ವೃತ್ತದ ಗಾಂಧಿ ಪ್ರತಿಮೆ ಎದುರು ಪ್ರತಿಭಟನೆ ನಡೆಸಿದರು.

ನಗರ ಜಿಲ್ಲಾ ಕಾಂಗ್ರೆಸ್ ಪ್ರಚಾರ ಸಮಿತಿ ವತಿಯಿಂದ ಈ ಪ್ರತಿಭಟನೆ ಹಮ್ಮಿಕೊಳ್ಳಲಾಗಿತ್ತು. ಬಿಜೆಪಿಯ ವೈಫಲ್ಯಗಳನ್ನು ಜನರಿಗೆ ತಿಳಿಸುವ ಉದ್ದೇಶದಿಂದ ಸಿದ್ಧಪಡಿಸಿರುವ ಪ್ರಚಾರ ವಾಹನದ ಓಡಾಟಕ್ಕೆ ಕೆಪಿಸಿಸಿ ಕಾರ್ಯಾಧ್ಯಕ್ಷ ಈಶ್ವರ್ ಖಂಡ್ರೆ ಚಾಲನೆ ನೀಡಿದರು. ಬಳಿಕ, ರಫೇಲ್ ಹಗರಣದ ವಿವರವುಳ್ಳ ಕರಪತ್ರಗಳನ್ನು ಸಾರ್ವಜನಿಕರಿಗೆ ವಿತರಿಸಿದರು.

ಪ್ರತಿಭಟನಾಕಾರರನ್ನು ಉದ್ದೇಶಿಸಿ ಮಾತನಾಡಿದ ಖಂಡ್ರೆ, ‘ಪಾರದರ್ಶಕ ಆಡಳಿತ ನೀಡುವುದಾಗಿ ಮತದಾರರಿಗೆ ಸುಳ್ಳು ಹೇಳಿ ಬಿಜೆಪಿ ಅಧಿಕಾರಕ್ಕೆ ಬಂದಿದೆ. ಚುನಾವಣೆ ವೇಳೆ ನೀಡಿದ ಭರವಸೆಗಳನ್ನೆಲ್ಲ ಪ್ರಧಾನಿ ನರೇಂದ್ರ ಮೋದಿ, ಮರೆತಿದ್ದಾರೆ’ ಎಂದು ವಾಗ್ದಾಳಿ ನಡೆಸಿದರು.

‘ಕೇಂದ್ರದಲ್ಲಿ ಕಾಂಗ್ರೆಸ್ ಅಧಿಕಾರದಲ್ಲಿದ್ದಾಗ ರಫೆಲ್ ಯುದ್ಧ ವಿಮಾನ ಖರೀದಿಗೆ ₹600 ಕೋಟಿ ಇತ್ತು. ಆದರೆ, ಬಿಜೆಪಿ ಸರ್ಕಾರವು ಅದೇ ಯುದ್ಧ ವಿಮಾನಗಳ ಖರೀದಿಗೆ ₹1,600 ಕೋಟಿ ನೀಡಿದೆ. ರಿಲಯನ್ಸ್ ಕಂಪನಿ ಮಾಲೀಕ ಅಂಬಾನಿ ಮಧ್ಯಸ್ಥಿಕೆಯಲ್ಲಿ ಖರೀದಿ ವ್ಯವಹಾರ ನಡೆಸಲಾಗಿದೆ. ಅದರಿಂದ ಇದೊಂದು ದೊಡ್ಡ ಹಗರಣವಾಗಿದ್ದು, ಈ ಬಗ್ಗೆ ಜನರಲ್ಲಿ ಜಾಗೃತಿ ಮೂಡಿಸಲು ಅಭಿಯಾನ ಹಮ್ಮಿಕೊಳ್ಳಲಾಗಿದೆ’ ಎಂದು ಖಂಡ್ರೆ ಹೇಳಿದರು.  

ಬರಹ ಇಷ್ಟವಾಯಿತೆ?

 • 0

  Happy
 • 0

  Amused
 • 0

  Sad
 • 0

  Frustrated
 • 0

  Angry

Comments:

0 comments

Write the first review for this !