ಆಪರೇಷನ್‌ ಕಮಲ ವಿರುದ್ಧ ಕಾಂಗ್ರೆಸ್‌ ಪ್ರತಿಭಟನೆ

7

ಆಪರೇಷನ್‌ ಕಮಲ ವಿರುದ್ಧ ಕಾಂಗ್ರೆಸ್‌ ಪ್ರತಿಭಟನೆ

Published:
Updated:
Prajavani

ಚಾಮರಾಜನಗರ: ಆಪರೇಷನ್ ಕಮಲ ನಡೆಸುತ್ತಿರುವ ಬಿಜೆಪಿ ವಿರುದ್ಧ ಚಾಮರಾಜನಗರ ಜಿಲ್ಲಾ ಕಾಂಗ್ರೆಸ್ ಕಾರ್ಯಕರ್ತರು ಶನಿವಾರ ಪ್ರತಿಭಟನೆ ನಡೆಸಿದರು.

ನಗರದ ಕಾಂಗ್ರೆಸ್ ಕಚೇರಿಯ ಮುಂಭಾಗ ಜಮಾಯಿಸಿದ ಕಾರ್ಯಕರ್ತರು, ರಾಷ್ಟ್ರೀಯ ಹೆದ್ದಾರಿ 209ರಲ್ಲಿ ಕೆಲಕಾಲ ರಸ್ತೆ ತಡೆ ನಡೆಸಿದರು.

ಸಮ್ಮಿಶ್ರ ಸರ್ಕಾರ ಅಧಿಕಾರಕ್ಕೆ ಬಂದ ನಂತರ ಅನೇಕ ಜನಪರ ಕೆಲಸಗಳನ್ನು ಮಾಡಿ ಜನಪರ ಸರ್ಕಾರ ಎನಿಸಿಕೊಂಡಿದೆ. ಈ ಸಂದರ್ಭದಲ್ಲಿ ಬಿಜೆಪಿ ವಿನಾಕಾರಣ ನಮ್ಮ ಶಾಸಕರಿಗೆ ಆಮಿಷಗಳನ್ನು ಒಡ್ಡಿ ಆಪರೇಷನ್ ಕಮಲ ನಡೆಸುವ ಪ್ರಯತ್ನ ಮಾಡುತ್ತಿರುವುದು ಪ್ರಜಾಪ್ರಭುತ್ವಕ್ಕೆ ಧಕ್ಕೆ ಉಂಟುಮಾಡುತ್ತಿದೆ. ವಿರೋಧ ಪಕ್ಷದ ಕೆಲಸ ಮಾಡಬೇಕಾದ ಬಿಜೆಪಿ ಈ ರೀತಿ ಆಪರೇಷನ್ ಕಮಲ ಮಾಡುವ ಮೂಲಕ ಸರ್ಕಾರವನ್ನು ಅಸ್ಥಿರತೆಯತ್ತ ನೂಕುವುದು ಸರಿಯಲ್ಲ ಎಂದು ಆಕ್ರೋಶ ವ್ಯಕ್ತಪಡಿಸಿದರು.

ಪ್ರತಿಭಟನೆಯಲ್ಲಿ ನಗರ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಮಹಮ್ಮದ್ ಅಸ್ಗರ್‌ ಮುನ್ನಾ, ಗ್ರಾಮಾಂತರ ಬ್ಲಾಕ್ ಅಧ್ಯಕ್ಷ ಎ.ಎಸ್.ಗುರುಸ್ವಾಮಿ, ಕೆಪಿಸಿಸಿ ಸದಸ್ಯ ಸೈಯದ್‌ ರಫಿ, ಜಿಲ್ಲಾ ಪ್ರಧಾನ ಕಾರ್ಯದರ್ಶಿ ಆರ್.ಮಹದೇವ್, ಹಿರಿಯ ಸದಸ್ಯ ಸುಹೇಲ್ ಅಲಿ ಖಾನ್, ತಾಲ್ಲೂಕು ಪಂಚಾಯಿತಿ ಸದಸ್ಯ ಎಚ್.ಎಂ.ಮಹದೇವಶೆಟ್ಟಿ, ಕಾಗಲವಾಡಿ ಚಂದ್ರು, ಮುಖಂಡರಾದ ಜಯಸಿಂಹ, ನಗರಸಭಾ ಸದಸ್ಯರಾದ ಚಿನ್ನಮ್ಮ, ಭಾಗ್ಯಮ್ಮ, ಕಾರ್ಮಿಕ ವಿಭಾಗದ ನಾಗಶ್ರೀ,  ರವಿ ಗೌಡ, ಸಿ.ಕೆ ರವಿ, ರಾಮಸಮುದ್ರ ನಾಗಬಸವಣ್ಣ ಪಾಲ್ಗೊಂಡಿದ್ದರು.

ಬರಹ ಇಷ್ಟವಾಯಿತೆ?

 • 0

  Happy
 • 0

  Amused
 • 0

  Sad
 • 0

  Frustrated
 • 0

  Angry

Comments:

0 comments

Write the first review for this !