ಪ್ರಶ್ನೆಪತ್ರಿಕೆ ಸೋರಿಕೆಗೆ ಯತ್ನ ಕಾನ್‌ಸ್ಟೆಬಲ್ ಬಂಧನ

7

ಪ್ರಶ್ನೆಪತ್ರಿಕೆ ಸೋರಿಕೆಗೆ ಯತ್ನ ಕಾನ್‌ಸ್ಟೆಬಲ್ ಬಂಧನ

Published:
Updated:

ಬೆಂಗಳೂರು: ಪಿಎಸ್‌ಐ ನೇಮಕಾತಿ ಪರೀಕ್ಷೆಯ ಪ್ರಶ್ನೆಪತ್ರಿಕೆ ಸೋರಿಕೆ ಮಾಡಲು ಯತ್ನಿಸಿದ್ದ ಜಾಲದ ಜೊತೆ ಶಾಮೀಲಾಗಿದ್ದ ಆರೋಪದಡಿ ಕಾನ್‌ಸ್ಟೆಬಲ್ ವಿಠ್ಠಲ್ ಬ್ಯಾಕೋಡ ಅವರನ್ನು ಸಿಸಿಬಿ ಪೊಲೀಸರು ಬಂಧಿಸಿದ್ದಾರೆ.

ನಗರದ ಹಲಸೂರು ಸಂಚಾರ ಠಾಣೆಯಲ್ಲಿ ಕೆಲಸ ಮಾಡುತ್ತಿದ್ದ ವಿಠ್ಠಲ್, ಪ್ರಕರಣದ ಪ್ರಮುಖ ಆರೋಪಿಗಳಾದ ಶಿವಕುಮಾರಯ್ಯ, ಬಸವರಾಜ್ ಹಾಗೂ ಹೊಳಿಯಪ್ಪ ಜೊತೆ ಒಡನಾಟವಿಟ್ಟುಕೊಂಡಿದ್ದ. ಕೆಲವು ಅಭ್ಯರ್ಥಿಗಳನ್ನು ಪ್ರಮುಖ ಆರೋಪಿಗಳಿಗೆ ಪರಿಚಯ ಮಾಡಿಕೊಟ್ಟಿದ್ದ. ತಾನು ಸಹ ಪ್ರಶ್ನೆಪತ್ರಿಕೆಯನ್ನು ಪಡೆದು ಪಿಎಸ್ಐ ಆಗಿ ಆಯ್ಕೆಯಾಗಬೇಕೆಂದು ಅಂದುಕೊಂಡಿದ್ದ’ 
ಎಂದು ಸಿಸಿಬಿಯ ಮೂಲಗಳು ತಿಳಿಸಿವೆ.

‘ಜ. 29ರಂದು ವಿಠ್ಠಲ್‌ ಅವರನ್ನು ಬಂಧಿಸಿ 1ನೇ ಎಸಿಎಂಎಂ ನ್ಯಾಯಾಲಯಕ್ಕೆ ಹಾಜರುಪಡಿಸಲಾಗಿತ್ತು. ಆತನನ್ನು ಕಸ್ಟಡಿಗೆ ಪಡೆದು ವಿಚಾರಣೆ ನಡೆಸಲಾಗುತ್ತಿದೆ’ ಎಂದು ಮೂಲಗಳು ಹೇಳಿವೆ.

ಪಿಎಸ್‌ಐ ಪರೀಕ್ಷೆಯು ಮುನ್ನಾದಿನ ಬಾಗಲಕೋಟೆ, ಕೊಪ್ಪಳ, ವಿಜಯಪುರ, ಬೆಳಗಾವಿ ಹಾಗೂ ರಾಯಚೂರು ಜಿಲ್ಲೆಗಳಲ್ಲಿ ಕಾರ್ಯಾಚರಣೆ ನಡೆಸಿದ್ದ ಸಿಸಿಬಿ ಪೊಲೀಸರು, ಐವರು ಅಭ್ಯರ್ಥಿಗಳು ಸೇರಿ 16ಕ್ಕೂ ಹೆಚ್ಚು ಮಂದಿಯನ್ನು ಬಂಧಿಸಿದ್ದರು. 

 

ಬರಹ ಇಷ್ಟವಾಯಿತೆ?

 • 1

  Happy
 • 0

  Amused
 • 0

  Sad
 • 0

  Frustrated
 • 0

  Angry

Comments:

0 comments

Write the first review for this !