ಕ್ರಿಕೆಟ್ ಬೆಟ್ಟಿಂಗ್; ₹ 39.49 ಲಕ್ಷ ಜಪ್ತಿ

ಬುಧವಾರ, ಏಪ್ರಿಲ್ 24, 2019
27 °C

ಕ್ರಿಕೆಟ್ ಬೆಟ್ಟಿಂಗ್; ₹ 39.49 ಲಕ್ಷ ಜಪ್ತಿ

Published:
Updated:

ಬೆಂಗಳೂರು: ನಗರದಲ್ಲಿ ಕ್ರಿಕೆಟ್ ಬೆಟ್ಟಿಂಗ್‌ ನಡೆಸುತ್ತಿದ್ದ ಆರೋಪದಡಿ ಇದುವರೆಗೂ ಎಂಟು ಮಂದಿಯನ್ನು ಬಂಧಿಸಿರುವ ಸಿಸಿಬಿ ಪೊಲೀಸರು, ₹39.49 ಲಕ್ಷ ನಗದು ಜಪ್ತಿ ಮಾಡಿದ್ದಾರೆ.

‘ಅಂತರರಾಷ್ಟ್ರೀಯ ಹಾಗೂ ಐಪಿಎಲ್ ಕ್ರಿಕೆಟ್ ಪಂದ್ಯಗಳ ವೇಳೆಯಲ್ಲಿ ಮೊಬೈಲ್ ಆ್ಯಪ್‌ ಬಳಸಿಕೊಂಡು ಆರೋಪಿಗಳು ಬೆಟ್ಟಿಂಗ್ ಕಟ್ಟಿಸಿಕೊಳ್ಳುತ್ತಿದ್ದರು. ಬೆಟ್ಟಿಂಗ್ ಕಟ್ಟಿದ್ದ ಕೆಲ ಸಾರ್ವಜನಿಕರಿಗೆ ಹಣ ನೀಡದೇ ವಂಚಿಸಿದ್ದರು’ ಎಂದು ಸಿಸಿಬಿ ಪೊಲೀಸರು ಹೇಳಿದರು.

‘ಬಂಧಿತ ಆರೋಪಿಗಳು ಬೆಟ್ಟಿಂಗ್ ಬಗ್ಗೆ ಸಾಕಷ್ಟು ಮಾಹಿತಿ ನೀಡಿದ್ದಾರೆ. ಪ್ರಮುಖ ಆರೋಪಿ ಬಸವರಾಜ್ ಎಂಬಾತ ಬೆಟ್ಟಿಂಗ್‌ನಿಂದಲೇ ಕೋಟ್ಯಂತರ ರೂಪಾಯಿ ಸಂಪಾದಿಸಿರುವ ಸಂಗತಿಯನ್ನೂ ಬಾಯ್ಬಿಟ್ಟಿದ್ದಾರೆ. ಆತ ಸದ್ಯ ತಲೆಮರೆಸಿಕೊಂಡಿದ್ದು, ಪತ್ತೆ ಮಾಡುತ್ತಿದ್ದೇವೆ’ ಎಂದು ಪೊಲೀಸರು ತಿಳಿಸಿದರು.

ಬರಹ ಇಷ್ಟವಾಯಿತೆ?

 • 0

  Happy
 • 0

  Amused
 • 0

  Sad
 • 0

  Frustrated
 • 0

  Angry

Comments:

0 comments

Write the first review for this !