ಶುಕ್ರವಾರ, ಆಗಸ್ಟ್ 14, 2020
21 °C

ಐಪಿಎಲ್‌ ಕ್ರಿಕೆಟ್ ಬೆಟ್ಟಿಂಗ್: ಇಬ್ಬರ ಬಂಧನ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

ವಿಜಯಪುರ: ಐಪಿಎಲ್‌ ಕ್ರಿಕೆಟ್‌ ಬೆಟ್ಟಿಂಗ್‌ನಲ್ಲಿ ತೊಡಗಿದ್ದ ಇಬ್ಬರನ್ನು ವಿಜಯಪುರದ ಆದರ್ಶ ನಗರ ಪೊಲೀಸರು ಬಂಧಿಸಿದ್ದಾರೆ.

ವಿಜಯಪುರದ ಉಪ್ಪಲಿ ಬುರುಜ್‌ ಬಳಿಯ ಮನ್ಸೂರ್‌ ಅಲಿ ಮಹ್ಮದ್‌ ಶರೀಫ್‌ ಡಾಲಾಯತ್‌, ವಿಜಯಪುರ ತಾಲ್ಲೂಕಿನ ಕುಮಟಗಿ ತಾಂಡಾದ ಸುರೇಶ ಮೋತಿಸಿಂಗ್ ಚವ್ಹಾಣ ಬಂಧಿತರು.

ಸನ್‌ರೈಸರ್ಸ್‌ ಹೈದರಾಬಾದ್‌ ಹಾಗೂ ರಾಯಲ್‌ ಚಾಲೆಂಜರ್ಸ್‌ ಬೆಂಗಳೂರು ತಂಡಗಳ ನಡುವಿನ ಪಂದ್ಯಕ್ಕೆ ಇವರಿಬ್ಬರು ನಗರದ ದರ್ಗಾ ಕ್ರಾಸ್‌ ಬಳಿ ಬೆಟ್ಟಿಂಗ್‌ ನಡೆಸುತ್ತಿದ್ದಾಗ ಸಿಕ್ಕಿಬಿದ್ದಿದ್ದಾರೆ.

‘ಸನ್‌ರೈಸರ್ಸ್‌ ವಿರುದ್ಧ ರಾಯಲ್ ಚಾಲೆಂಜರ್ಸ್‌ ಗೆದ್ದರೆ ₹ 100ಕ್ಕೆ ₹ 1000 ಕೊಡುವುದಾಗಿ ಹಾಗೂ ರಾಯಲ್ ಚಾಲೆಂಜರ್ಸ್‌ ವಿರುದ್ಧ ಸನ್‌ರೈಸರ್ಸ್‌ ಗೆದ್ದರೆ ₹ 500ಕ್ಕೆ ₹ 1000 ಕೊಡುವುದಾಗಿ ಭಾನುವಾರ ಮುಸ್ಸಂಜೆ ಬೆಟ್ಟಿಂಗ್‌ ಆಡುತ್ತಿದ್ದ ಸಂದರ್ಭ ಆರೋಪಿಗಳನ್ನು ಬಂಧಿಸಲಾಗಿದೆ’ ಎಂದು ಆದರ್ಶ ನಗರ ಪೊಲೀಸರು ತಿಳಿಸಿದ್ದಾರೆ.

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನು ಲೈಕ್ ಮಾಡಿ, ಪ್ರಮುಖ ಸುದ್ದಿಗಳ ಅಪ್‌ಡೇಟ್ಸ್ ಪಡೆಯಿರಿ.

ಪ್ರಜಾವಾಣಿಯನ್ನು ಟ್ವಿಟರ್‌ನಲ್ಲಿ ಇಲ್ಲಿ ಫಾಲೋ ಮಾಡಿ.

ಟೆಲಿಗ್ರಾಂ ಮೂಲಕ ನಮ್ಮ ಸುದ್ದಿಗಳ ಅಪ್‌ಡೇಟ್ಸ್ ಪಡೆಯಲು ಇಲ್ಲಿ ಕ್ಲಿಕ್ ಮಾಡಿ.

ಈ ವಿಭಾಗದಿಂದ ಇನ್ನಷ್ಟು