ಗುರುವಾರ , ಡಿಸೆಂಬರ್ 5, 2019
19 °C

ಗ್ಯಾಸ್‌ ಕಟರ್ ಬಳಸಿ ಕಳವು; ಇಬ್ಬರ ಸೆರೆ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

Prajavani

ಬೆಂಗಳೂರು: ಗ್ಯಾಸ್ ಕಟರ್ ಬಳಸಿ ಚಿನ್ನಾಭರಣ ಮಳಿಗೆ, ಎಟಿಎಂ ಘಟಕ ಹಾಗೂ ಮನೆಗಳಲ್ಲಿ ಕಳವು ಮಾಡುತ್ತಿದ್ದ ಆರೋಪದಡಿ ಇಬ್ಬರನ್ನು ವರ್ತೂರು ಪೊಲೀಸರು ಬಂಧಿಸಿದ್ದಾರೆ.

ಎಂ.ಕೆ.ಪ್ರಕಾಶ್ (34), ಟಿ.ಜಗನ್ನಾಥ್ (24) ಬಂಧಿತರು. ₹ 6 ಲಕ್ಷ ಮೊತ್ತದ ಚಿನ್ನಾಭರಣ, ಒಂದೂವರೆ ಕೆ.ಜಿ ಬೆಳ್ಳಿ ಆಭರಣ, ಬೈಕ್ ಜಪ್ತಿ ಮಾಡಲಾಗಿದೆ.

‘ವರ್ತೂರು ಠಾಣೆ ವ್ಯಾಪ್ತಿಯಲ್ಲಿರುವ ಆಭರಣ ಮಳಿಗೆ, ಮೂರು ಮನೆಗಳಲ್ಲಿ ಆರೋಪಿಗಳು ಕಳ್ಳತನ ಎಸಗಿದ್ದರು. ಬೆಂಗಳೂರು ಗ್ರಾಮಾಂತರದ ವಿಜಯಪುರ ಠಾಣೆ ವ್ಯಾಪ್ತಿಯಲ್ಲಿರುವ ಎಟಿಎಂ ಘಟಕದ ಯಂತ್ರದಿಂದ ಹಣ ಕಳವು ಮಾಡಲು ಯತ್ನಿಸಿದ್ದರು. ಈ ಬಗ್ಗೆ ಆರೋಪಿಗಳು ತಪ್ಪೊಪ್ಪಿಕೊಂಡಿದ್ದಾರೆ’ ಎಂದು ಪೊಲೀಸರು ಹೇಳಿದರು.

‘ಮನೆ, ಮಳಿಗೆಗಳ ಬಾಗಿಲುಗಳನ್ನು ಗ್ಯಾಸ್ ಕಟರ್ ಬಳಸಿ ಮುರಿಯುತ್ತಿದ್ದ ಆರೋಪಿಗಳು, ಒಳನುಗ್ಗಿ ಕೃತ್ಯ ಎಸಗಿ ಪರಾರಿಯಾಗುತ್ತಿದ್ದರು. ಇವರು ಮತ್ತಷ್ಟು ಪ್ರಕರಣಗಳಲ್ಲಿ ಭಾಗಿಯಾಗಿರುವ ಅನುಮಾನವಿದ್ದು, ಆ ಬಗ್ಗೆ ಮಾಹಿತಿ ಕಲೆಹಾಕಲಾಗುತ್ತಿದೆ’ ಎಂದರು.

ಪ್ರತಿಕ್ರಿಯಿಸಿ (+)

ಈ ವಿಭಾಗದಿಂದ ಇನ್ನಷ್ಟು