ಅಸಭ್ಯ ವರ್ತನೆ: ಪೊಲೀಸರಿಗೆ ದೂರು

7

ಅಸಭ್ಯ ವರ್ತನೆ: ಪೊಲೀಸರಿಗೆ ದೂರು

Published:
Updated:

ಬೆಂಗಳೂರು: ‘ಕಬ್ಬನ್ ಉದ್ಯಾನದಲ್ಲಿ ಕೆಲವು ಸಲಿಂಗಿಗಳು ಅಸಭ್ಯವಾಗಿ ವರ್ತಿಸುತ್ತಿದ್ದು, ಅವರ ವಿರುದ್ಧ ಕ್ರಮ ಕೈಗೊಳ್ಳಿ’ ಎಂದು ಉದ್ಯಾನದ ನಡಿಗೆದಾರರ ಒಕ್ಕೂಟದ ಅಧ್ಯಕ್ಷ ಎಸ್‌.ಉಮೇಶ್‌, ಪೊಲೀಸರಿಗೆ ದೂರು ನೀಡಿದ್ದಾರೆ.

‘ಉದ್ಯಾನಕ್ಕೆ ನಿತ್ಯವೂ ನೂರಾರು ಮಂದಿ ಬರುತ್ತಾರೆ. ಅವರ ಜೊತೆ ಮಕ್ಕಳು ಇರುತ್ತಾರೆ. ಸದ್ಯ ಅವರೆಲ್ಲರಿಗೂ ಸಲಿಂಗಿಗಳ ವರ್ತನೆ ಕಿರಿಕಿರಿ ಉಂಟು ಮಾಡುತ್ತಿದೆ. ಅದರಿಂದಾಗಿ ಕೆಲವರು ಉದ್ಯಾನಕ್ಕೆ ಬರುವುದನ್ನೇ ನಿಲ್ಲಿಸಿದ್ದಾರೆ’ ಎಂದು ಉಮೇಶ್‌ ಮನವಿಯಲ್ಲಿ ತಿಳಿಸಿದ್ದಾರೆ. 

‘ಸಲಿಂಗಕಾಮ ಅಪರಾಧವಲ್ಲ ಎಂದು ಸುಪ್ರೀಂಕೋರ್ಟ್ ತೀರ್ಪು ನೀಡಿದೆ. ಅದರ ಆಚರಣೆ ನೆಪದಲ್ಲಿ ಕೆಲವರು, ಸಾರ್ವಜನಿಕ ಸ್ಥಳವಾದ ಉದ್ಯಾನದಲ್ಲಿ ಎಲ್ಲರ ಎದುರೇ ಅಸಭ್ಯವಾಗಿ ವರ್ತಿಸುತ್ತಿದ್ದಾರೆ. ಉದ್ಯಾನದಲ್ಲಿ ಪೊಲೀಸರ ಗಸ್ತು ಹೆಚ್ಚಿಸಿ, ಅವರ ವರ್ತನೆಗೆ ಕಡಿವಾಣ ಹಾಕಬೇಕು’ ಎಂದು ಅವರು ಒತ್ತಾಯಿಸಿದ್ದಾರೆ.

ಕಬ್ಬನ್ ಪಾರ್ಕ್ ಠಾಣೆ ಪೊಲೀಸರು, ‘ಮನವಿ ನೀಡಿದ್ದಾರೆ. ಪರಿಶೀಲಿಸುತ್ತಿದ್ದೇವೆ’ ಎಂದಿದ್ದಾರೆ.

ಬರಹ ಇಷ್ಟವಾಯಿತೆ?

 • 1

  Happy
 • 0

  Amused
 • 0

  Sad
 • 0

  Frustrated
 • 0

  Angry

Comments:

0 comments

Write the first review for this !