ಸೋಮವಾರ, ನವೆಂಬರ್ 18, 2019
22 °C

ನಾಳೆ ದಲಿತ ಉದ್ದಿಮೆದಾರರ ಸಮಾವೇಶ

Published:
Updated:

ಬೆಂಗಳೂರು: ‘ದಲಿತ ಉದ್ದಿಮೆದಾರರ ಸಂಘ ಹಾಗೂ ವಾಣಿಜ್ಯ ಮತ್ತು ಕೈಗಾರಿಕಾ ಇಲಾಖೆ ಆಶ್ರಯದಲ್ಲಿ ಸೆಪ್ಟೆಂಬರ್‌ 19ರಂದು ಬೆಳಿಗ್ಗೆ 10ಗಂಟೆಗೆ ನಗರದ ಅಂಬೇಡ್ಕರ್‌ ಭವನದಲ್ಲಿ ‘ಸರ್ಕಾರದ ಸವಲತ್ತುಗಳ ಅರಿವು ಮೂಡಿಸುವ ಕಾರ್ಯಕ್ರಮ ಏರ್ಪಡಿಸಲಾಗಿದೆ’ ಎಂದು ಸಂಘದ ಅಧ್ಯಕ್ಷರೂ ಆಗಿರುವ ರಾಜ್ಯಸಭಾ ಸದಸ್ಯ ಎಲ್‌.ಹನುಮಂತಯ್ಯ ತಿಳಿಸಿದರು.

ಮಂಗಳವಾರ ಇಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿ,‘ ಪರಿಶಿಷ್ಟ ಜಾತಿ ಹಾಗೂ ಪರಿಶಿಷ್ಟ ಪಂಗಡದವರು ಉದ್ದಿಮೆ ಆರಂಭಿಸಲು ಎದುರಾಗುವ ತೊಡಕುಗಳ ಬಗ್ಗೆ ಸಮಾವೇಶದಲ್ಲಿ ಚರ್ಚಿಸಲಾಗುವುದು. ಉದ್ದಿಮೆದಾರರಾಗಲು ಬಯಸುವವರಿಗೆ ಸರ್ಕಾರದಿಂದ ಇರುವ ಸೌಲಭ್ಯಗಳ ಬಗ್ಗೆ ಅರಿವು ಮೂಡಿಸುವ ಉದ್ದೇಶದಿಂದ ಕಾರ್ಯಕ್ರಮ ಆಯೋಜಿಸಲಾಗಿದೆ’ ಎಂದರು.

ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಕಾರ್ಯಕ್ರಮ ಉದ್ಘಾಟಿಸಲಿದ್ದಾರೆ. ಸವಲತ್ತುಗಳ ಮಾಹಿತಿ ಪುಸ್ತಕವನ್ನು ಕಾಂಗ್ರೆಸ್‌ ಶಾಸಕಾಂಗ ಪಕ್ಷದ ನಾಯಕ ಸಿದ್ದರಾಮಯ್ಯ ಬಿಡುಗಡೆ ಮಾಡಲಿದ್ದಾರೆ. ಉ‍ಪಮುಖ್ಯಮಂತ್ರಿ ಗೋವಿಂದ ಕಾರಜೋಳ, ಬೃಹತ್ ಮತ್ತು ಮಧ್ಯಮ ಕೈಗಾರಿಕಾ ಸಚಿವ ಜಗದೀಶ ಶೆಟ್ಟರ್, ಸಚಿವರಾದ ಬಿ.ಶ್ರೀರಾಮುಲು, ಎಚ್.ನಾಗೇಶ್‌, ಪ್ರಭು ಚೌಹಾಣ್‌ ಭಾಗವಹಿಸಲಿದ್ದಾರೆ ಎಂದರು.

 

ಪ್ರತಿಕ್ರಿಯಿಸಿ (+)