ಧರ್ಮರಾಜ ಚಡಚಣ ಎನ್‌ಕೌಂಟರ್‌ ಸಿಐಡಿ ತನಿಖೆಗೆ

7
ಸಿಪಿಐ, ಇಂಡಿ ಡಿವೈಎಸ್‌ಪಿ ವಿರುದ್ಧ ಕ್ರಮಕ್ಕೆ ಎಸ್‌ಪಿ ಪತ್ರ; ಶಿಸ್ತು ಕ್ರಮಕ್ಕೆ ಸೂಚನೆ ?

ಧರ್ಮರಾಜ ಚಡಚಣ ಎನ್‌ಕೌಂಟರ್‌ ಸಿಐಡಿ ತನಿಖೆಗೆ

Published:
Updated:

ವಿಜಯಪುರ: ಭೀಮಾ ತೀರದ ರೌಡಿ ಧರ್ಮರಾಜ ಚಡಚಣನ ಎನ್‌ಕೌಂಟರ್‌ ಪ್ರಕರಣವನ್ನು ಪೊಲೀಸ್ ಮಹಾ ನಿರ್ದೇಶಕರು ಗುರುವಾರ ಸಿಐಡಿ ತನಿಖೆಗೆ ಒಪ್ಪಿಸಿ, ಆದೇಶಿಸಿದ್ದಾರೆ.

‘ಪ್ರಕರಣದ ತನಿಖೆಯನ್ನು ಜಿಲ್ಲಾ ಪೊಲೀಸರು ಕೈಗೊಂಡಿದ್ದರು. ಎರಡ್ಮೂರು ದಿನಗಳಲ್ಲಿ ಸಿಐಡಿಗೆ ಹಸ್ತಾಂತರಿಸುವುದಾಗಿ’ ವಿಜಯಪುರ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಪ್ರಕಾಶ್‌ ಅಮೃತ್‌ ನಿಕ್ಕಂ ತಿಳಿಸಿದರು.

‘ಧರ್ಮರಾಜ ಚಡಚಣನ ಎನ್‌ಕೌಂಟರ್‌ ಹಾಗೂ ಗಂಗಾಧರ ಚಡಚಣನ ನಿಗೂಢ ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ, ಚಡಚಣ ಪೊಲೀಸ್‌ ಠಾಣೆಯ ಈ ಹಿಂದಿನ ಸಿಪಿಐ ಎಂ.ಬಿ.ಅಸೋಡೆ ಹಾಗೂ ಇಂಡಿ ಡಿವೈಎಸ್‌ಪಿ ರವೀಂದ್ರ ಶಿರೂರ ಮೇಲೆ ಕ್ರಮ ತೆಗೆದುಕೊಳ್ಳಬೇಕು ಎಂದು ಎಸ್‌ಪಿ ಪೊಲೀಸ್‌ ಮಹಾನಿರ್ದೇಶಕರಿಗೆ ಈ ಹಿಂದೆ ಪತ್ರ ಬರೆದಿದ್ದರು.

ಇದರ ಆಧಾರದಲ್ಲಿ ಈ ಇಬ್ಬರೂ ಅಧಿಕಾರಿಗಳ ವಿರುದ್ಧ ಶಿಸ್ತು ಕ್ರಮ ಜರುಗಿಸುವ ಪ್ರಕ್ರಿಯೆ ನಡೆದಿದೆ. ಸಿಪಿಐ ನಾಪತ್ತೆಯಾಗಿದ್ದಾರೆ’ ಎಂದು ಪೊಲೀಸ್ ಮೂಲಗಳು ತಿಳಿಸಿವೆ.

‘ಇಂಡಿ ಡಿವೈಎಸ್‌ಪಿ ವಿರುದ್ಧ ಶಿಸ್ತು ಕ್ರಮ ಜರುಗಿಸುವ ಯಾವುದೇ ಮಾಹಿತಿ ನಮಗೆ ಲಭ್ಯವಾಗಿಲ್ಲ’ ಎಂದು ಉತ್ತರ ವಲಯ ಐಜಿಪಿ ಅಲೋಕ್‌ಕುಮಾರ್‌ ‘ಪ್ರಜಾವಾಣಿ’ಗೆ ಪ್ರತಿಕ್ರಿಯಿಸಿದರು.

ಬರಹ ಇಷ್ಟವಾಯಿತೆ?

 • 0

  Happy
 • 0

  Amused
 • 0

  Sad
 • 0

  Frustrated
 • 0

  Angry

Comments:

0 comments

Write the first review for this !