ಚಾಮರಾಜನಗರ: ದಸರಾ ಮೆರವಣಿಗೆಗೆ ಸಾಂಸ್ಕೃತಿಕ ಕಲಾ ತಂಡಗಳ ಮೆರಗು

7

ಚಾಮರಾಜನಗರ: ದಸರಾ ಮೆರವಣಿಗೆಗೆ ಸಾಂಸ್ಕೃತಿಕ ಕಲಾ ತಂಡಗಳ ಮೆರಗು

Published:
Updated:
Deccan Herald

ಚಾಮರಾಜನಗರ: ಜಿಲ್ಲಾ ದಸರಾ ಮಹೋತ್ಸವದ ಅಂಗವಾಗಿ ಚಾಮರಾಜನಗರ ಜಿಲ್ಲಾ ಕೇಂದ್ರದಲ್ಲಿ ಶನಿವಾರ ಸಾಂಸ್ಕೃತಿಕ ಕಲಾ ತಂಡಗಳ ಮೆರವಣಿಗೆ ಅದ್ಧೂರಿಯಾಗಿ ನಡೆಯಿತು.

ಪಟ್ಟಣದ ಜಿಲ್ಲಾಡಳಿತ ಭವನದ ಮುಂಭಾಗವಿರುವ ಡಾ.ಬಿ.ಆರ್.ಅಂಬೇಡ್ಕರ್‌ ಪ್ರತಿಮೆಗೆ ಜಿಲ್ಲಾ ಉಸ್ತುವಾರಿ ಸಚಿವ ಸಿ.ಪುಟ್ಟರಂಗಶೆಟ್ಟಿ, ಶಾಸಕ ಎನ್‌.ಮಹೇಶ್, ಜಿಲ್ಲಾ ಪಂಚಾಯಿತಿ ಅಧ್ಯಕ್ಷೆ ಶಿವಮ್ಮ ಪುಷ್ಪ ನಮನ ಸಲ್ಲಿಸಿದ ಬಳಿಕ ಸಾಂಪ್ರದಾಯಿಕವಾಗಿ ನಂದಿ ಧ್ವಜಕ್ಕೆ ಪೂಜೆ ಸಲ್ಲಿಸಿ ಜಾನಪದ ಕಲಾ ತಂಡಗಳ ಮೆರವಣಿಗೆಗೆ ಚಾಲನೆ ನೀಡಿದರು. ಜನಪ್ರತಿನಿಧಿಗಳು, ಅಧಿಕಾರಿಗಳು ಸೇರಿದಂತೆ ಎಲ್ಲರೂ ಮೆರವಣಿಗೆಯೊಂದಿಗೆ ನಡೆದು ಸಾಗಿದರು.  

ಜಾನಪದ ಕಲಾ ತಂಡಗಳು: ಜಾನಪದ ಕಲಾ ತಂಡಗಳು ವಿಶಿಷ್ಟ ವೇಷ ಭೂಷಣ ಹಾಗೂ ಕಲೆಗಾರಿಕೆ ಪ್ರದರ್ಶಿಸಿ ಮೆರವಣಿಗೆಗೆ ವಿಶೇಷ ಮೆರುಗು ನೀಡಿದವು. ಮೆರವಣಿಗೆಯಲ್ಲಿ ಬೀಸು ಕಂಸಾಳೆ, ನಂದಿ ಧ್ವಜ ಕುಣಿತ, ದೊಣ್ಣೆ ವರಸೆ, ನಾದ ಸ್ವರ, ಡೋಲು, ಗೊರವರ ಕುಣಿತ, ಹುಲಿ ವೇಷಧಾರಿ, ವೀರಗಾಸೆ ಸೇರಿದಂತೆ 10ಕ್ಕೂ ಹೆಚ್ಚು ಕಲಾ ತಂಡಗಳು ಭಾಗವಹಿಸಿದ್ದವು.

ಸಂಪ್ರದಾಯ ಉಡುಗೆ ತೊಟ್ಟು ಸಂಭ್ರಮಿಸಿದ ವಿದ್ಯಾರ್ಥಿಗಳು: ಮೆರವಣಿಗೆಯಲ್ಲಿ ವಿವಿಧ ಶಾಲಾ ಕಾಲೇಜಿನ ವಿದ್ಯಾರ್ಥಿ, ವಿದ್ಯಾರ್ಥಿನಿಯರು ಸಂಪ್ರದಾಯ ಉಡುಗೆ ತೊಟ್ಟು ಸಂಭ್ರಮಿಸಿದರು. ಹುಡುಗರು ಬಿಳಿ ಪಂಚೆ, ಶರ್ಟು ತೊಟ್ಟು ಸಂಭ್ರಮಿಸಿದರೆ ಹುಡುಗಿಯರು ಸೀರೆ ಉಟ್ಟು ಮೆರವಣಿಗೆಯಲ್ಲಿ ಹೆಜ್ಜೆ ಹಾಕಿದರು. 

ಸ್ಕೌಟ್ಸ್‌ ಅಂಡ್‌ ಗೈಡ್ಸ್‌ ಮಕ್ಕಳ ತಂಡ : ಸರ್ಕಾರಿ ಮಹಿಳಾ ಪ್ರಥಮ ದರ್ಜೆ ಕಾಲೇಜಿನ ವಿದ್ಯಾರ್ಥಿನಿಯರು ಹಾಗೂ ಭಾರತ್‌ ಸ್ಕೌಟ್ಸ್‌ ಅಂಡ್‌ ಗೈಡ್ಸ್ ಜಿಲ್ಲಾ ಘಟಕದ ವಿದ್ಯಾರ್ಥಿಗಳು ಮೆರವಣಿಗೆಯಲ್ಲಿ ಭಾಗವಿಸಿದ್ದರು.

ಸಾಂಸ್ಕೃತಿಕ ಕಾರ್ಯಕ್ರಮ ಉದ್ಘಾಟನೆ: ಜಾನಪದ ಕಲಾ ತಂಡಗಳ ಮೆರವಣಿಗೆಯು ಚಾಮರಾಜೇಶ್ವರಸ್ವಾಮಿ ದೇವಸ್ಥಾನದ ಬಳಿ ಬರುತ್ತಿದ್ದಂತೆ ಸಾಂಸ್ಕೃತಿಕ ಕಾರ್ಯಕ್ರಮಗಳ ವೇದಿಕೆ ಕಾರ್ಯಕ್ರಮ ಆರಂಭವಾಯಿತು.

ಮೆರವಣಿಗೆ ಮಾರ್ಗ

ವಿಜೃಂಭಣೆಯಿಂದ ನಡೆದ ಮೆರವಣಿಗೆಯು ಜಿಲ್ಲಾಡಳಿತ ಭವನದ ಮಾರ್ಗವಾಗಿ ಬಿ.ರಾಚಯ್ಯ ಜೋಡಿ ರಸ್ತೆ, ಭುವನೇಶ್ವರಿ ವೃತ್ತ, ಕೆಎಸ್‌ಆರ್‌ಟಿಸಿ ಬಸ್‌ ನಿಲ್ದಾಣ, ಗುಂಡ್ಲುಪೇಟೆ ವೃತ್ತ, ದೊಡ್ಡ ಅಂಗಡಿ ಬೀದಿ, ಚಿಕ್ಕ ಅಂಗಡಿ ಬೀದಿ, ಸಂತೇರಹಳ್ಳಿ ವೃತ್ತದಿಂದ ಮತ್ತೆ ಭುವನೇಶ್ವರಿ ವೃತ್ತದಿಂದ ಸಾಗಿದ ಮೆರವಣಿಗೆ ಚಾಮರಾಜೇಶ್ವರಸ್ವಾಮಿ ದೇವಸ್ಥಾನದ ವರೆಗೆ ನಡೆಯಿತು.


ಹುಲಿ ಹಾಗೂ ವಿವಿಧ ವೇಷಧಾರಿಗಳು

 

ಬರಹ ಇಷ್ಟವಾಯಿತೆ?

 • 3

  Happy
 • 0

  Amused
 • 0

  Sad
 • 0

  Frustrated
 • 0

  Angry

Comments:

0 comments

Write the first review for this !