ಲೋಕಸಭಾ ಚುನಾವಣೆ: ಪರಿಶೀಲನೆ

ಬುಧವಾರ, ಏಪ್ರಿಲ್ 24, 2019
29 °C

ಲೋಕಸಭಾ ಚುನಾವಣೆ: ಪರಿಶೀಲನೆ

Published:
Updated:
Prajavani

ವಿಜಯಪುರ: ‘ಲೋಕಸಭಾ ಸಾರ್ವತ್ರಿಕ ಚುನಾವಣೆಯನ್ನು ಮುಕ್ತ ಹಾಗೂ ನ್ಯಾಯಸಮ್ಮತವಾಗಿ ನಡೆಸಲು ಅವಶ್ಯವಿರುವ ಎಲ್ಲ ಕ್ರಮಗಳನ್ನು ಕೈಗೊಳ್ಳಿ’ ಎಂದು ಜಿಲ್ಲಾ ಚುನಾವಣಾಧಿಕಾರಿಯೂ ಆದ ಜಿಲ್ಲಾಧಿಕಾರಿ ಎಂ.ಕನಗವಲ್ಲಿ ಅಧಿಕಾರಿಗಳಿಗೆ ಸೂಚಿಸಿದರು.

ಸಿಂದಗಿ, ದೇವರಹಿಪ್ಪರಗಿ ಮತ ಕ್ಷೇತ್ರಗಳಲ್ಲಿ ಚುನಾವಣೆಗೆ ಸಂಬಂಧಪಟ್ಟಂತೆ ಮಾಡಿಕೊಳ್ಳಲಾದ ಸಿದ್ಧತೆಗಳ ಬಗ್ಗೆ ಶನಿವಾರ ಭೇಟಿ ನೀಡಿ, ಪರಿಶೀಲನೆ ನಡೆಸಿದ ಅವರು, ‘ಅತ್ಯಂತ ಮಹತ್ವದ ಚುನಾವಣೆ ಇದಾಗಿರುವುದರಿಂದ, ಅಧಿಕಾರಿಗಳಿಗೆ ನೀಡಲಾದ ಜವಾಬ್ದಾರಿಗಳನ್ನು ಅಚ್ಚುಕಟ್ಟಾಗಿ ನಿರ್ವಹಿಸಬೇಕು. ಲೋಪವಾಗದಂತೆ ಎಚ್ಚರಿಕೆ ವಹಿಸಿ ಕಾರ್ಯ ನಿರ್ವಹಿಸಿ’ ಎಂದು ಇದೇ ಸಂದರ್ಭ ಕಟ್ಟುನಿಟ್ಟಿನ ಸೂಚನೆ ನೀಡಿದರು.

ವಿವಿಧ ಮತಗಟ್ಟೆಗಳಲ್ಲಿ ಕಲ್ಪಿಸಲಾಗಿರುವ ಮೂಲ ಸೌಲಭ್ಯಗಳ ಬಗ್ಗೆಯೂ ಜಿಲ್ಲಾಧಿಕಾರಿ ಇದೇ ವೇಳೆ ಪರಿಶೀಲನೆ ನಡೆಸಿದರು. ಭದ್ರತಾ ಕೊಠಡಿಗಳ ಪರಿಶೀಲನೆ ಸೇರಿದಂತೆ ಇತರೆ ಚುನಾವಣಾ ಸಿದ್ಧತೆಗಳ ಬಗ್ಗೆ ಸಹ ಪರಿಶೀಲನೆ ನಡೆಸಿ, ಸಂಬಂಧಪಟ್ಟ ಅಧಿಕಾರಿಗಳೊಂದಿಗೆ ಚರ್ಚೆ ನಡೆಸಿದರು.

ಬರಹ ಇಷ್ಟವಾಯಿತೆ?

 • 0

  Happy
 • 0

  Amused
 • 0

  Sad
 • 0

  Frustrated
 • 0

  Angry

Comments:

0 comments

Write the first review for this !