ಬೆಂಗಳೂರು: ನವೆಂಬರ್ 1 ಕನ್ನಡಿಗರ ಹೆಮ್ಮೆಯ ದಿನ. ಕರುನಾಡು ಕೆಂಪು ಹಳದಿ ಭಾವುಟ ಕಂಗೊಳಿಸುತ್ತಿದೆ. ಇಂದು ನಾಡಿನಾದ್ಯಂತ 70ನೇ ಕನ್ನಡ ರಾಜ್ಯೋತ್ಸವದ ಸಂಭ್ರಮ. ಕನ್ನಡ ಹಬ್ಬಕ್ಕೆ ಸಿನಿ ತಾರೆಯರು, ರಾಜಕಾರಣಿಗಳು ಶುಭಕೋರಿದ್ದಾರೆ.

ರಾಕಿಂಗ್ ಸ್ಟಾರ್ ಯಶ್ ಅವರು, ‘ಎದೆ ತಟ್ಟಿ ಹೇಳು ನಾ ಭಾರತೀಯನೆಂದು, ಗರ್ವದಿಂದ ಬಾಳು ನಾ ಕನ್ನಡಿಗನೆಂದು, ಸಾವಿರ ಭಾಷೆ ನಾಲಿಗೆಯಲ್ಲಿರಲಿ, ಕನ್ನಡ ಭಾಷೆ ಹೃದಯದಲ್ಲಿರಲಿ, ಸಿರಿಗನ್ನಡಂ ಗೆಲ್ಗೆ ಸಿರಿಗನ್ನಡಂ ಬಾಳ್ಗೆ’ ಎಂದು ಸಾಮಾಜಿಕ ಮಾಧ್ಯಮದಲ್ಲಿ ಬರೆದುಕೊಂಡಿದ್ದಾರೆ.

ನಿರ್ದೇಶಕ ‘ಪವನ್ ಒಡೆಯರ್ ಅವರ ಸ್ನೇಹಿತರ ಜತೆ ಬೆಟ್ಟವೊಂದರಲ್ಲಿ ಉದ್ದನೆಯ ಕನ್ನಡ ಬಾವುಟ ಹಿಡಿದು ರಾಜ್ಯೋತ್ಸವಕ್ಕೆ ಶುಭಕೋರಿದ್ದರೆ, ರಿಷಬ್ ಶೆಟ್ಟಿ ಅವರು ಎಲ್ಲಾದರು ಇರು ಎಂತಾದರು ಇರು, ಎಂದೆಂದಿಗೂ ನೀ ಕನ್ನಡವಾಗಿರು ಎಂದಿದ್ದಾರೆ.

ರುಕ್ಮಿಣಿ ವಸಂತ್, ಅಶ್ವಿನಿ ಪುನೀತ್ ರಾಜ್ಕುಮಾರ್,ಹಾಗೂ ಅನೇಕ ಸಿನಿ ತಾರೆಯರು ತಮ್ಮ ಸಾಮಾಜಿಕ ಮಾಧ್ಯಮದಲ್ಲಿ ಕನ್ನಡ ರಾಜ್ಯೋತ್ಸವದ ಬಗ್ಗೆ ಹಂಚಿಕೊಂಡಿದ್ದಾರೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.