ನಿರ್ಮಾಣ ಹಂತದ ಕಟ್ಟಡದಲ್ಲಿ ಶವ ಪತ್ತೆ

7

ನಿರ್ಮಾಣ ಹಂತದ ಕಟ್ಟಡದಲ್ಲಿ ಶವ ಪತ್ತೆ

Published:
Updated:

ಬೆಂಗಳೂರು: ಪದ್ಮನಾಭನಗರ ಬಳಿಯ ನಿರ್ಮಾಣ ಹಂತದ ಕಟ್ಟಡದ ಬಳಿ ಅಪರಿಚಿತ ಶವ ಪತ್ತೆಯಾಗಿದ್ದು, ಬನಶಂಕರಿ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಕದಿರೇನಹಳ್ಳಿ ಹೊರ ವರ್ತುಲ ರಸ್ತೆಯಲ್ಲಿ ಕಟ್ಟಡ ನಿರ್ಮಿಸಲಾಗುತ್ತಿದೆ. ಅಲ್ಲಿಯೇ 30ರಿಂದ 35 ವರ್ಷದ ವ್ಯಕ್ತಿ ಮೃತಪಟ್ಟಿದ್ದಾನೆ. ಆತನ ಹೆಸರು ಗೊತ್ತಾಗಿಲ್ಲ ಎಂದು ಪೊಲೀಸರು ತಿಳಿಸಿದರು.

‘ಮುಖದ ಮೇಲೆ ಗಾಯದ ಗುರುತುಗಳಿವೆ. ತಲೆಗೆ ತೀವ್ರ ಪೆಟ್ಟು ಬಿದ್ದು ಮೃತಪಟ್ಟಿರುವ ಅನುಮಾನವಿದೆ. ಆತನ ಬಲಗೈಯಲ್ಲಿ ‘ಅಮ್ಮಾ’ ಎಂಬ ಹಚ್ಛೆ ಇದೆ. ಕಟ್ಟಡ ನಿರ್ಮಾಣ ಜವಾಬ್ದಾರಿ ವಹಿಸಿಕೊಂಡಿರುವ ವ್ಯವಸ್ಥಾಪಕ ಪ್ರಸಾದ್, ಗುತ್ತಿಗೆದಾರರಾದ ಅರುಣ್ ಹಾಗೂ ನವೀನ್‌ಕುಮಾರ್‌ ಎಂಬುವರನ್ನು ವಿಚಾರಣೆಗೆ ಒಳಪಡಿಸಲಾಗಿತ್ತು. ಮೃತ ವ್ಯಕ್ತಿ ಯಾರು ಎಂಬುದು ಗೊತ್ತಿಲ್ಲವೆಂದು ಅವರು ಹೇಳಿದ್ದಾರೆ. ಶವವನ್ನು ಕಿಮ್ಸ್‌ ಆಸ್ಪತ್ರೆಯಲ್ಲಿರಿಸಲಾಗಿದೆ’ ಎಂದರು.

 

 

ಬರಹ ಇಷ್ಟವಾಯಿತೆ?

 • 0

  Happy
 • 0

  Amused
 • 0

  Sad
 • 0

  Frustrated
 • 0

  Angry

Comments:

0 comments

Write the first review for this !