ಗುರುವಾರ, 25 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಮತ ಚಲಾಯಿಸುವ ಮುನ್ನ ಇದನ್ನೊಮ್ಮೆ ಓದಿ

Last Updated 10 ಮೇ 2019, 8:38 IST
ಅಕ್ಷರ ಗಾತ್ರ

ಬೆಂಗಳೂರು: ರಾಜ್ಯದ ಒಟ್ಟು 14 ಕ್ಷೇತ್ರಗಳಿಗೆ ಇಂದು(ಏ.18, ಬುಧವಾರ) ಮತದಾನ ನಡೆಯಲಿದೆ. ಈ ಪೈಕಿ ಬೆಂಗಳೂರು ದಕ್ಷಿಣ, ಮಂಡ್ಯ, ಹಾಸನ, ತುಮಕೂರು ಕ್ಷೇತ್ರಗಳು ದೇಶದ ಗಮನ ಸೆಳೆದಿವೆ. ಈ ಕ್ಷೇತ್ರಗಳಲ್ಲಿ ಚುನಾವಣೆ ಘೋಷಣೆಯಾದ ನಂತರ ಈವರೆಗೆ ನಡೆದಿರುವ ರಾಜಕೀಯ ಬೆಳವಣಿಗೆಗಳ ಸಮಗ್ರ ಮಾಹಿತಿ ಇಲ್ಲಿದೆ.

ದೇವೇಗೌಡರು ಸ್ಪರ್ಧಿಸಿರುವ ತುಮಕೂರು, ದೇವೇಗೌಡರ ಮೊಮ್ಮಕ್ಕಳಾದ ಪ್ರಜ್ವಲ್ ರೇವಣ್ಣ ಸ್ಪರ್ಧಿಸಿರುವ ಹಾಸನ,ನಿಖಿಲ್ ಕುಮಾರಸ್ವಾಮಿ ಕಣದಲ್ಲಿರುವ ಮಂಡ್ಯ ಕ್ಷೇತ್ರಗಳಲ್ಲೂ ಅಭ್ಯರ್ಥಿಗಳ ಭವಿಷ್ಯವನ್ನು ಮತದಾರರು ನಾಳೆ ನಿರ್ಧರಿಸುತ್ತಾರೆ.

ಬೆಂಗಳೂರು ದಕ್ಷಿಣದಲ್ಲಿ ತೇಜಸ್ವಿನಿ ಅನಂತಕುಮಾರ್ ಅವರಿಗೆ ಟಿಕೆಟ್ ತಪ್ಪಿದ್ದು ದೊಡ್ಡ ಸುದ್ದಿಯಾಗಿತ್ತು. ತೇಜಸ್ವಿ ಸೂರ್ಯ ಅವರಿಗೆ ಟಿಕೆಟ್ ಘೋಷಣೆಯಾದ ಬೆನ್ನಲ್ಲೇಡಾ.ಸೋಮ್ ದತ್ತಾ ಅವರ ಹಳೆಯ ಟ್ವೀಟ್‌ಗಳು ವೈರಲ್ ಆಗಿ ಚರ್ಚೆಗೆ ಗ್ರಾಸವಾಗಿದ್ದವು. ಈ ಎಲ್ಲ ಕಾರಣಗಳಿಂದ ಬೆಂಗಳೂರು ದಕ್ಷಿಣ ಸಹ ದೇಶದ ಗಮನ ಸೆಳೆದಿತ್ತು.

ಉಳಿದಂತೆ ಉಡುಪಿ–ಚಿಕ್ಕಮಗಳೂರು, ಮಂಗಳೂರು, ಚಿತ್ರದುರ್ಗ, ತುಮಕೂರು, ಮೈಸೂರು–ಕೊಡಗು, ಚಾಮರಾಜನಗರ, ಬೆಂಗಳೂರು ಗ್ರಾಮಾಂತರ, ಬೆಂಗಳೂರು ಉತ್ತರ, ಬೆಂಗಳೂರು ಕೇಂದ್ರ, ಚಿಕ್ಕಬಳ್ಳಾಪುರ ಮತ್ತು ಕೋಲಾರ ಕ್ಷೇತ್ರಗಳಿಗೆ ನಾಳೆ ಮತದಾನ ನಡೆಯಲಿದೆ.

ಚುನಾವಣಾ ಕಣದಲ್ಲಿ ಈವರೆಗೆ ನಡೆದಿರುವ ಬೆಳವಣಿಗೆಗಳು, ಅಪರೂಪದ ಸಂದರ್ಶನಗಳು, ಕ್ಷೇತ್ರದ ಸಮಗ್ರ ನೋಟ ನೀಡುವ ‘ಅಖಾಡದಲ್ಲೊಂದು ಸುತ್ತು’, ರಾಜಕೀಯ ಬೆಳವಣಿಗೆಗಳನ್ನು ವಿಶ್ಲೇಷಿಸುವ ‘ಕ್ಷೇತ್ರನೋಟ’ದ ಲಿಂಕ್‌ಗಳು ಕೆಳಗಿವೆ. ಈ ಲಿಂಕ್‌ಗಳನ್ನು ಬಳಸಿ ನೀವು ಚುನಾವಣಾ ಕಣದ ಸಮಗ್ರ ಪರಿಚಯ ಮಾಡಿಕೊಳ್ಳಬಹುದು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT