ದಿನೇಶ್ ಮಾಹೇಶ್ವರಿಗೆ ‘ಸುಪ್ರೀಂ’ ನ್ಯಾಯಮೂರ್ತಿ ಹುದ್ದೆ: ಶಿಫಾರಸು

7

ದಿನೇಶ್ ಮಾಹೇಶ್ವರಿಗೆ ‘ಸುಪ್ರೀಂ’ ನ್ಯಾಯಮೂರ್ತಿ ಹುದ್ದೆ: ಶಿಫಾರಸು

Published:
Updated:
Prajavani

ಬೆಂಗಳೂರು: ರಾಜ್ಯ ಹೈಕೋರ್ಟ್‌ನ ಮುಖ್ಯ ನ್ಯಾಯಮೂರ್ತಿ ದಿನೇಶ್‌ ಮಾಹೇಶ್ವರಿ ಅವರಿಗೆ ಸುಪ್ರೀಂ ಕೋರ್ಟ್‌ ನ್ಯಾಯಮೂರ್ತಿಯಾಗಿ ಪದನ್ನೋತಿ ನೀಡಲು ಶಿಫಾರಸು ಮಾಡಲಾಗಿದೆ.

ಈ ಕುರಿತಂತೆ ಸುಪ್ರೀಂ ಕೋರ್ಟ್ ಮುಖ್ಯ ನ್ಯಾಯಮೂರ್ತಿ ರಂಜನ್ ಗೊಗೊಯಿ, ಸುಪ್ರೀಂ ಕೋರ್ಟ್‌ ನ್ಯಾಯಮೂರ್ತಿಗಳಾದ ಎ.ಕೆ.ಸಿಕ್ರಿ, ಎಸ್.ಎ.ಬೊಬ್ಡೆ, ಎನ್‌.ವಿ.ರಮಣ ಹಾಗೂ ಅರುಣ್‌ ಮಿಶ್ರಾ ಅವರನ್ನು ಒಳಗೊಂಡ ಕೊಲಿಜಿಯಂ ಸಮಿತಿ ಕೇಂದ್ರ ಸರ್ಕಾರಕ್ಕೆ ಶಿಫಾರಸು ಮಾಡಿದೆ.

ದೆಹಲಿ ಹೈಕೋರ್ಟ್‌ ನ್ಯಾಯಮೂರ್ತಿ ಸಂಜೀವ್‌ ಖನ್ನಾ ಅವರನ್ನೂ ಸುಪ್ರೀಂ ಕೋರ್ಟ್‌ ನ್ಯಾಯಮೂರ್ತಿಯಾಗಿ ಪದನ್ನೋತಿ ನೀಡುವಂತೆ ಕೊಲಿಜಿಯಂ ಶಿಫಾರಸು ಮಾಡಿದೆ. ದಿನೇಶ್‌ ಮಾಹೇಶ್ವರಿ ಅವರು 2018ರ ಫೆಬ್ರುವರಿ 12ರಂದು ಕರ್ನಾಟಕ ಹೈಕೋರ್ಟ್ ಮುಖ್ಯ ನ್ಯಾಯಮೂರ್ತಿಯಾಗಿ ‍ಪದಗ್ರಹಣ ಮಾಡಿದ್ದರು.

ಬರಹ ಇಷ್ಟವಾಯಿತೆ?

  • 8

    Happy
  • 1

    Amused
  • 0

    Sad
  • 0

    Frustrated
  • 0

    Angry

Comments:

0 comments

Write the first review for this !