10 ಗ್ರಾಮಗಳ ಅಭಿವೃದ್ಧಿಗೆ ₹10 ಕೋಟಿ ಅನುದಾನ: ಸಂಸದ ಸುರೇಶ್‌

7

10 ಗ್ರಾಮಗಳ ಅಭಿವೃದ್ಧಿಗೆ ₹10 ಕೋಟಿ ಅನುದಾನ: ಸಂಸದ ಸುರೇಶ್‌

Published:
Updated:
Deccan Herald

ಹಾರೋಹಳ್ಳಿ (ಕನಕಪುರ): ಗ್ರಾಮ ವಿಕಾಸ ಯೋಜನೆಯಡಿ ಗ್ರಾಮಗಳ ಅಭಿವೃದ್ಧಿಗಾಗಿ ₹1 ಕೋಟಿ ಅನುದಾನ ಬಿಡುಗಡೆಯಾಗಿದೆ. ರಸ್ತೆ, ಚರಂಡಿ ಸೇರಿದಂತೆ ವಿವಿಧ ರೀತಿಯ ಅಭಿವೃದ್ಧಿ ಕೆಲಸಗಳು ಗ್ರಾಮದಲ್ಲಿ ನಡೆಯುತ್ತಿದ್ದು, ಗುಣಮಟ್ಟದ ಕೆಲಸಕ್ಕೆ ಆದ್ಯತೆ ನೀಡಬೇಕೆಂದು ಸಂಸದ ಡಿ.ಕೆ.ಸುರೇಶ್‌ ಗ್ರಾಮಸ್ಥರಿಗೆ ಸಲಹೆ ನೀಡಿದರು.

ತಾಲ್ಲೂಕಿನ ಹಾರೋಹಳ್ಳಿ ಹೋಬಳಿ ಚಿಕ್ಕಕಲ್‌ಬಾಳು ಗ್ರಾಮದಲ್ಲಿ ಗ್ರಾಮ ವಿಕಾಸ ಯೋಜನೆಯಡಿ ವಿಧಾನ ಪರಿಷತ್‌ ಸದಸ್ಯರ ನಿಧಿಯಿಂದ ಬಿಡುಗಡೆಯಾಗಿದ್ದ ₹1 ಕೋಟಿ ಕಾಮಗಾರಿಗಳಿಗೆ ಗುದ್ದಲಿ ಪೂಜೆ ನೆರವೇರಿಸಿ ಮಾತನಾಡಿದರು.

ಲೋಕಸಭಾ ಕ್ಷೇತ್ರ ವ್ಯಾಪ್ತಿಯ 10 ಗ್ರಾಮಗಳಿಗೆ ₹10 ಕೋಟಿ ಬಿಡುಗಡೆಯಾಗಿದೆ. 8 ಗ್ರಾಮಗಳಿಗೆ ಶುದ್ಧ ಕುಡಿಯುವ ನೀರಿನ ಘಟಕ ಸ್ಥಾಪಿಸಲು ಹಣ ಬಿಡುಗಡೆಯಾಗಿದ್ದು, ಅಭಿವೃದ್ಧಿಯೇ ಮುಖ್ಯ ಧ್ಯೇಯವಾಗಿದೆ ಎಂದು ಹೇಳಿದರು.

ರಸ್ತೆ ಅಭಿವೃದ್ದಿಗೆ ₹50 ಲಕ್ಷ, ಸಮುದಾಯ ಭವನ ನಿರ್ಮಾಣಕ್ಕೆ ₹12.50 ಲಕ್ಷ ಅನುದಾನವಿದ್ದು, 570 ಮೀ ಕಾಂಕ್ರೀಟ್ ರಸ್ತೆ ಮತ್ತು 1,450 ಮೀ ಚರಂಡಿ ಕಾಮಗಾರಿ ನಡೆಯಬೇಕಿದೆ. ಉತ್ತಮವಾಗಿ ಕೆಲಸ ಮಾಡಲು ಅಧಿಕಾರಿಗಳಿಗೆ ಮತ್ತು ಗುತ್ತಿಗೆದಾರರಿಗೆ ಸೂಚನೆ ನೀಡಿದರು.

ವಿಧಾನ ಪರಿಷತ್ ಸದಸ್ಯ ಎಸ್.ರವಿ ಮಾತನಾಡಿ, ಚಿಕ್ಕಕಲ್‌ಬಾಳು ಅತಿ ಹಿಂದುಳಿದ ಗ್ರಾಮವಾಗಿದೆ. ಈ ಗ್ರಾಮ ಅಭಿವೃದ್ಧಿ ಪಥದಲ್ಲಿ ಸಾಗಲಿ ಎನ್ನುವ ದೃಷ್ಟಿಯಿಂದ ಸಂಸದರ ನಿಧಿಯಿಂದ ಹಣ ಬಿಡುಗಡೆ ಮಾಡಲಾಗಿದೆ. ₹12.50 ಲಕ್ಷದ ಜತೆಗೆ ಇನ್ನೂ ₹10 ಲಕ್ಷ ಹಣ ಬಿಡುಗಡೆಗೊಳಿಸಿ ಉತ್ತಮ ಸುಸಜ್ಜಿತವಾದ ಸಮುದಾಯ ಭವನ ನಿರ್ಮಾಣ ಮಾಡಲಾಗುವುದು ಎಂದು ಹೇಳಿದರು.

ತಾಲ್ಲೂಕು ಪಂಚಾಯಿತಿ ಅಧ್ಯಕ್ಷ ರಾಜಶೇಖರ್, ಜಿಲ್ಲಾ ಪಂಚಾಯಿತಿ ಸದಸ್ಯೆ ಉಷಾರವಿ, ತಾಲ್ಲೂಕು ಪಂಚಾಯಿತಿ ಸದಸ್ಯೆ ರತ್ನಮ್ಮ ಸಿದ್ದರಾಜು, ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಜೆ.ಸಿ.ಬಿ.ಅಶೋಕಕುಮಾರ್, ಜಿಲ್ಲಾ ಪಂಚಾಯಿತಿ ಎ.ಇ.ಇ ಕುಮಾರ್ ಎಂ.ಆರ್‌, ಎ.ಇ.ಮಲ್ಲೇಶ್, ಗ್ರಾಮ ಪಂಚಾಯಿತಿ ಅಭಿವೃದ್ಧಿ ಅಧಿಕಾರಿ ಲೋಕೇಶ್ ಇದ್ದರು.

Tags: 

ಬರಹ ಇಷ್ಟವಾಯಿತೆ?

 • 0

  Happy
 • 0

  Amused
 • 0

  Sad
 • 0

  Frustrated
 • 0

  Angry

Comments:

0 comments

Write the first review for this !