ಶಿವಮೊಗ್ಗ: ನಗರ ಪಾಲಿಕೆ ವ್ಯಾಪ್ತಿಯ 87 ಸರ್ಕಾರಿ ಪ್ರಾಥಮಿಕ ಹಾಗೂ ಪ್ರೌಢಶಾಲೆಗಳ ದುರಸ್ತಿಗಾಗಿ ಸರ್ಕಾರ ₨ 15 ಕೋಟಿ ಬಿಡುಗಡೆ ಮಾಡಿದೆ. ಎಲ್ಲ ಕಟ್ಟಡಗಳಕಾಮಗಾರಿಗಳು ಶೀಘ್ರಪೂರ್ಣಗೊಳ್ಳಲಿವೆ ಎಂದುಜಿಲ್ಲಾ ಉಸ್ತುವಾರಿ ಸಚಿವ ಕೆ.ಎಸ್.ಈಶ್ವರಪ್ಪ ಹೇಳಿದರು.

ನಗರದ ದುರ್ಗಿಗುಡಿ ಸರ್ಕಾರಿ ಶಾಲೆ ಆವರಣದಲ್ಲಿ ಸರ್ಕಾರಿ ಪ್ರಾಥಮಿಕ, ಪ್ರೌಢಶಾಲೆಗಳ ಅಭಿವೃದ್ಧಿ ಕಾಮಗಾರಿಗಳಿಗೆ ಗುದ್ದಲಿ ಪೂಜೆ ನೆರವೇರಿಸಿ ಅವರು ಮಾತನಾಡಿದರು.

ನಗರ ವ್ಯಾಪ್ತಿಯ ಸರ್ಕಾರಿ ಶಾಲೆಗಳ ದುರಸ್ತಿಗೆಯಾವುದೇ ಅನುದಾನ ಇರಲಿಲ್ಲ. ಇದೇ ಮೊದಲ ಬಾರಿಗೆ ಶಿವಮೊಗ್ಗ ನಗರ ಪಾಲಿಕೆ ವ್ಯಾಪ್ತಿಯ ಎಲ್ಲಾ ಶಾಲೆಗಳ ದುರಸ್ತಿಗೆ ಸರ್ಕಾರ ಅನುದಾನ ನೀಡಿದೆ. ಹಣಸದ್ಬಳಕೆಯಾಗಬೇಕು.ಇದೇ ರೀತಿ ರಾಜ್ಯದ ಎಲ್ಲಾ ನಗರ ಪ್ರದೇಶದ ಶಾಲೆಗಳ ದುರಸ್ತಿಗೆ ಅನುದಾನನೀಡಲುಸಚಿವ ಸಂಪುಟಸಭೆಯಲ್ಲಿ ಮನವಿ ಮಾಡಲಾಗುವುದು ಎಂದರು.

ಶಾಲಾ ಕಟ್ಟಡಗಳದುರಸ್ತಿಯ ಜತೆಗೆ47 ಶೌಚಾಲಯಗಳ ನಿರ್ಮಾಣಕ್ಕೂ ಅನುದಾನ ಒದಗಿಸಲಾಗಿದೆ.ಶಾಲೆಗಳಲ್ಲಿ ಶೌಚಾಲಯಗಳ ಸ್ವಚ್ಚತೆ ಕಾಪಾಡಬೇಕು. ಶೌಚಾಲಯಗಳ ನಿರ್ವಹಣೆಗೆ ಆಯಾಶಾಲಾಭಿವೃದ್ಧಿ ಸಮಿತಿಗಳು ಸೂಕ್ತ ವ್ಯವಸ್ಥೆಮಾಡಿಕೊಳ್ಳಬೇಕು. ದುರಸ್ತಿ ಕಾಮಗಾರಿಗಳಿಗೆ ನೀಡಿರುವ ಅನುದಾನ ಸಮರ್ಪಕವಾಗಿ ಬಳಕೆಮಾಡಿಕೊಳ್ಳಬೇಕು. ಶಿಕ್ಷಕರು, ಪಾಲಕರು ಹಾಗೂ ಸಾರ್ವಜನಿಕರ ನಿಗಾವಹಿಸಬೇಕು ಉತ್ತಮ ಗುಣಮಟ್ಟದ ಕಾಮಗಾರಿ ಖಾತ್ರಿಪಡಿಸಬೇಕು.ಕಳಪೆ ಕಾಮಗಾರಿಗೆ ಅವಕಾಶ ನೀಡದಂತೆ ನಿಗಾವಹಿಸಬೇಕು. ಈ ಶಾಲೆಗಳು ರಾಜ್ಯಕ್ಕೆ ಮಾದರಿಯಾಗಬೇಕು ಎಂದುಸಲಹೆ ನೀಡಿದರು.

ಸ್ಮಾರ್ಟ್ಸಿಟಿಯೋಜನೆಯಲ್ಲಿಮೂಲಸೌಕರ್ಯ ಕಾಮಗಾರಿಗಳು ನಡೆಯುತ್ತಿವೆ. 100 ಉದ್ಯಾನ ನಿರ್ಮಿಸಲಾಗುತ್ತಿದೆ. ಈಗಾಗಲೇ 35 ಉದ್ಯಾನಗಳ ಕಾಮಗಾರಿ ಟೆಂಡರ್ ಹಂತದಲ್ಲಿದೆ. ಎಲ್ಲಾ 24 ಸ್ಮಶಾನಗಳನ್ನೂ ಅಭಿವೃದ್ಧಿಪಡಿಸಲು ಕ್ರಮ ಕೈಗೊಳ್ಳಲಾಗಿದೆ ಎಂದುವಿವರ ನೀಡಿದರು.

ಎನ್ಇಎಸ್ ಸಂಸ್ಥೆ ಪಾಲಿಕೆ ವ್ಯಾಪ್ತಿಯಸರ್ಕಾರಿಶಾಲೆಗಳಲ್ಲಿ ಪೀಠೋಪಕರಣ ದುರಸ್ತಿ, ಹೊಸ ಪೀಠೋಪಕರಣ ನೀಡುತ್ತಿದೆ ಎಂದು ಮೆಚ್ಚುಗೆ ವ್ಯಕ್ತಪಡಿಸಿದರು. ಆಡಳಿತ ಮಂಡಳಿ ಪದಾಧಿಕಾರಿಗಳನ್ನು ಸನ್ಮಾನಿಸಿದರು.

ವಿಧಾನ ಪರಿಷತ್ ಸದಸ್ಯ ಆರ್.ಪ್ರಸನ್ನಕುಮಾರ್ ಮಾತನಾಡಿ, ಸಚಿವ ಕೆ.ಎಸ್.ಈಶ್ವರಪ್ಪಅವರು ಪಾಲಿಕೆ ವ್ಯಾಪ್ತಿಯಸರ್ಕಾರಿ ಶಾಲೆಗಳ ದುರಸ್ತಿಗೆಕ್ರಮ ಕೈಗೊಂಡಿದ್ದಾರೆ ಎಂದು ಶ್ಲಾಘಿಸಿದರು.

ವಿಧಾನ ಪರಿಷತ್ ಸದಸ್ಯ ಎಸ್.ರುದ್ರೇಗೌಡ, ಮಕ್ಕಳು ಪ್ರೀತಿಯಿಂದ ಶಾಲೆಗೆ ಹೋಗುವಂತಹ ವಾತಾವರಣಸರ್ಕಾರಿ ಶಾಲೆಗಳಲ್ಲಿ ಮೂಡಿಸಬೇಕು ಎಂದರು.

ಪಾಲಿಕೆ ಉಪ ಮೇಯರ್ ಎಸ್.ಎನ್.ಚನ್ನಬಸಪ್ಪ ಪ್ರಾಸ್ತಾವಿಕ ಮಾತನಾಡಿದರು. ಮೇಯರ್ ಲತಾ ಗಣೇಶ್, ಜಿಲ್ಲಾಧಿಕಾರಿ ಕೆ.ಬಿ.ಶಿವಕುಮಾರ್, ಜಿಲ್ಲಾ ಪಂಚಾಯಿತಿ ಸಿಇಒ ಎಂ.ಎಲ್.ವೈಶಾಲಿ,ಪಾಲಿಕೆ ಆಯುಕ್ತ ಚಿದಾನಂದ ವಟಾರೆ, ಎನ್ಇಎಸ್ ಶಿಕ್ಷಣ ಸಂಸ್ಥೆಗಳ ಮುಖ್ಯಸ್ಥರಾದ ನಾಗರಾಜ್, ವಿಶ್ವನಾಥ್, ಅಶ್ವತ್ಥನಾರಾಯಣ ಶೆಟ್ಟಿ ಉಪಸ್ಥಿತರಿದ್ದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.