ಗುರುವಾರ, 18 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಟೆಸ್ಟ್: ದಕ್ಷಿಣ ಆಫ್ರಿಕಾ ತಿರುಗೇಟು

Last Updated 3 ಮಾರ್ಚ್ 2018, 19:30 IST
ಅಕ್ಷರ ಗಾತ್ರ

ಡರ್ಬನ್‌: ಆಸ್ಟ್ರೇಲಿಯಾ ತಂಡವು ದಕ್ಷಿಣ ಆಫ್ರಿಕಾ ಎದುರು ಇಲ್ಲಿ ನಡೆಯುತ್ತಿರುವ ಮೊದಲ ಟೆಸ್ಟ್‌ನಲ್ಲಿ 451 ರನ್‌ಗಳ ಮುನ್ನಡೆ ಗಳಿಸಿದೆ.

ಪಂದ್ಯದ ಮೂರನೇ ದಿನವಾದ ಶನಿವಾರ ಎರಡನೇ ಇನಿಂಗ್ಸ್‌ ಆರಂಭಿಸಿದ ಆಸ್ಟ್ರೇಲಿಯಾ ತಂಡವು 71.4 ಓವರ್‌ಗಳಲ್ಲಿ 9 ವಿಕೆಟ್‌ಗಳಿಗೆ  213 ರನ್ ಗಳಿಸಿತು. ತಂಡವು ಮೊದಲ ಇನಿಂಗ್ಸ್‌ನಲ್ಲಿ 351 ರನ್‌ ಗಳಿಸಿತ್ತು. ನಂತರ ದಕ್ಷಿಣಾ ಆಫ್ರಿಕಾ ತಂಡವು 162 ರನ್‌ಗಳಿಗೆ ಆಲೌಟ್ ಆಗಿತ್ತು.  

ಬೆಳಿಗ್ಗೆ ಆಸ್ಟ್ರೇಲಿಯಾ ತಂಡಕ್ಕೆ ಕ್ಯಾಮರೂನ್ ಬೆನ್‌ಕ್ರಾಫ್ಟ್‌ (53, 83ಎ,10ಬೌಂ)  ಉತ್ತಮ ಆರಂಭ ನೀಡಿದರು. ಡೇವಿಡ್ ವಾರ್ನರ್ (28) ಬೇಗ ಔಟಾದರು.ನಂತರ ಉಳಿದ ಬ್ಯಾಟ್ಸ್‌ಮನ್‌ಗಳು ಹೆಚ್ಚು ರನ್‌ ಗಳಿಸದಂತೆ ದಕ್ಷಿಣ ಆಫ್ರಿಕಾ ಸ್ಪಿನ್ನರ್ ಕೇಶವ್ ಮಹಾರಾಜ್ (93ಕ್ಕೆ3) ಮತ್ತು ವೇಗಿ ಮಾರ್ನ್ ಮಾರ್ಕೆಲ್ (42ಕ್ಕೆ3) ನೋಡಿಕೊಂಡರು.

ಸಂಕ್ಷಿಪ್ತ ಸ್ಕೋರು: ಆಸ್ಟ್ರೇಲಿಯಾ: ಮೊದಲ ಇನಿಂಗ್ಸ್‌: 110.4 ಓವರ್‌ಗಳಲ್ಲಿ 351. ದಕ್ಷಿಣ ಆಫ್ರಿಕಾ: ಮೊದಲ ಇನಿಂಗ್ಸ್‌: 51.4 ಓವರ್‌ಗಳಲ್ಲಿ 162. ಆಸ್ಟ್ರೇಲಿಯಾ ದ್ವಿತೀಯ ಇನಿಂಗ್ಸ್‌ : 71.4 ಓವರ್‌ಗಳಲ್ಲಿ 9 ವಿಕೆಟ್‌ಗಳಿಗೆ 213 (ಕ್ಯಾಮರೂನ್ ಬೆನ್‌ಕ್ರಾಫ್ಟ್‌ 53, ಡೇವಿಡ್ ವಾರ್ನರ್‌ 28; ಕೇಶವ್ ಮಹಾರಾಜ 93ಕ್ಕೆ3, ಮಾರ್ನ್ ಮಾರ್ಕೆಲ್‌ 42ಕ್ಕೆ3).

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT