ಶನಿವಾರ, 27 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಚುನಾವಣೆ ಸ್ಪರ್ಧಿಸಿ ಠೇವಣಿ ಕಳೆದುಕೊಳ್ಳುವವರೇ ಹೆಚ್ಚು!

Last Updated 18 ಜೂನ್ 2018, 13:22 IST
ಅಕ್ಷರ ಗಾತ್ರ

ವಿಜಾಪುರ: ಚುನಾವಣೆಯಲ್ಲಿ ಸ್ಪರ್ಧಿಸಿ ಠೇವಣಿ ಕಳೆದುಕೊಳ್ಳು ವವರ ಪ್ರಮಾಣ ಇತ್ತೀಚಿನ ದಿನಗಳಲ್ಲಿ ಹೆಚ್ಚುತ್ತಿದೆ.
1952ರ ಮೊದಲ ಲೋಕಸಭಾ ಚುನಾವಣೆಯಲ್ಲಿ ಶೇ.40 ಅಭ್ಯರ್ಥಿಗಳು ಠೇವಣಿ ಕಳೆದು ಕೊಂಡಿದ್ದರು. ಆಗ ದೇಶದಲ್ಲಿ ಸ್ಪರ್ಧಿಸಿದ್ದ ಒಟ್ಟು 1,874 ಅಭ್ಯರ್ಥಿ ಗಳ ಪೈಕಿ 745 ಅಭ್ಯರ್ಥಿಗಳ ಠೇವಣಿ ನಷ್ಟವಾಗಿತ್ತು.

ಕಳೆದ ಚುನಾವಣೆಯಲ್ಲಿ ರಾಷ್ಟ್ರೀಯ ಪಕ್ಷಗಳ 1,623 ಅಭ್ಯರ್ಥಿಗಳ ಪೈಕಿ 779 ಜನ ಠೇವಣಿ ನಷ್ಟ ಅನುಭವಿಸಿದ್ದರು. 2009ರ ಚುನಾವಣೆಯಲ್ಲಿ ಶೇ. 85ರಷ್ಟು ಅಭ್ಯರ್ಥಿಗಳು ಠೇವಣಿ ಕಳೆದುಕೊಂಡಿದ್ದರು ಎಂಬುದು ಚುನಾವಣಾ ಆಯೋಗದ ಮಾಹಿತಿ.

ಕಾನೂನಿನ ಪ್ರಕಾರ ಅಭ್ಯರ್ಥಿ ಠೇವಣಿ ಉಳಿಸಿಕೊಳ್ಳಬೇಕಾದರೆ ಕನಿಷ್ಠ ಚಲಾವಣೆಯಾದ ಒಟ್ಟು ಮತಗಳ ಪೈಕಿ ಆರನೇ ಒಂದರ ಷ್ಟಾದರೂ ಮತಗಳನ್ನು ಪಡೆದಿರಬೇಕು. ಇಲ್ಲವಾದರೆ ಅಭ್ಯರ್ಥಿಯ ಠೇವಣಿ ಸರ್ಕಾರದ ಖಜಾನೆಗೆ ಹೋಗುತ್ತದೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT