ಬುಧವಾರ, ಜೂನ್ 16, 2021
23 °C
ಮತದಾನದ ಪ್ರತಿಜ್ಞೆ

ಗ್ರಾಮೀಣ ಪ್ರದೇಶದಲ್ಲಿ ಜಾಗೃತಿ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

ವಿಜಾಪುರ: ಜಿಲ್ಲೆಯಲ್ಲಿ ಮತದಾನ ಪ್ರಮಾಣ ಹೆಚ್ಚಳ ಕ್ಕಾಗಿ ಜಿಲ್ಲಾ ಸ್ವೀಪ್ ಸಮಿತಿಯಿಂದ ವಿದ್ಯಾರ್ಥಿಗಳ ಮೂಲಕ 50,000 ಪೋಷಕರಿಗೆ ಮತದಾನದ ಪ್ರತಿಜ್ಞಾ ಪತ್ರ  ನೀಡಲು ನಿರ್ಧರಿಸಲಾಯಿತು.ಇಲ್ಲಿಯ ನಡೆದ ಸ್ವೀಪ್‌ಸಮಿತಿ ಸಭೆಯಲ್ಲಿ, ಎಲ್ಲ ಹಾಸ್ಟೆಲ್‌ಗಳ ವಿದ್ಯಾರ್ಥಿಗಳ ಮೂಲಕವೂ ಪತ್ರ ಚಳವಳಿ ನಡೆಸಲು ತೀರ್ಮಾನಿಸಲಾಯಿತು.ಪ್ರಾಥಮಿಕ ಹಾಗೂ ಪ್ರೌಢ ಶಾಲಾ ಮಕ್ಕಳಿಂದ ಪ್ರತಿ ಶನಿವಾರ  ಪ್ರತಿ ಗ್ರಾಮಗಳಲ್ಲಿ ಜಾಗೃತಿ ಜಾಥಾ, ಕಳೆದ ವಿಧಾನಸಭಾ ಚುನಾವಣೆಯಲ್ಲಿ ಅತ್ಯಂತ ಕಡಿಮೆ ಮತದಾನವಾದ ಪ್ರದೇಶಗಳಲ್ಲಿ ಪಾಲಕರಿಂದ ಮತದಾನ ಮಾಡಲು ಪ್ರತಿಜ್ಞಾ ಪತ್ರಗಳನ್ನು ಸ್ವೀಕರಿಸಲು ನಿರ್ಧರಿಸಲಾಯಿತು.ಸಾಮಾಜಿಕ ಜಾಲತಾಣ, ಆಕಾಶವಾಣಿ, ಸಾರಿಗೆ ಸಂಸ್ಥೆ, ಐಎಂಎ, ಲಯನ್ಸ್ ಸೇರಿದಂತೆ ವಿವಿಧ ಮಾಧ್ಯಮಗಳ ಮೂಲಕ ವ್ಯಾಪಕ ಕಾರ್ಯಕ್ರಮ ಹಮ್ಮಿಕೊಳ್ಳಲು ನಿರ್ಧರಿಸಲಾಯಿತು.ಸ್ವೀಪ್‌ ಸಮಿತಿಯ ಅಧ್ಯಕ್ಷ, ಜಿಲ್ಲಾ ಪಂಚಾಯಿತಿ ಸಿಇಒ ಶಿವಕುಮಾರ ಅವರ ಅಧ್ಯಕ್ಷತೆಯಲ್ಲಿ ನಡೆದ ಸಭೆಯಲ್ಲಿ  ಪಾಲಿಕೆ ಆಯುಕ್ತ ರಾಮದಾಸ್, ಕೈಗಾ ರಿಕಾ ಇಲಾಖೆ ಜಂಟಿ ನಿರ್ದೇಶಕ ವಿ.ಎಸ್. ಹೊನ ಮಾನೆ, ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಅಧಿಕಾರಿ ಡಾ.ಗುಂಡಪ್ಪ, ಜಿಲ್ಲಾ ಸಮಾಜ ಕಲ್ಯಾಣ ಆಧಿಕಾರಿ ಕಮತರ, ಜಿಲ್ಲಾ ಹಿಂದುಳಿದ ಮತ್ತು ಅಲ್ಪಸಂಖ್ಯಾತ ಕಲ್ಯಾಣ ಅಧಿಕಾರಿ ದೊಡಮನಿ, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಉಪ ನಿರ್ದೇಶಕಿ  ರೋಹಿಣಿ ಹಿರೇಮಠ, ಪದವಿ ಪೂರ್ವ ಶಿಕ್ಷಣ ಇಲಾಖೆ ಉಪ ನಿರ್ದೇಶಕಿ ಕೆ.ಎಂ. ಚೌರ್‌, ಡಿಡಿಪಿಐ ಸಂಗಮೇಶ ಹಳಿಂಗಳಿ ಪಾಲ್ಗೊಂಡಿದ್ದರು.ಜಾಗೃತಿ ಜಾಥಾ: ನಗರದ ವಿವಿಧ ಕಾಲೇಜುಗಳ ರಾಷ್ಟ್ರೀಯ ಸೇವಾ ಯೋಜನಾ ಘಟಕದ ವಿದ್ಯಾರ್ಥಿಗಳು ಮತದಾರರ ಜಾಗೃತಿಗೆ ಗುರುವಾರ ಜಾಥಾ ನಡೆಸಿದರು.ಇಲ್ಲಿಯ ಸಿದ್ಧೇಶ್ವರ ದೇವಾಲಯದ ಆವರಣದಲ್ಲಿ ಜಿಲ್ಲಾ ಸ್ವೀಪ್ ಸಮಿತಿ ಅಧ್ಯಕ್ಷ ಹಾಗೂ ಜಿಲ್ಲಾ ಪಂಚಾಯಿತಿ ಮುಖ್ಯ ಕಾರ್ಯನಿರ್ವಹಣಾಧಿ ಕಾರಿ ಕೆ.ಬಿ.ಶಿವಕುಮಾರ ಜಾಥಾಕ್ಕೆ ಚಾಲನೆ ನೀಡಿದರು.ಜಿಲ್ಲಾ ಸ್ವೀಪ್ ಸಮಿತಿಯ ನೋಡಲ್ ಅಧಿಕಾರಿ ಹಾಗೂ ವಾರ್ತಾಧಿಕಾರಿ ಬಿ.ಆರ್.ರಂಗನಾಥ್, ರಾಷ್ಟ್ರೀಯ ಸೇವಾ ಯೋಜನಾ ಘಟಕದ ಜಿಲ್ಲಾ ಸಮನ್ವಯ ಅಧಿಕಾರಿ ಪ್ರೊ.ಸಜ್ಜಾದೆ, ನೆಹರೂ ಯುವ ಕೇಂದ್ರದ ಸಮನ್ವಯಾಧಿಕಾರಿ ಡಿ.ದಯಾನಂದ, ಎಸ್.ಬಿ. ಕಲಾ ಮತ್ತು ವಿಜ್ಞಾನ ಕಾಲೇಜಿನ ಪ್ರೊ.ಎಸ್.ಬಿ.ಪೂಜಾರ, ಸಹ್ಯಾದ್ರಿ ಕಾಲೇಜಿನ ಪ್ರೊ. ನಾವಿ, ಜೈ ಗುರುದೇವ ಬಿ.ಎಸ್.ಡಬ್ಲ್ಯೂ ಕಾಲೇಜಿನ ಪ್ರಾಚಾರ್ಯೆ ಬಿರಾದಾರ, ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನ ಪ್ರೊ.ಕುಂಬಾರ, ಉಗಾಡೆ, ಅಂಜುಮನ್ ಕಾಲೇಜಿನ ಪ್ರೊ.ಮಾಸ್ಟರ್, ದರಬಾರ ಕಾಲೇಜಿನ ಪ್ರೊ. ಬಿರಾದಾರ  ಇತರರು ಉಪಸ್ಥಿತರಿದ್ದರು.

ಫಲಿತಾಂಶ 2021 ಪೂರ್ಣ ಮಾಹಿತಿ ಇಲ್ಲಿದೆ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.