ಖಾಸಗಿ ಕೃಷಿ ಕಾಲೇಜು ಸ್ಥಾಪನೆ ಅನುಮತಿಗೆ ವಿರೋಧ

7
ಕೃಷಿ ಮತ್ತು ತೋಟಗಾರಿಕೆ ವಿಶ್ವವಿದ್ಯಾಲಯದ ವಿದ್ಯಾರ್ಥಿಗಳಿಂದ ಪ್ರತಿಭಟನೆ

ಖಾಸಗಿ ಕೃಷಿ ಕಾಲೇಜು ಸ್ಥಾಪನೆ ಅನುಮತಿಗೆ ವಿರೋಧ

Published:
Updated:

ಶಿವಮೊಗ್ಗ: ಕೃಷಿ ವಿಶ್ವವಿದ್ಯಾಲಯದ ಅಡಿಯಲ್ಲಿ ಖಾಸಗಿ ಕೃಷಿ ಕಾಲೇಜುಗಳ ಸ್ಥಾಪನೆಗೆ ಅನುಮತಿ ನೀಡಬಾರದು ಎಂದು ಆಗ್ರಹಿಸಿ ಶಿವಮೊಗ್ಗ ಕೃಷಿ ಮತ್ತು ತೋಟಗಾರಿಕೆ ವಿಶ್ವವಿದ್ಯಾಲಯದ ವಿದ್ಯಾರ್ಥಿಗಳು ವಿಶ್ವವಿದ್ಯಾಲಯದ ಆವರಣದಲ್ಲಿ ಗುರುವಾರ ಪ್ರತಿಭಟನೆ ನಡೆಸಿದರು.

ಈ ಹಿಂದೆ 2016ರಲ್ಲಿ ಸರ್ಕಾರವು ಹೊಸ ಖಾಸಗಿ ಕೃಷಿ ಕಾಲೇಜುಗಳ ಸ್ಥಾಪನೆಗೆ ಅನುಮತಿ ಮತ್ತು ಮಾನ್ಯತೆ ನೀಡಲು ನಿರ್ಧರಿಸಿತ್ತು. ಈ ನಿರ್ಧಾರ ಕೈಬಿಡುವಂತೆ ಆಗ್ರಹಿಸಿ ರಾಜ್ಯದಾದ್ಯಂತ ಎಲ್ಲಾ ಕೃಷಿ ವಿಶ್ವವಿದ್ಯಾಲಯಗಳ ವಿದ್ಯಾರ್ಥಿಗಳು ಪ್ರತಿಭಟನೆ ನಡೆಸಿದ್ದರು. ಸರ್ಕಾರ ವಿದ್ಯಾರ್ಥಿಗಳ ಪ್ರತಿಭಟನೆಗೆ ಮಣಿದು ಈ ನಿರ್ಧಾರವನ್ನು ಕೈ ಬಿಟ್ಟಿತ್ತು. ಇದೀಗ ಪುನಃ ಕೃಷಿ ವಿಶ್ವವಿದ್ಯಾಲಯಗಳ ಅಡಿಯಲ್ಲಿ ಖಾಸಗಿ ಕೃಷಿ ಕಾಲೇಜುಗಳ ಸ್ಥಾಪನೆಗೆ ಅನುಮತಿ ನೀಡಲು ನಿರ್ಧರಿಸುತ್ತಿರುವುದು ಖಂಡನೀಯ. ಶೀಘ್ರವೇ ಸರ್ಕಾರ ಈ ನಿರ್ಧಾರವನ್ನು ಹಿಂತೆಗೆದುಕೊಳ್ಳಬೇಕು ಎಂದು ಪ್ರತಿಭಟನಾಕಾರರು ಆಗ್ರಹಿಸಿದರು.

ಇದೀಗ ಬೆಂಗಳೂರು ಕೃಷಿ ವಿಶ್ವವಿದ್ಯಾಲಯ ಮತ್ತು ಇತರೆ ವಿಶ್ವವಿದ್ಯಾಲಯಗಳು ಖಾಸಗಿ ಕೃಷಿ ಕಾಲೇಜುಗಳ ಸ್ಥಾಪನೆಗೆ ಅರ್ಜಿ ಆಹ್ವಾನಿಸಿವೆ. ಅಲ್ಲದೇ ಬೆಂಗಳೂರಿನ ರೈ ವಿಶ್ವವಿದ್ಯಾಲಯವು ತನ್ನಲ್ಲಿ ಸ್ನಾತಕ ಪದವಿ ಪೂರೈಸಿದ ವಿದ್ಯಾರ್ಥಿಗಳಿಗೆ ಐ.ಸಿ.ಎ.ಆರ್ ಮಾನ್ಯತೆ ಪಡೆದ ವಿಶ್ವವಿದ್ಯಾಲಯಗಳಲ್ಲಿ ಸ್ನಾತಕೋತ್ತರ ಅಧ್ಯಯನಕ್ಕೆ ಪ್ರವೇಶ ಪಡೆಯಲು ಅನುಮತಿ ನೀಡುವ ಬಗ್ಗೆ ನ್ಯಾಯಾ

ಲಯದ ಮತ್ತು ಸರ್ಕಾರದ ಮೊರೆ ಹೋಗಿರುವುದು ಖಂಡನೀಯ ಎಂದು ತಿಳಿಸಿದರು.

ಸರ್ಕಾರ ಇದಕ್ಕೆ ಅವಕಾಶ ಮಾಡಿಕೊಟ್ಟರೆ ಐ.ಸಿ.ಎ.ಆರ್ ಮಾನ್ಯತೆ ಪಡೆದ ವಿಶ್ವವಿದ್ಯಾಲಯದಲ್ಲಿ ಹೆಚ್ಚಿನ ಅಂಕಗಳಿಸಿ ಪ್ರವೇಶ ಪಡೆದ ವಿದ್ಯಾರ್ಥಿಗಳ ಭವಿಷ್ಯದ ಮೇಲೆ ವ್ಯತಿರಿಕ್ತ ಪರಿಣಾಮ ಬೀರಲಿದೆ. ಹಾಗಾಗಿ ಕೃಷಿ ವಿಶ್ವವಿದ್ಯಾಲಯದ ಅಡಿಯಲ್ಲಿ ಖಾಸಗಿ ಕೃಷಿ ಕಾಲೇಜುಗಳ ಸ್ಥಾಪನೆಗೆ ಅನುಮತಿ ನೀಡಬಾರದು. ರೈ ವಿಶ್ವವಿದ್ಯಾಲಯದ ವಿದ್ಯಾರ್ಥಿಗಳಿಗೆ ಕೃಷಿ ವಿಶ್ವವಿದ್ಯಾಲಯದಲ್ಲಿ ಅನುಮತಿ ನೀಡಬಾರದು ಆಗ್ರಹಿಸಿದರು.

ಬರಹ ಇಷ್ಟವಾಯಿತೆ?

 • 0

  Happy
 • 0

  Amused
 • 0

  Sad
 • 0

  Frustrated
 • 0

  Angry