ಗುರುವಾರ, 18 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಕನಿಷ್ಠ ವೇತನಕ್ಕಾಗಿ ಸಗಣಿ ಸುರಿದುಕೊಂಡು ಸಫಾಯಿ ಕರ್ಮಚಾರಿ ಪ್ರತಿಭಟನೆ

Last Updated 2 ಅಕ್ಟೋಬರ್ 2018, 15:40 IST
ಅಕ್ಷರ ಗಾತ್ರ

ಶಿವಮೊಗ್ಗ: ಕನಿಷ್ಠ ವೇತನ ನೀಡುತ್ತಿಲ್ಲ ಎಂದು ಆರೋಪಿಸಿ ಜಿಲ್ಲಾ ಬ್ರಾಹ್ಮಣ ಮಹಾಸಭಾ ಸಂಸ್ಥೆಯ ಗಾಯತ್ರಿ ಮಾಂಗಲ್ಯ ಮಂದಿರದಲ್ಲಿ ಸಫಾಯಿ ಕರ್ಮಚಾರಿಯಾಗಿ ಕೆಲಸ ನಿರ್ವಹಿಸುತ್ತಿರುವ ಕಾರ್ಮಿಕ ವೆಂಕಟೇಶ್ ಮೈಮೇಲೆ ಸಗಣಿ ಸುರಿದುಕೊಂಡು ಮಂಗಳವಾರ ಪ್ರತಿಭಟನೆ ನಡೆಸಿದರು.

‘12 ವರ್ಷಗಳಿಂದ ಶಿವಮೊಗ್ಗದ ಬಿ.ಎಚ್‌. ರಸ್ತೆಯಲ್ಲಿರುವ ಗಾಯತ್ರಿ ಮಾಂಗಲ್ಯ ಮಂದಿರದಲ್ಲಿ ಕೆಲಸ ಮಾಡುತ್ತಿದ್ದೇನೆ. ಆದರೂ ತಿಂಗಳಿಗೆ ಕೇವಲ ₹ 6,500 ನೀಡಲಾಗುತ್ತಿದೆ. ಇದರಿಂದ ಕುಟುಂಬ ನಿರ್ವಹಣೆ ಕಷ್ಟವಾಗುತ್ತಿದೆ’ ಎಂದು ಬೇಸರ ವ್ಯಕ್ತಪಡಿಸಿದರು.

‘ಕನಿಷ್ಠ ವೇತನ ನೀಡುವಂತೆ ಒತ್ತಾಯಿಸಿ ಬಾರಿ ಆಡಳಿತ ಮಂಡಳಿಗೆ ಈಗಾಗಲೇ ಹಲವಾರು ಮನವಿ ಮಾಡಿದ್ದೇನೆ. ಆದರೆ, ತಮ್ಮ ಮನವಿಗೆ ಯಾರೂ ಸ್ಪಂದಿಸುತ್ತಿಲ್ಲ. ಸಮಾಜ ಕಲ್ಯಾಣ ಇಲಾಖೆ ಅಧಿಕಾರಿಗಳ ಬಳಿಯೂ ದೂರು ನೀಡಿದ್ದೇನೆ. ಅವರು ವಿಚಾರಣೆ ನಡೆಸಿ ಸಫಾಯಿ ಕರ್ಮಚಾರಿಗಳಿಗೆ ಸಂಬಂಧಿಸಿದ ಕಾಯ್ದೆಯಂತೆ ವೇತನ ನೀಡಬೇಕು ಎಂದು ಆದೇಶಿಸಿದ್ದಾರೆ. ಆದರೂ ಆಡಳಿತ ಮಂಡಳಿ ಇದಕ್ಕೆ ಒಪ್ಪದೇ ಅನ್ಯಾಯ ಎಸಗುತ್ತಿದೆ’ ಎಂದು ಆರೋಪಿಸಿದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT