ಬುಧವಾರ, ಏಪ್ರಿಲ್ 14, 2021
24 °C

ಲಿಂಗನಮಕ್ಕಿಯಿಂದ ಬೆಂಗಳೂರಿಗೆ ನೀರು : 10ರಂದು ಶಿವಮೊಗ್ಗ ಬಂದ್

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

ಶಿವಮೊಗ್ಗ: ಲಿಂಗನಮಕ್ಕಿ ಜಲಾಶಯ ದಿಂದ ಬೆಂಗಳೂರಿಗೆ ನೀರು ಹರಿಸುವ ಸರ್ಕಾರದ ನಿರ್ಧಾರ ಖಂಡಿಸಿ ಶರಾವತಿ ಉಳಿಸಿ ಹೋರಾಟ ಒಕ್ಕೂಟ ಇದೇ 10ರಂದು ಶಿವಮೊಗ್ಗ ಜಿಲ್ಲಾ ಬಂದ್‌ಗೆ ಕರೆ ನೀಡಿದೆ.

ಸಾಹಿತಿಗಳು, ವಿದ್ಯಾರ್ಥಿಗಳು, ವ್ಯಾಪಾರಿಗಳು, ನಾಗರಿಕರು, ವಿವಿಧ ಸಂಘ–ಸಂಸ್ಥೆಗಳು, ಸಂಘಟನೆಗಳ ಮುಖಂಡರು ಬಂದ್‌ಗೆ ಬೆಂಬಲ ವ್ಯಕ್ತಪಡಿಸಿದ್ದಾರೆ. ಬಿಜೆಪಿ, ಕಾಂಗ್ರೆಸ್, ಜೆಡಿಎಸ್‌ ಸೇರಿದಂತೆ ವಿವಿಧ ಪಕ್ಷಗಳ ಸ್ಥಳೀಯ ಘಟಕಗಳು ಬೆಂಬಲ ನೀಡಿವೆ. ಉಪ ಮುಖ್ಯಮಂತ್ರಿ ಜಿ.ಪರಮೇಶ್ವರ ಯೋಜನೆಯ ವಿಸ್ತೃತ ವರದಿ ಸಿದ್ಧಪಡಿಸುವಂತೆ ಸೂಚಿಸಿದ ನಂತರ ಜಿಲ್ಲೆಯ ಎಲ್ಲೆಡೆ ಪ್ರತಿಭಟನೆ, ಖಂಡನಾ ಸಭೆಗಳು ನಡೆದಿವೆ.

ಕೇಂದ್ರ ಬಜೆಟ್ 2021 ಪೂರ್ಣ ಮಾಹಿತಿ ಇಲ್ಲಿದೆ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.

ಈ ವಿಭಾಗದಿಂದ ಇನ್ನಷ್ಟು