ಗುರುವಾರ , ಫೆಬ್ರವರಿ 27, 2020
19 °C
ಬ್ರಾಹ್ಮಣ ಮಹಾಸಭಾ ಮುಖಂಡ ಎಸ್. ದತ್ತಾತ್ರಿ

15ರಂದು ಸ್ನೇಹಮಿಲನ, ಅಭಿನಂದನಾ ಕಾರ್ಯಕ್ರಮ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

ಶಿವಮೊಗ್ಗ: ಕೋಟೆ ರಸ್ತೆ ಶ್ರೀಗಾಯತ್ರಿ ದೇವಸ್ಥಾನದಲ್ಲಿ ಫೆ.15ರಂದು ಸಂಜೆ 6ಕ್ಕೆ ಕರ್ನಾಟಕ ರಾಜ್ಯ ಬ್ರಾಹ್ಮಣ ಅಭಿವೃದ್ಧಿ ಮಂಡಳಿ ಅಧ್ಯಕ್ಷರಾಗಿ ನೇಮಕಗೊಂಡಿರುವ ಎಚ್.ಎಸ್. ಸಚ್ಚಿದಾನಂದಮೂರ್ತಿ ಅವರೊಂದಿಗೆ ಸ್ನೇಹಮಿಲನ ಮತ್ತು ಅಭಿನಂದನಾ ಕಾರ್ಯಕ್ರಮವನ್ನು
ಆಯೋಜಿಸಲಾಗಿದೆ.

ಅಖಿಲ ಕರ್ನಾಟಕ ಬ್ರಾಹ್ಮಣ ಮಹಾಸಭಾ ಶಿವಮೊಗ್ಗ ವಲಯ ಮತ್ತು ತಾಲ್ಲೂಕು ಬ್ರಾಹ್ಮಣರ ಸಂಘದ ಸಹಯೋಗದೊಂದಿಗೆ ಕಾರ್ಯಕ್ರಮ ಏರ್ಪಡಿಸಲಾಗಿದ್ದು, ಜಿಲ್ಲಾ ಉಸ್ತುವಾರಿ ಸಚಿವ ಕೆ.ಎಸ್. ಈಶ್ವರಪ್ಪ, ಸಂಸದ ಬಿ.ವೈ.ರಾಘವೇಂದ್ರ, ಉಪಮೇಯರ್ ಸುರೇಖಾ ಮುರಳೀಧರ್ ಅವರಿಗೆ ಅಭಿನಂದನಾ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿದೆ ಎಂದು ಅಖಿಲ ಕರ್ನಾಟಕ ಬ್ರಾಹ್ಮಣ ಮಹಾಸಭಾ ಮುಖಂಡ ಎಸ್. ದತ್ತಾತ್ರಿ ಬುಧವಾರ ಪತ್ರಿಕಾಗೋಷ್ಠಿಯಲ್ಲಿ ತಿಳಿಸಿದರು.

ಹೊಯ್ಸಳ ಕರ್ನಾಟಕ ಬ್ರಾಹ್ಮಣ ಸಂಘದ ಅಧ್ಯಕ್ಷ ವೇಣುಗೋಪಾಲ್ ಕಾರ್ಯಕ್ರಮ ಉದ್ಘಾಟಿಸುವರು. ತಾಲ್ಲೂಕು ಬ್ರಾಹ್ಮಣ ಸಂಘದ ಅಧ್ಯಕ್ಷ ಜಿ.ಕೆ.ಮಾಧವಮೂರ್ತಿ ಅಧ್ಯಕ್ಷತೆ ವಹಿಸುವರು. ಎಸ್.ಚಂದ್ರಶೇಖರ್, ಎಸ್. ದತ್ತಾತ್ರಿ ಹಾಗೂ ಅಬಸೆ ದಿನೇಶ್ ಕುಮಾರ್ ಎನ್. ಜೋಷಿ ಅಭಿನಂದನಾ ನುಡಿ ನಡೆಸಿಕೊಡುವರು ಎಂದರು.

ಮಾಜಿ ಶಾಸಕ ಕೆ.ಬಿ.ಪ್ರಸನ್ನಕುಮಾರ್, ಎಂ.ಬಿ.ಭಾನುಪ್ರಕಾಶ್ ಹಾಗೂ ಬ್ರಾಹ್ಮಣ ಮಹಾಸಭಾದ ಪ್ರಧಾನ ವಕ್ತಾರ ಮ.ಸ.ನಂಜುಂಡಸ್ವಾಮಿ ಮತ್ತು ಕೇಂದ್ರ ಸಂಘದ ಉಪಾಧ್ಯಕ್ಷೆ ಸುಮಿತ್ರಮ್ಮ ಉಪಸ್ಥಿರಿರುವರು ಎಂದು ಹೇಳಿದರು.

ವಿಪ್ರ ಸಮಾಜದ ಅಭಿವೃದ್ಧಿ ಮಂಡಳಿಗೆ ₹100 ಕೋಟಿ ಬಿಡುಗಡೆ ಮಾಡುವಂತೆ ಮುಖ್ಯಮಂತ್ರಿಗೆ ಮನವಿ ಮಾಡಲಾಗಿದೆ. ಬ್ರಾಹ್ಮಣ ಅಭಿವೃದ್ಧಿ ಮಂಡಳಿಯ ಮುಂದಿನ ಕಾರ್ಯಚಟುವಟಿಕೆ ಬಗ್ಗೆ ಸಲಹೆ ಸೂಚನೆಗಳಿದ್ದಲ್ಲಿ ಶಿವಮೊಗ್ಗ ತಾಲ್ಲೂಕು ಬ್ರಾಹ್ಮಣ ಸಂಘಕ್ಕೆ ನೀಡಬೇಕು ಎಂದು ಕೋರಿದರು.

ಪತ್ರಿಕಾಗೋಷ್ಠಿಯಲ್ಲಿ ಶಿವಮೊಗ್ಗ ವಲಯ ಉಪಾಧ್ಯಕ್ಷ ಎಚ್.ಎನ್.ಛಾಯಾಪತಿ, ಎಚ್.ಕೆ. ಕೇಶವಮೂರ್ತಿ, ಸಂತೋಷ್, ಅಚ್ಯುತರಾವ್, ಸತ್ಯನಾರಾಯಣ್, ಎಂ. ಶಂಕರ್, ವೇಣುಗೋಪಾಲ ಇದ್ದರು.

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನು ಲೈಕ್ ಮಾಡಿ, ಪ್ರಮುಖ ಸುದ್ದಿಗಳ ಅಪ್‌ಡೇಟ್ಸ್ ಪಡೆಯಿರಿ.

ಪ್ರಜಾವಾಣಿಯನ್ನು ಟ್ವಿಟರ್‌ನಲ್ಲಿ ಇಲ್ಲಿ ಫಾಲೋ ಮಾಡಿ.

ಟೆಲಿಗ್ರಾಂ ಮೂಲಕ ನಮ್ಮ ಸುದ್ದಿಗಳ ಅಪ್‌ಡೇಟ್ಸ್ ಪಡೆಯಲು ಇಲ್ಲಿ ಕ್ಲಿಕ್ ಮಾಡಿ.

ಪ್ರತಿಕ್ರಿಯಿಸಿ (+)