ಮಂಗಳವಾರ, 6 ಜೂನ್ 2023
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಮುಸ್ಲಿಮರ ಮೀಸಲಾತಿ ರದ್ದು: ನಿರ್ಣಯ ಹಿಂಪಡೆಯಲು ಆಗ್ರಹ

Last Updated 25 ಮಾರ್ಚ್ 2023, 12:22 IST
ಅಕ್ಷರ ಗಾತ್ರ

ಬೀದರ್: ‘ಅಲ್ಪಸಂಖ್ಯಾತ ಮುಸ್ಲಿಂ ಸಮುದಾಯಕ್ಕೆ ಇದ್ದ ಮೀಸಲಾತಿಯನ್ನು ರದ್ದು ಮಾಡಿದ ನಿರ್ಣಯವನ್ನು ರಾಜ್ಯ ಸರ್ಕಾರ ಕೂಡಲೇ ಹಿಂಪಡೆಯಬೇಕು’ ಎಂದು ವೆಲ್ಫೇರ್ ಪಾರ್ಟಿ ಆಫ್ ಇಂಡಿಯಾ ರಾಜ್ಯಾಧ್ಯಕ್ಷ ತಾಹೀರ್ ಹುಸೇನ್ ಆಗ್ರಹಿಸಿದ್ದಾರೆ.

‘ಮುಸ್ಲಿಮರಿಗೆ ಪ್ರವರ್ಗ 2ಬಿ ಅಡಿಯಲ್ಲಿದ್ದ ಶೇ 4ರಷ್ಟು ಮೀಸಲಾತಿಯನ್ನು ಕಿತ್ತು ಇನ್ನೊಂದು ಸಮುದಾಯಕ್ಕೆ ಹಂಚುವ ಮೂಲಕ ಸಮುದಾಯಗಳ ನಡುವೆ ದ್ವೇಷ ಬೀಜ ಬಿತ್ತಿ ಮತ ಗಳಿಸುವ ಹುನ್ನಾರ ಮಾಡಿದೆ. ಇದು ಸರ್ಕಾರದ ಅಸಂವಿಧಾನಿಕ ತೀರ್ಮಾನವಾಗಿದೆ. ಮುಸ್ಲಿಮರ ವಿರುದ್ಧ ಸರ್ಕಾರ ನಡೆಸುವ ಷಡ್ಯಂತ್ರ ಇದಾಗಿದ್ದು, ಬಿಜೆಪಿ ತನ್ನ ಕೋಮುವಾದಿತನವನ್ನು ಪದೇ ಪದೇ ಪ್ರದರ್ಶಿಸುತ್ತಲೇ ಇದೆ. ಬರುವ ಚುನಾವಣೆಯಲ್ಲಿ ಇದರ ಕಾವು ಬಿಜೆಪಿಗೆ ತಟ್ಟದೇ ಇರದು’ ಎಂದು ಹೇಳಿದ್ದಾರೆ.

‘ಜಾತ್ಯತೀತ ನೆಲೆಗಟ್ಟಿನ ಮೌಲ್ಯಗಳನ್ನು ಎತ್ತಿ ಹಿಡಿಯುವಲ್ಲಿ ಸರ್ಕಾರ ವಿಫಲವಾಗಿದೆ. ಅಲ್ಪಸಂಖ್ಯಾತರ ಹಕ್ಕನ್ನು ಕಿತ್ತುಕೊಳ್ಳುವ ಮಟ್ಟಕ್ಕೆ ಇಳಿದಿರುವುದು ಖಂಡನೀಯ. ಎಲ್ಲ ಸಮುದಾಯದ ಹಿತ ಕಾಯುವ ಮುಖ್ಯಮಂತ್ರಿ ಎನ್ನುವ ಅಭಿಪ್ರಾಯಕ್ಕೆ ಬಸವರಾಜ ಬೊಮ್ಮಾಯಿ ತಿಲಾಂಜಲಿ ಇಟ್ಟಿದ್ದಾರೆ. ಬಿಜೆಪಿಯ ಕೋಮುದ್ವೇಷ ಈ ತೀರ್ಮಾನದಲ್ಲಿ ಎದ್ದು ಕಾಣುತ್ತದೆ’ ಎಂದು ತಿಳಿಸಿದ್ದಾರೆ.

‘ಕೂಡಲೇ ಅಲ್ಪಸಂಖ್ಯಾತರ ಹಕ್ಕನ್ನು ಕಿತ್ತುಕೊಳ್ಳುವ ನಿರ್ಧಾರ ಕೈಬಿಡಬೇಕು. ಮತಬ್ಯಾಂಕ್ ಗಾಗಿ ಓಲೈಕೆ ರಾಜಕಾರಣ ಮಾಡಬಾರದು. ಮುಸ್ಲಿಮರ 2ಬಿ ಮೀಸಲಾತಿ ಎಥಾವತ್ತಾಗಿ ಮುಂದುವರಿಸಬೇಕು’ ಎಂದು ತಾಹೀರ್ ಹುಸೇನ್ ಒತ್ತಾಯಿಸಿದ್ದಾರೆ.

ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.

ADVERTISEMENT
ADVERTISEMENT

ಇನ್ನಷ್ಟು ಸುದ್ದಿ

ಇನ್ನಷ್ಟು
ADVERTISEMENT
ADVERTISEMENT
ADVERTISEMENT
ಪ್ರಜಾವಾಣಿ ವಿಡಿಯೊ
ಸಿನಿಮಾ
ADVERTISEMENT