ಸೋಮವಾರ, ಆಗಸ್ಟ್ 10, 2020
24 °C

ಎಸಿಬಿ ಬಲೆಗೆ ಪಿಡಿಒ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

ರಾಮನಗರ: ಇ-ಖಾತೆ ಮಾಡಿಕೊಡಲು ಲಂಚ ಪಡೆಯುತ್ತಿದ್ದ ವೇಳೆ ಬಿಡದಿ ಹೋಬಳಿಯ ಮಂಚನಾಯ್ಕನಹಳ್ಳಿ ಗ್ರಾಮ ‍ಪಂಚಾಯಿತಿ ಪಿಡಿಒ ಶಮೀದ್ ಓಲೇಕಾರ್ ಎಸಿಬಿ ಬಲೆಗೆ ಬಿದ್ದರು. 

ಆಸ್ತಿ ಮಾಲೀಕರು ಇ-ಖಾತೆ ಬದಲಾವಣೆಗೆ ಅರ್ಜಿ ಸಲ್ಲಿಸಿದ್ದು, ಅದಕ್ಕಾಗಿ ಪಿಡಿಒ ಹಣಕ್ಕೆ ಬೇಡಿಕೆ ಇಟ್ಟಿದ್ದರು. ಅರ್ಜಿದಾರರು ಈ ವಿಷಯವನ್ನು ಎಸಿಬಿ ಗಮನಕ್ಕೆ ತಂದು ಅವರ ಸೂಚನೆಯಂತೆ ಬುಧವಾರ ಬೆಳಿಗ್ಗೆ ಕೆಂಗೇರಿಯ ತಮ್ಮ ನಿವಾಸದಲ್ಲಿ ಪಿಡಿಒಗೆ ಒಂದು ಲಕ್ಷ ರೂಪಾಯಿ ನೀಡುವ ವೇಳೆ ಅಧಿಕಾರಿಗಳು ದಾಳಿ ನಡೆಸಿ ಆರೋಪಿಯನ್ನು ವಶಕ್ಕೆ ಪಡೆದರು.

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನು ಲೈಕ್ ಮಾಡಿ, ಪ್ರಮುಖ ಸುದ್ದಿಗಳ ಅಪ್‌ಡೇಟ್ಸ್ ಪಡೆಯಿರಿ.

ಪ್ರಜಾವಾಣಿಯನ್ನು ಟ್ವಿಟರ್‌ನಲ್ಲಿ ಇಲ್ಲಿ ಫಾಲೋ ಮಾಡಿ.

ಟೆಲಿಗ್ರಾಂ ಮೂಲಕ ನಮ್ಮ ಸುದ್ದಿಗಳ ಅಪ್‌ಡೇಟ್ಸ್ ಪಡೆಯಲು ಇಲ್ಲಿ ಕ್ಲಿಕ್ ಮಾಡಿ.

ಈ ವಿಭಾಗದಿಂದ ಇನ್ನಷ್ಟು