ವಿಜಯಪುರ ತಾಲ್ಲೂಕಿನ ಕವಲಗಿ ಬಳಿ ಕಾರು ಡಿಕ್ಕಿ: ವ್ಯಕ್ತಿ ಸಾವು

ಬುಧವಾರ, ಜೂನ್ 26, 2019
28 °C

ವಿಜಯಪುರ ತಾಲ್ಲೂಕಿನ ಕವಲಗಿ ಬಳಿ ಕಾರು ಡಿಕ್ಕಿ: ವ್ಯಕ್ತಿ ಸಾವು

Published:
Updated:

ವಿಜಯಪುರ: ತಾಲ್ಲೂಕಿನ ಕವಲಗಿ ಬಳಿಯ ರಾಷ್ಟ್ರೀಯ ಹೆದ್ದಾರಿ 218ರಲ್ಲಿ ಸೋಮವಾರ ಅಪರಿಚಿತ ಕಾರು ಡಿಕ್ಕಿ ಹೊಡೆದು ವ್ಯಕ್ತಿಯೊಬ್ಬರು ಸ್ಥಳದಲ್ಲೇ ಮೃತಪಟ್ಟಿದ್ದಾರೆ.

ಕವಲಗಿ ಗ್ರಾಮದ ದುಂಡಪ್ಪ ಭೈರವಾಡಗಿ (35) ಮೃತಪಟ್ಟವರು. ಸ್ಥಳಕ್ಕೆ ಭೇಟಿ ನೀಡಿದ ವಿಜಯಪುರ ಗ್ರಾಮೀಣ ಠಾಣೆ ಪೊಲೀಸರು ಪರಿಶೀಲನೆ ನಡೆಸಿದರು.

ವಿದ್ಯುತ್ ಘಟಕದಲ್ಲಿ ಆಕಸ್ಮಿಕ ಬೆಂಕಿ

ಬಸವನಬಾಗೇವಾಡಿ ತಾಲ್ಲೂಕು ಮಸಬಿನಾಳ ಬಳಿಯ ಮುಳವಾಡ ಏತ ನೀರಾವರಿ ಯೋಜನೆಯ ಮುಖ್ಯ ಕಾಲುವೆಯ ಜಾಕ್‌ವೆಲ್‌ನ ವಿದ್ಯುತ್ ಘಟಕದಲ್ಲಿ ಸೋಮವಾರ ಆಕಸ್ಮಿಕ ಬೆಂಕಿ ತಗುಲಿದೆ.

ವಿದ್ಯುತ್ ಟ್ರಾನ್ಸ್‌ಫಾರ್ಮ್‌ರಗಳಿಗೆ ಬೆಂಕಿ ವ್ಯಾಪಿಸಿದ್ದು, ಸ್ಥಳಕ್ಕೆ ದೌಡಾಯಿಸಿದ ಅಗ್ನಿ ಶಾಮಕ ಸಿಬ್ಬಂದಿ ಹೆಚ್ಚಿನ ಅನಾಹುತವನ್ನು ತಪ್ಪಿಸಿದರು.

ವಿರಾಟ್ ಕೊಹ್ಲಿ ನಾಯಕತ್ವದ ಭಾರತ ಕ್ರಿಕೆಟ್‌ ತಂಡ ಕಪ್ ಗೆಲ್ಲುತ್ತಾ? ಐಸಿಸಿ ವಿಶ್ವಕಪ್ 2019 ಯಾರು ಗೆಲ್ಲುತ್ತಾರೆ? ಕೋಟ್ಯಂತರ ಕ್ರಿಕೆಟ್ ಪ್ರೇಮಿಗಳ ನಿರೀಕ್ಷೆಗೆ ಉತ್ತರ ಸಿಗುವ ಕಾಲ ಬಂದಿದೆ. ವಿಶ್ವಕಪ್ ಕ್ರಿಕೆಟ್‌ನ ಸ್ಕೋರ್ ಅಪ್‌ಡೇಟ್ಸ್‌, ಮ್ಯಾಚ್‌ಗಳ ವರದಿ, ವಿಶ್ವಕಪ್ ಕ್ರಿಕೆಟ್ ಹೆಜ್ಜೆ ಗುರುತು, ಆಟಗಾರರ ಸಂದರ್ಶನ, ವೇಳಾಪಟ್ಟಿ ತಿಳಿದುಕೊಳ್ಳಲು www.prajavani.net ಜಾಲತಾಣಕ್ಕೆ ಭೇಟಿ ನೀಡಿ. ಕ್ರೀಡಾಪ್ರೇಮಿಗಳ ನೆಚ್ಚಿನ ಆಯ್ಕೆ ‘ಪ್ರಜಾವಾಣಿ’. ಇದು ಅತ್ಯಂತ ವಿಶ್ವಾಸಾರ್ಹ ಸುದ್ದಿ ಮಾಧ್ಯಮ.

ಬರಹ ಇಷ್ಟವಾಯಿತೆ?

 • 0

  Happy
 • 0

  Amused
 • 0

  Sad
 • 0

  Frustrated
 • 0

  Angry

Comments:

0 comments

Write the first review for this !