ಶನಿವಾರ, 20 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಅಪಘಾತ: ಏಳು ಮಂದಿಗೆ ಗಂಭೀರ ಗಾಯ

ರಸ್ತೆ ವಿಭಜಕ ದಾಟಿ ಎದುರಿನ ಆಟೊಗೆ ಡಿಕ್ಕಿ ಹೊಡೆದ ಕಾರ್‌
Last Updated 23 ಜನವರಿ 2019, 14:23 IST
ಅಕ್ಷರ ಗಾತ್ರ

ರಾಮನಗರ: ಇಲ್ಲಿನ ಸರ್ಕಾರಿ ಎಂಜಿನಿಯರಿಂಗ್ ಕಾಲೇಜು ಸಮೀಪ ಬುಧವಾರ ಬೆಳಗ್ಗೆ ಬೆಂಗಳೂರು–ಮೈಸೂರು ಹೆದ್ದಾರಿಯಲ್ಲಿ ಇನೋವಾ ಕಾರ್‌ ಹಾಗೂ ಆಟೊ ನಡುವೆ ಡಿಕ್ಕಿ ಸಂಭವಿಸಿದ್ದು, ಏಳು ಮಂದಿ ಗಾಯಗೊಂಡಿದ್ದಾರೆ.

ಅಪಘಾತದಲ್ಲಿ ಆಟೊ ಚಾಲಕ ಚನ್ನಪಟ್ಟಣದ ಪ್ರಕಾಶ್, ಪ್ರಯಾಣಿಕರಾದ ವಿವೇಕಾನಂದ, ಗೌರಮ್ಮ, ರಘು, ಜ್ಯೋತಿ, ಯಶಸ್ವಿನಿ, ಶ್ರಾವ್ಯ ಎನ್ನುವವರಿಗೆ ಗಂಭೀರ ಗಾಯಗಳಾಗಿವೆ. ಇವರಲ್ಲಿ ಎರಡೂವರೆ ವರ್ಷದ ಬಾಲಕಇಿ ಶ್ರಾವ್ಯ ಸ್ಥಿತಿ ಗಂಭೀರವಾಗಿದೆ. ಗಾಯಾಳುಗಳಿಗೆ ಇಲ್ಲಿನ ಜಿಲ್ಲಾ ಆಸ್ಪತ್ರೆಯಲ್ಲಿ ಪ್ರಥಮ ಚಿಕಿತ್ಸೆ ನೀಡಿ ಹೆಚ್ಚಿನ ಚಿಕಿತ್ಸೆಗಾಗಿ ಬೆಂಗಳೂರಿನ ವಿಕ್ಟೋರಿಯಾ, ಸಂಜಯಗಾಂಧಿ ಮತ್ತು ನಿಮ್ಹಾನ್ಸ್ ಆಸ್ಪತ್ರೆಗಳಿಗೆ ದಾಖಲು ಮಾಡಲಾಗಿದೆ.

ಈ ಸಂಬಂಧ ರಾಮನಗರ ಸಂಚಾರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ವಿಭಜಕದ್ದೇ ಸಮಸ್ಯೆ: ವಾಹನಗಳು ರಸ್ತೆ ವಿಭಜಕವನ್ನು ದಾಟಿ ಎದುರಿನ ರಸ್ತೆಯಲ್ಲಿನ ವಾಹನಗಳಿಗೆ ಡಿಕ್ಕಿ ಹೊಡೆಯುವ ಪ್ರಕರಣಗಳು ಹೆಚ್ಚುತ್ತಲೇ ಇವೆ. ಬೆಂಗಳೂರು–ಮೈಸೂರು ಹೆದ್ದಾರಿಯ ವಿಭಜಕವು ತುಂಬಾ ಕೆಳಮಟ್ಟದಲ್ಲಿ ಇದೆ. ಮಧ್ಯೆ ತಡೆ ಬೇಲಿಗಳು ಇಲ್ಲದಿರುವ ಕಡೆ ಇಂತಹ ಅಪಘಾತಗಳು ಸಾಮಾನ್ಯವಾಗಿದೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT