ಅಪಘಾತ: ವಿದ್ಯಾರ್ಥಿನಿ ಸಾವು

ಬುಧವಾರ, ಜೂನ್ 26, 2019
25 °C

ಅಪಘಾತ: ವಿದ್ಯಾರ್ಥಿನಿ ಸಾವು

Published:
Updated:

ಶಿವಮೊಗ್ಗ: ನಗರದ ಸವಳಂಗ ರಸ್ತೆ ಜೆಎನ್ಎನ್‌ಸಿಇ ಕಾಲೇಜು ಬಳಿ ಭಾನುವಾರ ನಡೆದ ಭೀಕರ ರಸ್ತೆ ಅಪಘಾತದಲ್ಲಿ ದ್ವಿತೀಯ ಪಿಯುಸಿ ವಿದ್ಯಾರ್ಥಿನಿ ಸಾವನ್ನಪ್ಪಿದ್ದಾರೆ.

ನಗರದ ಚೆನ್ನಪ್ಪ ಲೇಔಟ್ ನಿವಾಸಿ ಸುನೈನಾ (18) ಮೃತಪಟ್ಟವರು. ಪೇಸ್ ಕಾಲೇಜಿನಲ್ಲಿ ದ್ವಿತೀಯ ಪಿಯುಸಿಯಲ್ಲಿ ವ್ಯಾಸಂಗ ಮಾಡುತ್ತಿದ್ದ ಸುನೈನಾ ಬೆಳಿಗ್ಗೆ ಟ್ಯೂಷನ್ ಮುಗಿಸಿಕೊಂಡು ಸ್ನೇಹಿತೆಯ ಮನೆಗೆ ಪುಸ್ತಕ ನೀಡಲು ಬೈಕ್‌ನಲ್ಲಿ ತೆರಳುವಾಗ ಎದುರಿನಿಂದ ಬರುತ್ತಿದ್ದ ಬೊಲೆರೊ ವಾಹನಕ್ಕೆ ಬೈಕ್‌ ಡಿಕ್ಕಿಯಾಗಿದೆ.

ಸ್ಥಳೀಯರು ಸುನೈನಾರನ್ನು ಆಸ್ಪತ್ರೆಗೆ ಸಾಗಿಸುವ ಮಾರ್ಗಮಧ್ಯೆ ಸುನೈನಾ ಮೃತಪಟ್ಟಿದ್ದಾರೆ. ಸಂಚಾರ ಪೊಲೀಸ್ ಠಾಣೆಯ ಸಿಬ್ಬಂದಿ ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದರು.

ನಗರದ ಸವಳಂಗ ರಸ್ತೆಯಲ್ಲಿ ಹತ್ತಾರು, ಶಾಲೆ, ಕಾಲೇಜುಗಳಿವೆ. ಅದರಲ್ಲೂ ಜೆಎನ್‌ಎನ್‌ಸಿಇ ಕಾಲೇಜಿಗೆ ಪ್ರತಿನಿತ್ಯ ಸಾವಿರಾರು ವಿದ್ಯಾರ್ಥಿಗಳು ಪ್ರತಿನಿತ್ಯ ಬರುತ್ತಾರೆ. ಆದರೆ ಈ ರಸ್ತೆಯಲ್ಲಿ ಪದೇ ಪದೇ ಅಪಘಾತಗಳು ಸಂಭವಿಸುತ್ತಿದೆ. ಈಗಾಗಲೇ ಹತ್ತಾರು ವಿದ್ಯಾರ್ಥಿಗಳು ಪ್ರಾಣ ಕಳೆದುಕೊಂಡಿದ್ದಾರೆ. ಹಲವು ವರ್ಷಗಳಿಂದ ಈ ರಸ್ತೆ ಸಾವಿನ ರಸ್ತೆಯಾಗಿ ಮಾರ್ಪಟ್ಟಿದೆ. ಆದರೂ ಸಂಬಂಧಪಟ್ಟ ಅಧಿಕಾರಿಗಳು ಅಪಘಾತಗಳು ಮುನ್ನೆಚ್ಚರಿಕೆ ಕ್ರಮಗಳು ಕೈಗೊಳ್ಳುತ್ತಿಲ್ಲ ಎಂದು ಸ್ಥಳೀಯರು ದೂರಿದ್ದಾರೆ.

ಮತ್ತಷ್ಟು ಅನಾಹುತಗಳು ಸಂಭವಿಸುವ ಮುನ್ನ ಈ ಬಗ್ಗೆ ಕ್ರಮ ಕೈಗೊಳ್ಳಬೇಕು ಎಂದು ಪೋಷಕ ಮಂಜುನಾಥ್ ಒತ್ತಾಯಿಸಿದ್ದಾರೆ.

ವಿರಾಟ್ ಕೊಹ್ಲಿ ನಾಯಕತ್ವದ ಭಾರತ ಕ್ರಿಕೆಟ್‌ ತಂಡ ಕಪ್ ಗೆಲ್ಲುತ್ತಾ? ಐಸಿಸಿ ವಿಶ್ವಕಪ್ 2019 ಯಾರು ಗೆಲ್ಲುತ್ತಾರೆ? ಕೋಟ್ಯಂತರ ಕ್ರಿಕೆಟ್ ಪ್ರೇಮಿಗಳ ನಿರೀಕ್ಷೆಗೆ ಉತ್ತರ ಸಿಗುವ ಕಾಲ ಬಂದಿದೆ. ವಿಶ್ವಕಪ್ ಕ್ರಿಕೆಟ್‌ನ ಸ್ಕೋರ್ ಅಪ್‌ಡೇಟ್ಸ್‌, ಮ್ಯಾಚ್‌ಗಳ ವರದಿ, ವಿಶ್ವಕಪ್ ಕ್ರಿಕೆಟ್ ಹೆಜ್ಜೆ ಗುರುತು, ಆಟಗಾರರ ಸಂದರ್ಶನ, ವೇಳಾಪಟ್ಟಿ ತಿಳಿದುಕೊಳ್ಳಲು www.prajavani.net ಜಾಲತಾಣಕ್ಕೆ ಭೇಟಿ ನೀಡಿ. ಕ್ರೀಡಾಪ್ರೇಮಿಗಳ ನೆಚ್ಚಿನ ಆಯ್ಕೆ ‘ಪ್ರಜಾವಾಣಿ’. ಇದು ಅತ್ಯಂತ ವಿಶ್ವಾಸಾರ್ಹ ಸುದ್ದಿ ಮಾಧ್ಯಮ.

ಬರಹ ಇಷ್ಟವಾಯಿತೆ?

 • 0

  Happy
 • 0

  Amused
 • 0

  Sad
 • 0

  Frustrated
 • 1

  Angry

Comments:

0 comments

Write the first review for this !