ಅಪಘಾತದ ಗಾಯಾಳು ಸಾವು

7

ಅಪಘಾತದ ಗಾಯಾಳು ಸಾವು

Published:
Updated:

ಚನ್ನಪಟ್ಟಣ: ತಾಲ್ಲೂಕಿನ ಕನ್ನಿದೊಡ್ಡಿ ಗ್ರಾಮದಲ್ಲಿ ಚಲಿಸುತ್ತಿದ್ದ ಬೈಕ್ ನಿಂದ ಆಯತಪ್ಪಿ ಬಿದ್ದು ಚಿಕಿತ್ಸೆ ಪಡೆಯುತ್ತಿದ್ದ ಹಿಂಬದಿ ಸವಾರ ಚಿಕಿತ್ಸೆ ಫಲಕಾರಿಯಾಗದೆ ಶುಕ್ರವಾರ ಮೃತಪಟ್ಟಿದ್ದಾರೆ.

ಸುಧಾಶೇಖರ್ (24) ಮೃತಪಟ್ಟವರು. ಗ್ರಾಮದ ನಾಥೇಗೌಡ ಅವರ ಮಗ. ಇವರು ತನ್ನ ಸ್ನೇಹಿತ ವಾಸು ಜೊತೆ ಬೈಕ್ ನಲ್ಲಿ ತೆರಳುತ್ತಿದ್ದಾಗ ನಾಯಿಯೊಂದು ಅಡ್ಡಬಂತು. ಪರಿಣಾಮ ವಾಹನ ಸವಾರ ಬ್ರೇಕ್ ಹಾಕಿದ ವೇಳೆ ಕೆಳಗೆ ಬಿದ್ದು ತೀವ್ರವಾಗಿ ಗಾಯಗೊಂಡಿದ್ದರು.

ತಕ್ಷಣ ಅವರನ್ನು ಪಟ್ಟಣದ ಸಾರ್ವಜನಿಕ ಆಸ್ಪತ್ರೆಗೆ ಕರೆದೊಯ್ದು ಚಿಕಿತ್ಸೆ ಕೊಡಿಸಿ ಹೆಚ್ಚಿನ ಚಿಕಿತ್ಸೆಗಾಗಿ ಬೆಂಗಳೂರಿನ ನಿಮ್ಹಾನ್ಸ್ ಗೆ ದಾಖಲಿಸಿ ಚಿಕಿತ್ಸೆ ಕೊಡಿಸಲಾಗಿತ್ತು. ಚಿಕಿತ್ಸೆ ಫಲಕಾರಿಯಾಗದೆ ಸಾವನ್ನಪ್ಪಿದ್ದಾರೆ.

ತಾಲ್ಲೂಕಿನ ಅಕ್ಕೂರು ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಬರಹ ಇಷ್ಟವಾಯಿತೆ?

  • 0

    Happy
  • 0

    Amused
  • 0

    Sad
  • 0

    Frustrated
  • 0

    Angry

Comments:

0 comments

Write the first review for this !