ಭಾನುವಾರ, ಡಿಸೆಂಬರ್ 8, 2019
21 °C
ಕುವೆಂಪು ರಾಷ್ಟ್ರೀಯ ಪುರಸ್ಕಾರ -2019 ಪ್ರಕಟ

ಪಂಜಾಬ್‌ನ ಅಜಿತ್ ಕೌರ್, ಗುರುಬಚನ್ ಸಿಂಗ್ ಭುಲ್ಲರ್‌ಗೆ ಕುವೆಂಪು ಪುರಸ್ಕಾರ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

Prajavani

ತೀರ್ಥಹಳ್ಳಿ (ಶಿವಮೊಗ್ಗ): ಪಂಜಾಬಿನ ಹೆಸರಾಂತ ಸಾಹಿತಿಗಳಾದ ಅಜಿತ್‌ ಕೌರ್‌ ಮತ್ತು ಗುರುಬಚನ್ ಸಿಂಗ್ ಭುಲ್ಲರ್ ಅವರನ್ನು ಪ್ರಸಕ್ತ ಸಾಲಿನ ಕುವೆಂಪು ರಾಷ್ಟ್ರೀಯ ಪುರಸ್ಕಾರಕ್ಕೆ ಆಯ್ಕೆ ಮಾಡಲಾಗಿದೆ. ಪ್ರಶಸ್ತಿಯು ₹ 5 ಲಕ್ಷ ಮತ್ತು ಬೆಳ್ಳಿ ಪದಕವನ್ನು ಒಳಗೊಂಡಿರುತ್ತದೆ ಎಂದು ರಾಷ್ಟ್ರಕವಿ ಕುವೆಂಪು ಪ್ರತಿಷ್ಠಾನದ ಸಹ ಕಾರ್ಯದರ್ಶಿ ಕಡಿದಾಳ್ ಪ್ರಕಾಶ್ ತಿಳಿಸಿದ್ದಾರೆ.

ಕುವೆಂಪು ಪ್ರತಿಷ್ಠಾನದ ಅಧ್ಯಕ್ಷ ನಾಡೋಜ ಪ್ರೊ.ಹಂಪ ನಾಗರಾಜಯ್ಯ ಅವರ ಅಧ್ಯಕ್ಷತೆಯಲ್ಲಿ ಬೆಂಗಳೂರಿನಲ್ಲಿ ಕಳೆದ 16ರಂದು ನಡೆದ ಕುವೆಂಪು ರಾಷ್ಟ್ರೀಯ ಪುರಸ್ಕಾರ ಆಯ್ಕೆ ಸಮಿತಿ ಸಭೆಯಲ್ಲಿ ಈ ಇಬ್ಬರೂ ಸಾಹಿತಿಗಳನ್ನು ಆಯ್ಕೆ ಮಾಡಲಾಯಿತು ಎಂದು ಅವರು ಮಾಹಿತಿ ನೀಡಿದ್ದಾರೆ.

ಕುವೆಂಪು ಅವರ ಜನ್ಮದಿನೋತ್ಸವದಂದು ಡಿಸೆಂಬರ್‌ 29) ಕುಪ್ಪಳಿಯಲ್ಲಿ ಪ್ರಶಸ್ತಿ ಪ್ರದಾನ ಮಾಡಲಾಗುವುದು ಎಂದು ತಿಳಿಸಿದ್ದಾರೆ.

ಪ್ರತಿಕ್ರಿಯಿಸಿ (+)

ಈ ವಿಭಾಗದಿಂದ ಇನ್ನಷ್ಟು