ಗುರುವಾರ, 28 ಮಾರ್ಚ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಅಂಬೇಡ್ಕರ್ ಹೆಸರು ಚಿರಸ್ಥಾಯಿ: ವಿ.ಸೋಮಣ್ಣ

Last Updated 4 ಜೂನ್ 2022, 19:51 IST
ಅಕ್ಷರ ಗಾತ್ರ

ಬೆಂಗಳೂರು: ‘ಬುದ್ಧ, ಬಸವಣ್ಣ, ಅಂಬೇಡ್ಕರ್ ಈ ದೇಶದ ಸಂಪತ್ತು’ ಎಂದು ವಸತಿ ಸಚಿವ ವಿ.ಸೋಮಣ್ಣ ಹೇಳಿದರು.

ನಾಲ್ವಡಿ ಕೃಷ್ಣರಾಜ ಒಡೆಯರ್‌ ಅವರ 138ನೇ ಜಯಂತಿ, ಎಂ. ವೆಂಕಟ
ಸ್ವಾಮಿ ಅವರ 68ನೇ ಹುಟ್ಟುಹಬ್ಬದ ಅಂಗವಾಗಿ ಸಮತಾ ಸೈನಿಕ ದಳ ಏರ್ಪಡಿಸಿದ್ದ ಪರಿವರ್ತನಾ ಸಮಾವೇಶ ಉದ್ಘಾಟಿಸಿ ಅವರು ಮಾತನಾಡಿದರು.

‘ಅಂಬೇಡ್ಕರ್ ಯಾವುದೇ ಸಮುದಾ
ಯಕ್ಕೆ ಸೀಮಿತವಾದ ವ್ಯಕ್ತಿಯಲ್ಲ. ಅವರು ಈ ದೇಶಕ್ಕೆ ನೀಡಿರುವ ಕೊಡುಗೆಯನ್ನು ಯಾರೂ ಮರೆಯಲು ಸಾಧ್ಯವಿಲ್ಲ. ಸೂರ್ಯ– ಚಂದ್ರ ಇರುವ ತನಕ ಅಂಬೇಡ್ಕರ್ ಹೆಸರು ಚಿರಸ್ಥಾಯಿಯಾಗಿ ಉಳಿಯಲಿದೆ’ ಎಂದರು.

‘ವೆಂಕಟಸ್ವಾಮಿ ಅವರು ಬಡವರ ಪರವಾಗಿ ಹೋರಾಟ ಮಾಡಿಕೊಂಡು ಬಂದಿದ್ದಾರೆ. ಅವರ ಹೋರಾಟದ ಬದುಕಿನ ಕುರಿತು ‘ಬಡವರ ಸಾಹೇಬ’ ಎಂಬ ಸಿನಿಮಾ ನಿರ್ಮಾಣ ಆಗುತ್ತಿರುವುದು ಸಂತಸದ ವಿಷಯ’ ಎಂದು ಹೇಳಿದರು.

ಇದೇ ವೇಳೆ ಲೇಖಕಿ ಬಿ.ಟಿ.ಲಲಿತಾ
ನಾಯಕ್ ಅವರಿಗೆ ನಾಲ್ವಡಿ ಕೃಷ್ಣರಾಜ
ಒಡೆಯರ್ ಪ್ರಶಸ್ತಿ ಪ್ರದಾನ ಮಾಡಲಾಯಿತು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT