ಶುಕ್ರವಾರ, 26 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಮೋದಿಗೆ ಪತ್ರ ಬರೆದಿದ್ದ ಐಶ್ವರ್ಯ: ರಸ್ತೆ ಅಭಿವೃದ್ಧಿಗೆ ₹1 ಕೋಟಿ ಬಿಡುಗಡೆ

Last Updated 6 ಅಕ್ಟೋಬರ್ 2019, 19:21 IST
ಅಕ್ಷರ ಗಾತ್ರ

ಹೊಸನಗರ: ‘ಆರೋಡಿ-ಮಂಡ್ರಳ್ಳಿ ರಸ್ತೆ ತೀರ ಹದಗೆಟ್ಟ ಕಾರಣ ಸಂಚಾರಕ್ಕೆ ಕಷ್ಟವಾಗುತ್ತಿದೆ; ಕೂಡಲೇ ಕ್ರಮ ಕೈಗೊಳ್ಳಿ’ ಎಂದು ವಿದ್ಯಾರ್ಥಿನಿ ಜಿ. ಐಶ್ವರ್ಯ ಅವರು ಪ್ರಧಾನಿ ನರೇಂದ್ರ ಮೋದಿಗೆ ಬರೆದ ಪತ್ರಕ್ಕೆ ಕೊನೆಗೂ ಸ್ಪಂದನೆ ಸಿಕ್ಕಿದೆ.

ಆರೋಡಿ-ಮಂಡ್ರಳ್ಳಿ ರಸ್ತೆ ಅಭಿ ವೃದ್ಧಿಗಾಗಿ ರಾಜ್ಯ ಸರ್ಕಾರವು ಕರ್ನಾಟಕ ನೀರಾವರಿ ನಿಗಮದ ಮೂಲಕ ₹ 1 ಕೋಟಿ ಬಿಡುಗಡೆ ಮಾಡಿದೆ.

ಹೊಸನಗರದ ಕೊಡಚಾದ್ರಿ ಸರ್ಕಾರಿ ಪ್ರಥಮದರ್ಜೆ ಕಾಲೇಜಿನಲ್ಲಿ ದ್ವಿತೀಯ ವರ್ಷದ ಬಿ.ಎ. ಓದುತ್ತಿರುವ ನಗರ ಮೂಡುಗೊಪ್ಪ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಕೊಡಸೆ ಗ್ರಾಮದ ಐಶ್ವರ್ಯ, ಪಿಯುಸಿ ಓದುತ್ತಿದ್ದಾಗ ಪ್ರಧಾನಿಗೆ ಪತ್ರ ಬರೆದಿದ್ದರು. ಹಾಳಾಗಿರುವ 2 ಕಿ.ಮೀ ಉದ್ದದ ಸಂಪರ್ಕ ರಸ್ತೆ ಅಭಿವೃದ್ಧಿಗೊಳಿಸುವಂತೆ ಕೋರಿದ್ದರು. ಪ್ರಧಾನಿ ಕಚೇರಿಯು ಈ ಬಗ್ಗೆ ಕ್ರಮ ಕೈಗೊಳ್ಳು ವಂತೆ ರಾಜ್ಯದ ಮುಖ್ಯಕಾರ್ಯದ ರ್ಶಿಗೆ ಪತ್ರ ರವಾನಿಸಿತ್ತು. ಇದಕ್ಕೆ ಜಿಲ್ಲಾ ಪಂಚಾಯ್ತಿಯಿಂದ ಪ್ರತಿಕ್ರಿಯೆ ಸಿಕ್ಕಿರಲಿಲ್ಲ. ನಂತರ ಐಶ್ವರ್ಯ ಸಂಸದ ಬಿ.ವೈ. ರಾಘವೇಂದ್ರ ಮತ್ತು ಶಾಸಕ ಜ್ಞಾನೇಂದ್ರ ಅವರನ್ನು ಸಂಪರ್ಕಿಸಿದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT