ಭಾನುವಾರ, ಅಕ್ಟೋಬರ್ 20, 2019
22 °C

ಆರ್ಯವೈಶ್ಯ ನಿಗಮಕ್ಕೆ ಅರುಣ್‌ ಸಾರಥ್ಯ

Published:
Updated:
Prajavani

ಶಿವಮೊಗ್ಗ: ಜಿಲ್ಲಾ ವಾಣಿಜ್ಯ ಮತ್ತು ಕೈಗಾರಿಕಾ ಸಂಘದ ಮಾಜಿ ಅಧ್ಯಕ್ಷ, ಉದ್ಯಮಿ ಡಿ.ಎಸ್.ಅರುಣ್ ಅವರನ್ನು ‘ಕರ್ನಾಟಕ ಆರ್ಯವೈಶ್ಯ ಸಮುದಾಯ ಅಭಿವೃದ್ಧಿ ನಿಗಮದ ಅಧ್ಯಕ್ಷರನ್ನಾಗಿ ಸರ್ಕಾರ ನೇಮಿಸಿದೆ.

ರಾಜ್ಯ ಸಚಿವ ದರ್ಜೆಯ ಸ್ಥಾನಮಾನ ನೀಡಲಾಗಿದೆ. ಮುಂದಿನ ಆದೇಶದವರೆಗೂ ಅವರು ಆ ಸ್ಥಾನದಲ್ಲಿ ಮುಂದುವರಿಯಲಿದ್ದಾರೆ. ಅರುಣ್ ಅವರು ವಿಧಾನ ಪರಿಷತ್ ಮಾಜಿ ಸಭಾಪತಿ ಡಿ.ಎಚ್.ಶಂಕರಮೂರ್ತಿ ಅವರ ಪುತ್ರ.

Post Comments (+)