ಬುಧವಾರ, ಫೆಬ್ರವರಿ 19, 2020
24 °C

ಶಿವಮೊಗ್ಗ: ಅಕ್ರಮ ಕಲ್ಲುಕ್ವಾರಿ ಮೇಲೆ ದಾಳಿ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

Prajavani

ಶಿವಮೊಗ್ಗ: ತಾಲ್ಲೂಕಿನ ಗೆಜ್ಜೇನಹಳ್ಳಿ ಹಾಗೂ ದೇವಕಾತಿಕೊಪ್ಪದ ಅರಣ್ಯ ಪ್ರದೇಶದಲ್ಲಿ ನಡೆಯುತ್ತಿರುವ ಅಕ್ರಮ ಕಲ್ಲುಕ್ವಾರಿ ಮೇಲೆ ಶಿವಮೊಗ್ಗ ಗಣಿ ಮತ್ತು ಭೂ ವಿಜ್ಞಾನ ಇಲಾಖೆ ಅಧಿಕಾರಿಗಳು ಭಾನುವಾರ ದಾಳಿ ನಡೆಸಿ, ಸಿಡಿಮದ್ದುಗಳನ್ನು ಹಾಗೂ
ವಾಹನಗಳನ್ನು ವಶಪಡಿಸಿಕೊಂಡಿದ್ದಾರೆ.

ಇಲಾಖೆಯ ಅಧಿಕಾರಿ ರಶ್ಮಿ, ಭೂ ವಿಜ್ಞಾನಿ ಜ್ಯೋತಿ ಅವರ ನೇತೃತ್ವದಲ್ಲಿ ದೇವಕಾತಿಕೊಪ್ಪದ ಅರಣ್ಯ ಇಲಾಖೆ ಸರ್ವೆ ನಂ.45ರಲ್ಲಿ ದಾಳಿ ನಡೆಸಿದ ಅಧಿಕಾರಿಗಳು ಒಂದು ಬಾಕ್ಸ್ ಸಿಡಿ ಮದ್ದುಗಳನ್ನು, ಒಂದು ಹಿಟಾಚಿ, ಒಂದು ಕಂಪ್ರೆಸರ್ ಅನ್ನು ವಶಪಡಿಸಿಕೊಂಡಿದ್ದಾರೆ. ಆರೋಪಿಗಳು ಪರಾರಿಯಾಗಿದ್ದಾರೆ.

ವಶಪಡಿಸಿಕೊಳ್ಳಲಾದ ಸಿಡಿಮದ್ದುಗಳ ಮೇಲೆ ಯಾದಗಿರಿ ಜಿಲ್ಲೆಯ ವಿಳಾಸವಿದ್ದು, ಈ ಸಿಡಿಮದ್ದು ತಯಾರಿಕಾ ಘಟಕದ ಮೇಲೂ ಪ್ರಕರಣ ದಾಖಲಿಸಲಾಗುವುದು ಎಂದು ಅಧಿಕಾರಿಗಳು ತಿಳಿಸಿದ್ದಾರೆ.

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನು ಲೈಕ್ ಮಾಡಿ, ಪ್ರಮುಖ ಸುದ್ದಿಗಳ ಅಪ್‌ಡೇಟ್ಸ್ ಪಡೆಯಿರಿ.

ಪ್ರಜಾವಾಣಿಯನ್ನು ಟ್ವಿಟರ್‌ನಲ್ಲಿ ಇಲ್ಲಿ ಫಾಲೋ ಮಾಡಿ.

ಟೆಲಿಗ್ರಾಂ ಮೂಲಕ ನಮ್ಮ ಸುದ್ದಿಗಳ ಅಪ್‌ಡೇಟ್ಸ್ ಪಡೆಯಲು ಇಲ್ಲಿ ಕ್ಲಿಕ್ ಮಾಡಿ.

ಪ್ರತಿಕ್ರಿಯಿಸಿ (+)

ಈ ವಿಭಾಗದಿಂದ ಇನ್ನಷ್ಟು