ಗುರುವಾರ , ಫೆಬ್ರವರಿ 27, 2020
19 °C

ಆತ್ಮಹತ್ಯೆಗೆ ಯತ್ನ: ಇಬ್ಬರ ಸಾವು

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

ಶಿವಮೊಗ್ಗ: ತಾಲೂಕಿನ ನುಗ್ಗಿ ಮಲ್ಲಾಪುರದಲ್ಲಿ ಬುಧವಾರ ರಾತ್ರಿ ಮೂವರು ವಿಷ ಸೇವಿಸಿ ಆತ್ಮಹತ್ಯೆಗೆ ಯತ್ನಿಸಿದ್ದು, ಇಬ್ಬರು ಮೃತಪಟ್ಟಿದ್ದಾರೆ.

ಜ್ಞಾನಮೂರ್ತಿ (55), ಅವರ ಪುತ್ರ ಚನ್ನೇಶ್ (20) ಮೃತಪಟ್ಟವರು. ಪತ್ನಿ ರತ್ನಮ್ಮ (50) ಜೀನ್ಮರಣದ ಮಧ್ಯೆ ಹೋರಾಟ ನಡೆಸುತ್ತಿದ್ದಾರೆ. 

ಜ್ಞಾನಮೂರ್ತಿ ಮೊದಲ ಪತ್ನಿ ಶಂಕರಮ್ಮ ಅವರನ್ನು ತೊರೆದು ರತ್ನಮ್ಮ ಅವರ ಜತೆ ಎರಡು ದಶಕಗಳ ಹಿಂದೆ ಮೈಸೂರಿಗೆ ತೆರಳಿದ್ದರು. ಅಲ್ಲೇ ತೆಂಗಿನಕಾಯಿ ವ್ಯಾಪಾರ ಮಾಡುತ್ತಿದ್ದರು. ಬುಧವಾರ ಗ್ರಾಮಕ್ಕೆ ಬಂದಿದ್ದ ಅವರು ಇಂತಹ ನಿರ್ಧಾರ ತೆಗೆದುಕೊಂಡಿದ್ದಾರೆ.

ಮೊದಲ ಪತ್ನಿ ಶಂಕ್ರಮ್ಮ ಮತ್ತು ಮಕ್ಕಳು ಆತ್ಮಹತ್ಯೆಯ ಕುರಿತು ಶಂಕೆ ವ್ಯಕ್ತಪಡಿಸಿದ್ದಾರೆ. ಜ್ಞಾನಮೂರ್ತಿ ಆಸ್ತಿ ಪಡೆಯಲು ರತ್ನಮ್ಮ ಕುಟುಂಬ ಯತ್ನಿಸುತ್ತಿದೆ ಎಂದು ಆರೋಪಿಸಿದ್ದಾರೆ.

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನು ಲೈಕ್ ಮಾಡಿ, ಪ್ರಮುಖ ಸುದ್ದಿಗಳ ಅಪ್‌ಡೇಟ್ಸ್ ಪಡೆಯಿರಿ.

ಪ್ರಜಾವಾಣಿಯನ್ನು ಟ್ವಿಟರ್‌ನಲ್ಲಿ ಇಲ್ಲಿ ಫಾಲೋ ಮಾಡಿ.

ಟೆಲಿಗ್ರಾಂ ಮೂಲಕ ನಮ್ಮ ಸುದ್ದಿಗಳ ಅಪ್‌ಡೇಟ್ಸ್ ಪಡೆಯಲು ಇಲ್ಲಿ ಕ್ಲಿಕ್ ಮಾಡಿ.

ಪ್ರತಿಕ್ರಿಯಿಸಿ (+)

ಈ ವಿಭಾಗದಿಂದ ಇನ್ನಷ್ಟು