ಮಂಗಳವಾರ, ನವೆಂಬರ್ 29, 2022
29 °C

ಬಾಗಲಕೋಟೆ: ಸಚಿವ ಮುರುಗೇಶ ನಿರಾಣಿ ಮನೆಗೆ ವಿಪಕ್ಷ ನಾಯಕ ಸಿದ್ದರಾಮಯ್ಯ ಭೇಟಿ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

PV Photo

ಬಾಗಲಕೋಟೆ: ವಿಧಾನಸಭೆ ವಿರೋಧ ಪಕ್ಷದ ನಾಯಕ ಸಿದ್ದರಾಮಯ್ಯ ಅವರು ಮಂಗಳವಾರ ಮುಧೋಳದಲ್ಲಿ ಸಚಿವ ಮುರುಗೇಶ ನಿರಾಣಿಯವರ ನಿವಾಸಕ್ಕೆ ಭೇಟಿ ನೀಡುವ ಮೂಲಕ ರಾಜಕೀಯ ವಲಯದಲ್ಲಿ ಅಚ್ಚರಿ ಮೂಡಿಸಿದ್ದಾರೆ.

ಮಾಜಿ ಸಚಿವ ಆರ್.ಬಿ. ತಿಮ್ಮಾಪುರ ಅವರ ಜನ್ಮ ದಿನ ಕಾರ್ಯಕ್ರಮಕ್ಕೆ ಬಂದಿದ್ದ ಅವರು ನಿರಾಣಿ ಅವರ ನಿವಾಸದ ಬಳಿ ಇರುವ ಹೆಲಿಪ್ಯಾಡ್ ನಲ್ಲಿ ಇಳಿದಿದ್ದರು. ಕಾರ್ಯಕ್ರಮಕ್ಕೆ ತೆರಳುವ ಮುನ್ನ ನಿರಾಣಿ ಮನೆಗೆ ಹೋದರು.

ಇದಕ್ಕೂ ಮುನ್ನ ಜಮಖಂಡಿಯಲ್ಲಿ‌ ನಡೆದ ಸಿದ್ದು ನ್ಯಾಮಗೌಡರ ಪ್ರತಿಮೆ ಅನಾವರಣ ಕಾರ್ಯಕ್ರಮದಲ್ಲಿ ಇಬ್ಬರೂ ಪಾಲ್ಗೊಂಡಿದ್ದರು. ಸಂಗಮೇಶ ಅವರು ಅರ್ಧದಲ್ಲಿಯೇ ಕಾರ್ಯಕ್ರಮದಿಂದ ಎದ್ದು ಬಂದಿದ್ದರು.

2018 ರಲ್ಲಿ ಜಮಖಂಡಿಯಿಂದ ಬಿಜೆಪಿ ಟಿಕೆಟ್ ದೊರೆಯದ ಕಾರಣ ಸಂಗಮೇಶ ಪಕ್ಷೇತರ ಅಭ್ಯರ್ಥಿಯಾಗಿ ಸ್ಪರ್ಧಿಸಿ ಪರಾಭವಗೊಂಡಿದ್ದರು. ಈ ಬಾರಿಯೂ ಆಕಾಂಕ್ಷಿಯಾಗಿದ್ದಾರೆ. ಕಾಂಗ್ರೆಸ್ ಸೇರ್ಪಡೆಯಾಗಬಹುದೇ ಎಂಬ ಚರ್ಚೆಗೆ ಭೇಟಿ ಕಾರಣವಾಗಿದೆ.

ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.

ಈ ವಿಭಾಗದಿಂದ ಇನ್ನಷ್ಟು