ಬುಧವಾರ, ನವೆಂಬರ್ 30, 2022
17 °C

ಕೈಗಾರಿಕೆ ಭೂಬಳಕೆ: ಶ್ವೇತಪತ್ರಕ್ಕೆ ಆಗ್ರಹ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

ಬಾಗಲಕೋಟೆ: ಕರ್ನಾಟಕ ಕೈಗಾರಿಕಾ ಪ್ರದೇಶಾಭಿವೃದ್ಧಿ ಮಂಡಳಿಯಿಂದ ಹಂಚಿಕೆ ಮಾಡಿದ ಭೂಮಿಯನ್ನು ಕೈಗಾರಿಕೆಳಿಗೆ ಬಳಸಿಕೊಳ್ಳಲಾಗಿದೆಯೇ ಎಂಬುದರ ಬಗ್ಗೆ ಶ್ವೇತಪತ್ರ ಹೊರಡಿಸಬೇಕು ಎಂದು ರೈತ ಸಂಘದ ರಾಜ್ಯ ಘಟಕದ ಅಧ್ಯಕ್ಷ ಬಡಗಲಪುರ ನಾಗೇಂದ್ರ ಆಗ್ರಹಿಸಿದರು.

ಶನಿವಾರ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, 2008 ರಿಂದ ರಾಜ್ಯದಲ್ಲಿ ಕೈಗಾರಿಕೆಗಾಗಿ ಲ್ಯಾಂಡ್ ಬ್ಯಾಂಕ್ ಆರಂಭಿಸಲಾಗಿದೆ. ಅಲ್ಲಿಂದ ಇಲ್ಲಿಯವರೆಗೆ ಕೈಗಾರಿಕೆಗೆ ಹಂಚಿದ ಭೂಮಿ ಯಾವುದಕ್ಕೆ ಬಳಕೆಯಾಗಿದೆ ಎಂಬುದನ್ನು ಬಹಿರಂಗ ಪಡಿಸಬೇಕು ಎಂದು ಅಗ್ರಹಿಸಿದರು.

ಭೂಮಿ ಪಡೆದ 5 ವರ್ಷಗಳಲ್ಲಿ ಕೈಗಾರಿಕೆ ಸ್ಥಾಪಿಸದಿದ್ದರೆ ಭೂಮಿ ವಾಪಸ್ ಪಡೆಯಬೇಕು ಎಂದಿದೆ. ಎಷ್ಟು ವಾಪಸ್ ಪಡೆಯಲಾಗಿದೆ ಎಂದು ಪ್ರಶ್ನಿಸಿದರು.

ನಾಲ್ಕು ತಿಂಗಳ ಹಿಂದೆ ಬಾದಾಮಿ ತಾಲ್ಲೂಕಿನ ಹಲಕುರ್ಕಿಯಲ್ಲಿ ಕಾಲುವೆ ನಿರ್ಮಾಣಕ್ಕೆ ನೋಟಿಸ್ ನೀಡಿದ ಭೂಮಿಯನ್ನು ಈಗ ಕೈಗಾರಿಕೆಗೆ ವಶ ಪಡಿಸಿಕೊಳ್ಳಲು ಬೃಹತ್ ಕೈಗಾರಿಕಾ‌ ಸಚಿವ ಮುರುಗೇಶ ನಿರಾಣಿ ಮುಂದಾಗಿದ್ದಾರೆ. ಇವರಿಗೆ ಹೇಳುವವರು, ಕೇಳುವವರು ಯಾರು ಇಲ್ಲವೇ ಎಂದು ಪ್ರಶ್ನಿಸಿದರು.

ಎಪಿಎಂಸಿ ಕಾಯ್ದೆ ತಿದ್ದುಪಡಿ ವಾಪಸ್‌ಗೆ ಆಗ್ರಹಿಸಿ ನವೆಂಬರ್‌ ನಲ್ಲಿ ಬಸವ ಕಲ್ಯಾಣದಿಂದ ಬೆಂಗಳೂರುವರೆಗೆ ಪರಿವರ್ತನಾ ಯಾತ್ರೆ ಮಾಡಲಾಗುವುದು ಎಂದರು.

ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.

ಈ ವಿಭಾಗದಿಂದ ಇನ್ನಷ್ಟು