ಮಂಗಳವಾರ, ಫೆಬ್ರವರಿ 7, 2023
27 °C

ಬಾಗಲಕೋಟೆ | ಸಚಿವ ಗೋವಿಂದ ಕಾರಜೋಳ ಬಗ್ಗೆ ವ್ಯಂಗ್ಯ: ರೈತನ ಬಂಧನ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

ಬಾಗಲಕೋಟೆ: ಜಲಸಂಪನ್ಮೂಲ ಸಚಿವ ಗೋವಿಂದ ಕಾರಜೋಳ ಅವರ ವಿರುದ್ಧ ಫೇಸ್‌ಬುಕ್‌ನಲ್ಲಿ ವ್ಯಂಗ್ಯ ಭರಿತ ಪೋಸ್ಟ್ ಮಾಡಿದ ರೈತರೊಬ್ಬರನ್ನು ನವನಗರ ಠಾಣೆಯ ಪೊಲೀಸರು ಭಾನುವಾರ ರಾತ್ರಿ ಬಂಧಿಸಿದ್ದಾರೆ.

ಮುಧೋಳ ತಾಲ್ಲೂಕಿನ ಶಿರೋಳ ಗ್ರಾಮದ ನಿಂಗಪ್ಪ ಮಟಗಾರ ಬಂಧಿತ ವ್ಯಕ್ತಿ.

ಬೆಲೆ ನಿಗದಿಗೆ ಆಗ್ರಹಿಸಿ ಕಬ್ಬು ಬೆಳೆಗಾರರು ಮುಧೋಳದಲ್ಲಿ ಪ್ರತಿಭಟನೆ ಮಾಡುತ್ತಿರುವ ಹಿನ್ನೆಲೆಯಲ್ಲಿ ಮಟಗಾರ ಅವರು, ‘ಶಾಸಕರು ಕಾಣೆಯಾಗಿದ್ದಾರೆ. ಮೌನವಾಗಿದ್ದಾರೆ. ಎಲ್ಲಿರುವೆ ಗೋವಿಂದ ಬಾರೋ ಮನೆಗೆ’ ಎಂದು ಪೋಸ್ಟ್ ಮಾಡಿದ್ದರು.

ಸಚಿವ ಗೋವಿಂದ ಕಾರಜೋಳ ಅವರ ಬಗ್ಗೆ ಸಾರ್ವಜನಿಕರಲ್ಲಿ ಕೆಟ್ಟ ಅಭಿಪ್ರಾಯ ಬರುವಂತಹ, ದ್ವೇಷ ಹುಟ್ಟಿಸುವಂತಹ ಪೋಸ್ಟ್ ಅನ್ನು ಮಟಗಾರ ಫೇಸ್‌ಬುಕ್‌ ನಲ್ಲಿ ಹಾಕಿದ್ದು, ಅವರ ವಿರುದ್ಧ ಕ್ರಮಕೈಗೊಳ್ಳುವಂತೆ ವಕೀಲ ಶಿವಾನಂದ ಟವಳಿ ಎಂಬುವವರು ದೂರು ನೀಡಿದ್ದಾರೆ.

ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.

ಈ ವಿಭಾಗದಿಂದ ಇನ್ನಷ್ಟು