ಸೋಮವಾರ, ಮಾರ್ಚ್ 20, 2023
24 °C

ಆತ್ಮಾವಲೋಕನ ಮಾಡಿಕೊಳ್ಳಿ: ಬಿಜೆಪಿ ಸರ್ಕಾರ ಬರಲು ಕಾರಣರಾದವರ ಬಗ್ಗೆ ಎಚ್ಡಿಕೆ ಟೀಕೆ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

Prajavani

ಬಾಗಲಕೋಟೆ: ‘ಬಿಜೆಪಿ ಸರ್ಕಾರದ‌‌ ದುರಾಡಳಿತವನ್ನು ಕಾಂಗ್ರೆಸ್ ನಾಯಕರು ಟೀಕೆ‌ ಮಾಡುತ್ತಿದ್ದಾರೆ. ಆದರೆ, ಇಂತಹ ಸರ್ಕಾರ‌ ಬರಲು ಕಾರಣರಾದವರು ‌ಆತ್ಮಾವಲೋಕನ ಮಾಡಿಕೊಳ್ಳಬೇಕು’ ಎಂದು ಜೆಡಿಎಸ್ ಶಾಸಕಾಂಗ ಪಕ್ಷದ‌ ನಾಯಕ ಎಚ್.ಡಿ. ಕುಮಾರಸ್ವಾಮಿ ಹೇಳಿದರು.

ಗುಳೇದಗುಡ್ಡದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ‌ ಅವರು, ‘ಸರ್ಕಾರ ರಚನೆಗೆ ಸಹಕರಿಸಿ, ಈಗ‌ ಟೀಕೆ ಮಾಡಿಕೊಂಡು ತಿರುಗಾಡುತ್ತಿದ್ದಾರೆ‌’ ಎಂದು ಲೇವಡಿ ಮಾಡಿದರು.

‘ಸಚಿವ ಮಾಧುಸ್ವಾಮಿ ಮಾನಸಿಕ ಸ್ಥಿಮಿತ ಕಳೆದುಕೊಂಡಿದ್ದಾರೆ. ಕುಟುಂಬದವರೆಲ್ಲ ಲೂಟಿ ಹೊಡೆಯುತ್ತಿದ್ದಾರೆ ಎಂದು ಆರೋಪಿಸಿದ್ದಾರೆ. ಯಾರು ಲೂಟಿ ಮಾಡುತ್ತಿ ದ್ದಾರೆ ಎಂಬುದು ಎಲ್ಲರಿಗೂ ಗೊತ್ತಿದೆ. ಜನ‌ ತೀರ್ಮಾನ ಮಾಡಲಿದ್ದಾರೆ’ ಎಂದರು.

‘ದೇವೇಗೌಡ್ರು ಹೇಮಾವತಿ ಜಲಾಶಯ ಕಟ್ಟದಿದ್ದರೆ ಏನಾಗುತ್ತಿತ್ತು? ಜಲಾಶಯ ಇರದಿದ್ದರೆ ಇವರೆಲ್ಲಿಂದ ನೀರು ತರುತ್ತಿದ್ದರು’ ಎಂದರು.

ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.

ಈ ವಿಭಾಗದಿಂದ ಇನ್ನಷ್ಟು