ಬಾಗಲಕೋಟೆ: ವಿಧಾನಸಭಾ ಚುನಾವಣೆಗೆ ಕಾಂಗ್ರೆಸ್ ಅಭ್ಯರ್ಥಿಗಳ ಮೊದಲ ಪಟ್ಟಿ ಬಿಡುಗಡೆ ಮಾಡಲಾಗಿದೆ. ಜಿಲ್ಲೆಯ ಎರಡು ಕ್ಷೇತ್ರಗಳಿಗೆ ಹೆಸರು ಘೋಷಿಸಲಾಗಿದೆ.
ಜಮಖಂಡಿ ಕ್ಷೇತ್ರದಿಂದ ಹಾಲಿ ಶಾಸಕ ಆನಂದ ನ್ಯಾಮಗೌಡ ಅವರಿಗೆ ಮತ್ತೆ ಟಿಕೆಟ್ ನೀಡಲಾಗಿದೆ. ಹುನಗುಂದ ಕ್ಷೇತ್ರದಿಂದ ಮಾಜಿ ಶಾಸಕ ವಿಜಯಾನಂದ ಕಾಶಪ್ಪನವರ ಅಭ್ಯರ್ಥಿಯಾಗಿದ್ದಾರೆ.
ರಾಜ್ಯದಲ್ಲಿ ಬಹುಚರ್ಚಿತ ವಿಧಾನಸಭಾ ಕ್ಷೇತ್ರ, ಹಾಲಿ ಶಾಸಕ ಸಿದ್ದರಾಮಯ್ಯ ಪ್ರತಿನಿಧಿಸುವ ಬಾದಾಮಿ ಕ್ಷೇತ್ರಕ್ಕೆ ಅಭ್ಯರ್ಥಿ ಘೋಷಿಸದಿರುವುದು ಚರ್ಚೆಗೆ ಕಾರಣವಾಗಿದೆ.
ಸಿದ್ದರಾಮಯ್ಯ ಹೆಸರನ್ನು ವರುಣಾ ಕ್ಷೇತ್ರಕ್ಕೆ ಘೋಷಿಸಿರುವುದರಿಂದ ಬಾದಾಮಿ ಕ್ಷೇತ್ರಕ್ಕೂ ಹೆಸರು ಘೋಷಣೆ ಮಾಡಬೇಕಿತ್ತು ಎಂಬುದು ಸ್ಥಳೀಯ ಕಾಂಗ್ರೆಸ್ ನಾಯಕರ ಅನಿಸಿಕೆ.
ಎರಡು ಕ್ಷೇತ್ರಗಳಿಂದ ಸ್ಪರ್ಧಿಸುವ ಜನಾಗ್ರಹದ ವಿಷಯವನ್ನು ಕಾಂಗ್ರೆಸ್ ಹೈಕಮಾಂಡ್ ಗಮನಕ್ಕೆ ತರುವುದಾಗಿ ಹೇಳಿರುವುದರಿಂದ ಬಾದಾಮಿಯಿಂದಲೂ ಸ್ಪರ್ಧಿಸಬಹುದು ಎಂಬ ಚರ್ಚೆಗೆ ಮುಂದುವರೆದಿದೆ.
ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ
ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್
ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.