ಶುಕ್ರವಾರ, ಜನವರಿ 27, 2023
26 °C
ಮದುವೆ ಮಾಡುವುದಾಗಿ ಕರೆಸಿ ಕೃತ್ಯ: ಬಾಲಕಿಯ ತಂದೆ, ಸಂಬಂಧಿಕರ ವಿರುದ್ಧ ಪ್ರಕರಣ

ಪ್ರಿಯಕರನ ಜತೆ ಮಗಳ ಕೊಲೆ | ಮರ್ಯಾದೆಗೇಡು ಹತ್ಯೆ ಶಂಕೆ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

Prajavani

ಬಾಗಲಕೋಟೆ: ಅನ್ಯಜಾತಿಯ ಯುವಕನನ್ನು ಪ್ರೀತಿಸಿದ್ದಳೆಂಬ ಕಾರಣಕ್ಕೆ ಮಗಳು ಹಾಗೂ ಆಕೆಯ ಪ್ರಿಯಕರನನ್ನು ತಂದೆ ಹತ್ಯೆ ಮಾಡಿರುವ ಘಟನೆ ತಾಲ್ಲೂಕಿನ ಬೇವಿನಮಟ್ಟಿಯಲ್ಲಿ ನಡೆದಿದೆ. ಹತ್ಯೆ ಬಳಿಕ ಮೃತದೇಹಗಳನ್ನು ಕೃಷ್ಣಾ ನದಿಗೆ ಎಸೆಯಲಾಗಿದ್ದು, ಮೃತದೇಹಗಳಿಗಾಗಿ ಪೊಲೀಸರು ಹುಡುಕಾಟ ಆರಂಭಿಸಿದ್ದಾರೆ.

ಹತ್ಯೆಗೆ ಸಂಬಂಧಪಟ್ಟಂತೆ ಬಾಗಲಕೋಟೆ ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಆರೋಪಿಗಳು ಎನ್ನಲಾದ ರವಿ ಹುಲ್ಲನ್ನವರ, ಹನಮಂತ ಮಲ್ಲಾಡದ ಹಾಗೂ ಬೀರಪ್ಪ ದಳವಾಯಿ ಅವರನ್ನು ಪೊಲೀಸರು ಬಂಧಿಸಿದ್ದಾರೆ. ಪ್ರಮುಖ ಆರೋಪಿ ಎನ್ನಲಾದ ಬಾಲಕಿಯ ತಂದೆ ಪರಸಪ್ಪ ಕರಡಿ ಸೇರಿದಂತೆ ನಾಲ್ವರು ತಲೆಮರೆಸಿಕೊಂಡಿದ್ದಾರೆ. ಕುರುಬ ಸಮಾಜದ 17 ವರ್ಷದ ಬಾಲಕಿ ರಾಜೇಶ್ವರಿ (ಹೆಸರು ಬದಲಾಯಿಸಲಾಗಿದೆ) ಹಾಗೂ ವಾಲ್ಮೀಕಿ ಸಮಾಜದ ವಿಶ್ವನಾಥ ನೆಲಗಿ ಇಬ್ಬರೂ ಪ್ರೀತಿಸುತ್ತಿದ್ದರು.

ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.

ಈ ವಿಭಾಗದಿಂದ ಇನ್ನಷ್ಟು