ಮಂಗಳವಾರ, 30 ಮೇ 2023
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಶಿಖಂಡಿ ಬಸ್ಯಾ ನಡುಬೀದಿಯಲ್ಲಿ ಬೆತ್ತಲಾಗುವ ಕಾಲ ಬಂದಿದೆ: ನಿರಾಣಿ ಸಹೋದರ ವಾಗ್ದಾಳಿ

Last Updated 15 ಜನವರಿ 2023, 13:19 IST
ಅಕ್ಷರ ಗಾತ್ರ

ಬಾಗಲಕೋಟೆ: ಶಿಖಂಡಿ ಬಸ್ಯಾ ನಡುಬೀದಿಯಲ್ಲಿ ಬೆತ್ತಲಾಗುವ ಕಾಲ ಬಂದಿದೆ ಎಂದು ಸಚಿವ ಮುರುಗೇಶ ನಿರಾಣಿ ಸಹೋದರ ಸಂಗಮೇಶ ನಿರಾಣಿ, ಶಾಸಕ ಬಸನಗೌಡ ಪಾಟೀಲ ಯತ್ನಾಳ ವಿರುದ್ಧ ವಾಗ್ದಾಳಿ ನಡೆಸಿದ್ದಾರೆ.

ಈ ಕುರಿತು ಟ್ವೀಟ್‌ ಮಾಡಿರುವ ಅವರು, ಬಾಯಿ ಹರುಕನಂತೆ ಮಾತನಾಡುವ ನಾಮರ್ಧ ನಿನ್ನದೇ ಭಾಷೆಯಲ್ಲಿಯೇ ಉತ್ತರ ನೀಡುತ್ತೇನೆ. ಒಬ್ಬ ಅಪ್ಪನಿಗೆ ಹುಟ್ಟದ ನಿನಗೆ ಅಂತ್ಯ ಹಾಡುವ ಕಾಲ ಬಂದಿದೆ ಎಂದಿದ್ದಾರೆ.

ನೇರ ಕಾದಾಟ ಕಣಕ್ಕೆ ಬಂದರೆ ನಿನ್ನ ತಾಕತ್ತು ತಿಳಿಯುತ್ತದೆ. ರಾಜಕೀಯ ಮರುಜನ್ಮ ಕೊಟ್ಟವರಿಗೆ ರಾಜಕೀಯ ಮರಣ ಶಾಸನ ಬರೆಯುವುದು ಗೊತ್ತಿದೆ ಎಂದು ಟೀಕಿಸಿದ್ದಾರೆ.

ಲಕ್ಷಾಂತರ ಜನರಿಗೆ ಅನ್ನ, ಆಶ್ರಯ, ಜೀವನ ಕೊಟ್ಟ ಧರ್ಮಾತ್ಮ ಮುರುಗೇಶ ನಿರಾಣಿಯವರ ತೇಜೋವಧೆಗೆ ನಿಂತ ಮುಠ್ಠಾಳರಿಗೆ ಕಾಲವೇ ಉತ್ತರ ನೀಡುತ್ತದೆ ಎಂದಿದ್ದಾರೆ.

ಮುರುಗೇಶ ನಿರಾಣಿ ಎಂಬ ಪ್ರಖರ ಸೂರ್ಯನೆದರು ಇಂತವರು ಭಸ್ಮವಾಗಿದ್ದಾರೆ ನೆನಪಿರಲಿ ಎಂದು ಎಚ್ಚರಿಸಿದ್ದಾರೆ.

ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.

ADVERTISEMENT
ADVERTISEMENT

ಇನ್ನಷ್ಟು ಸುದ್ದಿ

ಇನ್ನಷ್ಟು
ADVERTISEMENT
ADVERTISEMENT
ADVERTISEMENT
ಪ್ರಜಾವಾಣಿ ವಿಡಿಯೊ
ಸಿನಿಮಾ
ADVERTISEMENT