ಶುಕ್ರವಾರ, 19 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಬಾಗಲಕೋಟೆಯಲ್ಲಿ 8.6 ಡಿಗ್ರಿ ಸೆಲ್ಸಿಯಸ್ ಕನಿಷ್ಠ ತಾಪಮಾನ ದಾಖಲು

Last Updated 17 ಜನವರಿ 2023, 2:29 IST
ಅಕ್ಷರ ಗಾತ್ರ

ಬೆಂಗಳೂರು: ರಾಜ್ಯದ ಹಲವೆಡೆ ಮತ್ತೆ ಚಳಿ ತೀವ್ರಗೊಂಡಿದ್ದು, ಮುಂಜಾನೆಯ ಚಳಿ ಮೈನಡುಗಿಸುತ್ತಿದೆ.

ಬಾಗಲಕೋಟೆಯಲ್ಲಿ ಸೋಮವಾರ ಕನಿಷ್ಠ ಉಷ್ಣಾಂಶ 8.6 ಡಿಗ್ರಿ ಸೆಲ್ಸಿಯಸ್ ದಾಖಲಾಗಿದೆ.

ಮುಂದಿನ 48 ಗಂಟೆಯಲ್ಲಿ ಒಳನಾಡಿನ ಹಲವು ಸ್ಥಳಗಳಲ್ಲಿ ಉಷ್ಣಾಂಶವು ಸಾಮಾನ್ಯಕ್ಕಿಂತ 5ರಿಂದ 6 ಡಿಗ್ರಿ ಸೆಲ್ಸಿಯಸ್‌ ಕಡಿಮೆಯಾಗುವ ಸಾಧ್ಯತೆಯಿದೆ ಎಂದು ಹವಾಮಾನ ಇಲಾಖೆ ತಿಳಿಸಿದೆ.

ಬೆಂಗಳೂರಿನಲ್ಲಿ ಮುಂದಿನ ಎರಡು ದಿನ ಹಗಲು ವೇಳೆ ಭಾಗಶಃ ಮೋಡ ಕವಿದ ವಾತಾವರಣ ಇರಲಿದೆ. ಬೆಳಿಗ್ಗೆ ದಟ್ಟ ಮಂಜು ಕವಿದ ವಾತಾವರಣ ಇರಲಿದ್ದು ಗರಿಷ್ಠ 30 ಡಿಗ್ರಿ ಸೆಲ್ಸಿಯಸ್‌, ಕನಿಷ್ಠ 13 ಡಿಗ್ರಿ ಸೆಲ್ಸಿಯಸ್ ತಾಪಮಾನ ದಾಖಲಾಗುವ ಸಾಧ್ಯತೆಯಿದೆ ಎಂದು ತಿಳಿಸಿದೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT